ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಕಲ್ಪಿಸಿ
ಬ್ಯಾಂಕ್ ಅಧಿ ಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ
Team Udayavani, Feb 18, 2021, 5:18 PM IST
ದಾವಣಗೆರೆ : ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಸ್ಥರ ಆತ್ಮನಿರ್ಭರ್ ಯೋಜನೆಯಡಿ (ಪಿಎಂ ಸ್ವನಿಧಿ ಯೋಜನೆ) ನಗರ, ಪಟ್ಟಣ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ವಿಳಂಬ ಮಾಡದೆ ಕೂಡಲೇ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಬ್ಯಾಂಕ್ ಅಧಿ ಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಎಂ ಸ್ವನಿ ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಎಂ ಸ್ವನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 7,985 ಬೀದಿಬದಿ ವ್ಯಾಪಾರಸ್ಥರಿಗೆ ಒಂದು ಬಾರಿ ತಲಾ 10 ಸಾವಿರ ರೂ. ಸಾಲ ನೀಡುವ ಯೋಜನೆ ಇದೆ. ಸಾಲವನ್ನು ನಿಗದಿತ ಅವ ಧಿಯೊಳಗೆ ಮರು ಪಾವತಿಸುವವರಿಗೆ 1 ಸಾವಿರ ರೂ. ಪ್ರೋತ್ಸಾಹಧನ ನೀಡಲು ಅವಕಾಶವಿದೆ ಎಂದು ತಿಳಿಸಿದರು.
ಬೀದಿಬದಿ ವ್ಯಾಪಾರಿಗಳು ಅಂದೇ ದುಡಿದು, ಜೀವನ ಸಾಗಿಸುವ ಶ್ರಮ ಜೀವಿಗಳು. ಅಂತಹವರಿಗಾಗಿಯೇ ಯೋಜನೆ ರೂಪಿಸಲಾಗಿದೆ. ಹತ್ತು ಸಾವಿರ ರೂಪಾಯಿ ಬದುಕು ಸಾಗಿಸಲು ಉತ್ತೇಜನ ನೀಡುವಂತಹದ್ದು. ಜಿಲ್ಲೆಯಲ್ಲಿ ಈವರೆಗೆ 7,643 ಜನ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದು, 4,419 ಜನರಿಗೆ ಸಾಲ ಮಂಜೂರಾಗಿದ್ದರೆ, 2362 ಜನರಿಗೆ ಸಾಲದ ಮೊತ್ತ ವಿತರಣೆಯಾಗಿದೆ. ಹೀಗಾಗಿ ಮಂಜೂರಾತಿ ಬಾಕಿ ಉಳಿದಿದ್ದಲ್ಲಿ
ಅರ್ಹ ಫಲಾನುಭವಿಗಳಿಗೆ ಕೂಡಲೆ ಸಾಲ ಮಂಜೂರಾಗಬೇಕು.ಈವರೆಗೆ ಮಂಜೂರಾಗದ ಅಥವಾ ಸಾಲ ಸೌಲಭ್ಯ ವಿತರಣೆಯಾಗದ
ಫಲಾನುಭವಿಗಳ ಬಗ್ಗೆ ಯಾವುದೇ ತೊಂದರೆಗಳಿದ್ದಲ್ಲಿ, ನಗರ, ಸ್ಥಳೀಯ ಸಂಸ್ಥೆ ಅಧಿ ಕಾರಿಗಳು, ಅರ್ಹರಿಗೆ ಸೌಲಭ್ಯ ವಿತರಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಆಕ್ಸಿಸ್ ಬ್ಯಾಂಕ್ 15 ಜನರಿಗೆ ಸಾಲ ಸೌಲಭ್ಯ ಮಂಜೂರು ಮಾಡಬೇಕಾದ ಗುರಿಗೆ ಇದುವರೆಗೂ ಒಂದು ಫಲಾನುಭವಿಗೂ ಸಾಲ ವಿತರಿಸದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿ ಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಒಂದು ವಾರದ ಒಳಗಾಗಿ ಎಲ್ಲ ಫಲಾನುಭವಿಗಳಿಗೂ ಸಾಲ ಸೌಲಭ್ಯ ಮಂಜೂರು ಮಾಡದಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಶ್ರುತ್ ಶಾಸ್ತ್ರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಭಿಯಾನ ವ್ಯವಸ್ಥಾಪಕ ಬಸವರಾಜ್, ವಿವಿಧ ಬ್ಯಾಂಕ್‌ಗಳ ಅಧಿ ಕಾರಿಗಳು ಇದ್ದರು.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.