ದಾಖಲೆಗಳ ಭದ್ರತೆಗೆ ರಾಜ್ಯದಲ್ಲಿ ʼಶೈಕ್ಷಣಿಕ ಡಿಜಿ ಲಾಕರ್ʼ ವ್ಯವಸ್ಥೆಗೆ ಚಿಂತನೆ; ಡಿಸಿಎಂ
Team Udayavani, Jan 6, 2021, 6:03 PM IST
ಬೆಂಗಳೂರು: ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ತರಲು ಉನ್ನತ ಶಿಕ್ಷಣ ಸಚಿವರೂ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ ಎಂದರು.
ಮುಂದಿನ ದಿನಗಳಲ್ಲಿ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಎಂದ ಅವರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್‌ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಎಂದಿದ್ದಾರೆ.
ಇದನ್ನೂ ಓದಿ:ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ
ಏನಿದು ಶೈಕ್ಷಣಿಕ ಡಿಜಿ ಲಾಕರ್?
ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD) ಎಂದು ಕರೆಯಲಾಗುತ್ತದೆ.
ಶೈಕ್ಷಣಿಕ ಡಿಜಿ ಲಾಕರ್ ಆಕ್ಸಸ್ ಹೇಗೆ?
ಅಂದಹಾಗೆ ಈ ಲಾಕರ್‌ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್ ಸಂಖ್ಯೆ ಮೂಲಕ National Academic Depository-NAD ಪೋರ್ಟಲ್‌ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ತುಂಬಿ ಅಪ್‌ಲೋಡ್ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.