ರೈತರ ನೂರಾರು ಟನ್ ಹಣ್ಣು ತರಕಾರಿಗೆ ನೇರ ಮಾರುಕಟ್ಟೆ
Team Udayavani, Apr 29, 2020, 7:48 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರೈತರು ಬೆಳೆದ ಹಣ್ಣು, ತರಕಾರಿಗಳನ್ನು ನೇರ ಮಾರುಕಟ್ಟೆ ಮೂಲಕ ಮಾರಾಟಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಅಗ್ರಿವಾರ್ ಘಟಕ ವ್ಯವಸ್ಥೆ ಮಾಡುತ್ತಿದ್ದು, ನೂರಾರು ಟನ್ ಹಣ್ಣು, ತರಕಾರಿಗಳನ್ನು ಈವರೆಗೆ ಮಾರಾಟ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜ ನಗರ ಹಾಗೂ ರಾಮನಗರದಲ್ಲಿ ರೈತರಿಗೆ ಸಹಕಾರಿಯಾಗುವಂತೆ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯ ಮೂಲಕವಾಗಿ ಕೃಷಿ ಇಲಾಖೆ, ಹಾಪ್ ಕಾಮ್ಸ್, ರೈತರ ಸಂಘಟನೆ ಮೂಲಕ ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಇದಕ್ಕಾಗಿಯೇ ಕೆಲವೊಂದು ಪ್ರದೇಶ, ಅಪಾರ್ಟ್‌ಮೆಂಟ್ ಇತ್ಯಾದಿಗಳನ್ನು ಗುರುತಿಸಿದ್ದೇವೆ ಎಂದು ಅಗ್ರಿವಾರ್ ನೋಡಲ್ ಅಧಿಕಾರಿ ಡಾ.ಎನ್.
ಎಸ್.ಶಿವಲಿಂಗೇಗೌಡ ಮಾಹಿತಿ ನೀಡಿದರು.
ಈವರೆಗೂ ಅಗ್ರಿವಾರ್ ಘಟಕ ಮತ್ತು ಬೆಂಗಳೂರು ವಿವಿ ವ್ಯಾಪ್ತಿಯ ಹತ್ತು ಜಿಲ್ಲಾವಾರ ಸಮನ್ವಯ ಸಮಿತಿಗಳಿಂದ ರೈತರು ಬೆಳೆದ ನೂರಾರು ಟನ್ ಹಣ್ಣು ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರ ನೀಡಿದರು. ಇದರ ಜತೆಗೆ ರೈತರಿಗೆ ಸದ್ಯ ಅಗತ್ಯವಿರುವ ಬಿತ್ತನೆ ಬೀಜದ ಮಾಹಿತಿ, ಗೊಬ್ಬರದ ಮಾಹಿತಿ ಸಹಿತವಾಗಿ ತಾಂತ್ರಿಕ ಮಾಹಿತಿಯನ್ನು ಒದಗಿ ಸುತ್ತಿದ್ದೇವೆ. ನೂರಾರು ಟನ್‌ಗಳಷ್ಟು ಹಣ್ಣು, ತರಕಾರಿ ಮಾರಾಟ ಮಾಡಲಾಗಿದೆ ಎಂದರು.
ಹಣ್ಣು ತರಕಾರಿ ರಫ್ತು: ನಾರಾಯಣಗೌಡ
ಬೆಂಗಳೂರು: ಹೊರ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ಹಣ್ಣು, ತರಕಾರಿ ರಫ್ತು ಪ್ರಾರಂಭ ವಾಗಿದೆ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ವಿಮಾನ ಸೇವಾ ಸಂಸ್ಥೆಗಳ ಜತೆ ಮಾತುಕತೆ ನಡೆಸಿದ ನಂತರ ಮಾತ ನಾಡಿದ ಅವರು, ಕಳೆದ ಒಂದು ವಾರದಿಂದ ಕೈಗೊಂಡ ಹಲವು ಕ್ರಮಗಳಿಂದ ಒಂದಷ್ಟು ಪ್ರಮಾಣದಲ್ಲಿ ಹೊರ ರಾಜ್ಯಗಳಿಗೆ ಹಣ್ಣು, ತರಕಾರಿ ಸಾಗಾಟವಾಗುತ್ತಿದೆ. ಪಕ್ಕದ ರಾಜ್ಯದ ಸಂಸ್ಕರಣಾ ಘಟಕಕ್ಕೂ ಟೊಮೆಟೋ, ಮಾವು ಸರಬರಾಜಾಗುತ್ತಿದೆ.
ಡಿಸ್ಟಿಲರಿ, ವೈನರಿ ಸೇರಿದಂತೆ ಸಾಧ್ಯವಿರುವ ಕಡೆಗಳಿಗೆ ಹಣ್ಣುಗಳನ್ನ ಕಳುಹಿಸುವ ಪ್ರಯತ್ನ ಮಾಡಲಾಗುತ್ತಿದೆ. ವಿದೇಶಕ್ಕೆ ಹಣ್ಣು, ತರಕಾರಿ ರಫ್ತು ಮಾಡಲಾಗುತ್ತಿದೆಯಾದರೂ ದೊಡ್ಡ ಪ್ರಮಾಣದಲ್ಲಿ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಫಾರ್ವಡ್ ಏಜೆನ್ಸಿ, ಕಾರ್ಗೊ ಹ್ಯಾಂಡ್ಲರ್ ಜೊತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ರಫ್ತುಗೆ ಇರುವ ಸಮಸ್ಯೆ ಬಗ್ಗೆ ಹೇಳಿದ್ದು, ಮುಖ್ಯಮಂತ್ರಿಯವರ ಮೂಲಕ ಕೇಂದ್ರ ಸರ್ಕಾರದ ಜೊತೆ ಶೀಘ್ರವೇ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನವರು ಮೊದಲು ತಿಂಗಳವರೆಗೆ ಕ್ರೆಡಿಟ್ ನೀಡಿ ಹಣ್ಣು ತರಕಾರಿ ರಫ್ತು ಮಾಡ್ತಿದ್ರು. ಈಗ ಕ್ರೆಡಿಟ್ ನೀಡುತ್ತಿಲ್ಲ. ಜೊತೆಗೆ ದರ ಕೂಡ ಏರಿಕೆ ಮಾಡಿದ್ದಾರೆ. ಇದರಿಂದ ರಾಜ್ಯದ ಹಣ್ಣು, ತರಕಾರಿ ರಫ್ತು ಕಠಿಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.