Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Team Udayavani, Dec 20, 2024, 5:37 PM IST
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ಹೊಂದಾಣಿಕೆಯಾಗಿಲ್ಲ. ನಮ್ಮ ಪಕ್ಷದ ಸಿದ್ಧಾಂತವೇ ಬೇರೆ. ಕಾಂಗ್ರೆಸ್ ಸಿದ್ಧಾಂತವೇ ಬೇರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಶುಕ್ರವಾರ (ಡಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ. ಯಾರೂ ಆ ರೀತಿ ಪತ್ರ ಬರೆದಿದ್ದಾರೋ ಅವರನ್ನೇ ಹೊಂದಾಣಿಕೆ ರಾಜಕಾರಣದ ಬಗ್ಗೆ ಕೇಳಬೇಕು ಎಂದರು.
ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದು ಅಷ್ಟೇ ಸತ್ಯ. ವಿಜಯೇಂದ್ರ ಅವರು ಒಂದು ವರ್ಷದಲ್ಲಿ ನಡೆಸಿರುವ ಹೋರಾಟ, ಸಂಘಟನೆಯ ಬಗ್ಗೆ ದೆಹಲಿ ನಾಯಕರಿಗೆ ತಿಳಿಸಲು ದೆಹಲಿಗೆ ತೆರಳಿದ್ದಾಗಿ ತಿಳಿಸಿದರು.
ಸಿ.ಟಿ. ರವಿ ಅವರು ದತ್ತ ಪೀಠದ ಹೋರಾಟದಲ್ಲಿ ಭಾಗಿಯಾಗುವರು. ಆರ್ಎಸ್ಸೆಸ್ನಲ್ಲಿ ಸಂಸ್ಕಾರ, ಸಂಸ್ಕೃತಿ ಕಲಿತು ಬೆಳೆದವರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಿಕ್ಷಣ ಸಚಿವರಾಗಿದ್ದವರು. ಅಂತವರು ಅಂತಹ ಪದ ಬಳಕೆ ಮಾಡುವವರೇ ಅಲ್ಲ. ಭ್ರಷ್ಟಾಚಾರ ಮುಂತಾದ ವಿಷಯಗಳ ವಿಷಯಾಂತರ ಮಾಡಲು ಈ ರೀತಿ ಮಾಡಲಾಗುತ್ತಿದೆ. ಅವರ ವಿರುದ್ಧದ ಎಲ್ಲ ಮೊಕದ್ದಮೆ ರದ್ಧುಪಡಿಸುವ ಜೊತೆಗೆ ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.