ದ.ಕ.: ಕೋವಿಡ್- 19 ಪಾಸಿಟಿವ್ ಇಲ್ಲ
Team Udayavani, Apr 29, 2020, 5:35 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಯಾವುದೇ ಕೋವಿಡ್ 19 ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಸ್ವೀಕರಿಸಿದ ಒಟ್ಟು 101 ಗಂಟಲ ದ್ರವ ಮಾದರಿಗಳ ವರದಿ ನೆಗೆಟಿವ್ ಆಗಿವೆ.
ಒಟ್ಟು 297 ಮಾದರಿಗಳನ್ನು ಪರೀಕ್ಷೆಗಾಗಿ ಮಂಗಳವಾರ ಕಳುಹಿಸಲಾಗಿದ್ದು, 536 ವರದಿಗಳು ಬರಲು ಬಾಕಿ ಇವೆ. 46 ಮಂದಿಯನ್ನು ಹೊಸದಾಗಿ ತಪಾಸಣೆ ಗೊಳಪಡಿಸಲಾಗಿದ್ದು, 9 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಗಾಗಿ ಐವರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಎನ್ಐಟಿಕೆಯಲ್ಲಿ ಒಟ್ಟು 59 ಮಂದಿ ಕ್ವಾರಂಟೈನ್ನಲ್ಲಿದ್ದು, 40 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಇವರಲ್ಲಿ 8 ಮಂದಿ ಹೊಸದಾಗಿ ದಾಖಲಾದವರು.
ವೃದ್ಧೆಗೆ ಆರೋಗ್ಯ ಸ್ಥಿರ
ಕೋವಿಡ್ 19 ದೃಢಪಟ್ಟಿರುವ ಬಂಟ್ವಾಳ ಕಸಬಾದ 67 ವರ್ಷದ ವೃದ್ಧೆಗೆ ವೆನಾÉಕ್ ಕೋವಿಡ್-19 ಆಸ್ಪತ್ರೆಯಲ್ಲಿ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಕೆಯೊಂದಿಗೆ ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಯಥಾಸ್ಥಿತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಉಳಿದ ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.