ಮುಂದಿನ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ

Team Udayavani, Mar 13, 2021, 8:26 PM IST

ಮುಂದಿನ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಶಿವಮೊಗ್ಗ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಶಾಸಕರು ಗೆಲ್ಲಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಶಿವಮೊಗ್ಗದಲ್ಲಿ‌ ನಡೆಯುತ್ತಿರುವ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಇಂದು ಶಿವಮೊಗ್ಗದಲ್ಲಿ‌ ನಡೆಯುತ್ತಿರುವ ಸಭೆ ರಾಜ್ಯ ರಾಜಕಾರಣದ ಬದಲಾವಣೆಯ ಸಭೆ.ಇದು ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ರಕ್ಷಣೆಗಾಗಿ ನಡೆಯುವ ಸಭೆ ಎಂದಿದ್ದಾರೆ.

ಬಿಜೆಪಿಯವರು ನನ್ನ ಮೇಲೆ ಇಡಿ‌ ಕೇಸ್ ಹಾಕಿಸಿ ಬಂದನವಾಗುವಂತೆ ಮಾಡಿದ್ದರು. ನನ್ನ ಮೇಲೆ ಇಡಿ, ಐಟಿ, ಬೇನಾಮಿ ಆಸ್ತಿ, ಸಿಬಿಐ ಕೇಸ್ ಹಾಕಿಸಿ‌ ನನ್ನನ್ನು ಬಂಧಿಸಿದಾಗ ಮೊದಲು ಹೋರಾಟ ಆರಂಭಿಸಿದ ಜನ ಶಿವಮೊಗ್ಗದವರು. ಇದಕ್ಕಾಗಿಯೇ ನನಗೆ ಶಿವಮೊಗ್ಗ ಮೇಲೆ ವಿಶೇಷ ಪ್ರೀತಿ ಹಾಗೂ ಗೌರವ ಎಂದು ಹೇಳಿದ ಅವರು ಬಂಗಾರಪ್ಪನವರ ಗರಡಿಯಲ್ಲಿ‌ ನಾನು ಬೆಳೆದಿದ್ದೇನೆ ಇದೀಗ ಮಧುಬಂಗಾರಪ್ಪ ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಗೆ ಬರುವುದಾಗಿ ಹೇಳಿದ್ದಾರೆ ಎಂದರು.

ದೇಶ ಹಾಗೂ ರಾಜ್ಯದಲ್ಲಿ ಬದಲಾವಣೆಯ ಅಗತ್ಯತೆ ಇದೆ. ಅಧಿಕಾರ ಯಾರದ್ದೂ ಶಾಶ್ವತವಲ್ಲ, ಸರ್ಕಾರಗಳು ರಾತ್ರೋ ರಾತ್ರಿ ಬದಲಾಗುತ್ತವೆ.

ಇದನ್ನೂ ಓದಿಪ್ರತಿಯೊಬ್ಬರು ಕೋವಿಡ್‌ ಲಸಿಕೆ ಪಡೆಯಿರಿ: ಶಾಸಕ ಮುದ್ನಾಳ

ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕೆಲಸಮಾಡಬೇಕು. ಆದರೆ ಇಂದು ಪೊಲೀಸರು ಕಾನೂನು ಚೌಕಟ್ಟಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂದು ಗುಡುಗಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನುಡಿದಂತೆ ನಡೆಯಲು ಆಗಲಿಲ್ಲ. ಕರೋನಾ ಸಂದರ್ಭದಲ್ಲಿಯೂ ಸರ್ಕಾರಗಳು ಬಡವರಪರ ಬರಲಿಲ್ಲ. ಬಿಜೆಪಿ ಸರಕಾರ ಹಾಸಿಗೆ ದಿಂಬು ಔಷದಿಯಲ್ಲಿ ನಾಲ್ಕು ಸಾವಿರ ಕೋಟಿ ರೂಪಾಯಿ ನುಂಗಿ ನೀರು ಕುಡಿದಿದ್ದಾರೆ ಎಂದರು.

ಮಾತು ಮುಂದುವರೆಸಿ ಯಾವನೋ ತಗಡು ಕಂಪ್ಲೇಟ್ ಕೊಟ್ಟ ಎಂದಾಕ್ಷಣ‌ ಸಾಗರ ಪೊಲೀಸರು ಸೋನಿಯಾ ಗಾಂದಿ ಮೇಲೆ‌ ಎಫ್ ಐ ಆರ್ ದಾಖಲಿಸಿದ್ದರು. ಯಾವುದನ್ನೂ ನಾವು ಮರೆತಿಲ್ಲ. ಸೋನಿಯಾ ಗಾಂಧಿ ಮೇಲೆ ಪ್ರಕರಣ ದಾಖಲಿಸಿದವರಿಗೆ ಸಂಗಮೇಶ್ ಮೇಲೆ ಪ್ರಕರಣ‌ ದಾಖಲಿಸುವುದು ಕಷ್ಟವಲ್ಲ ಬಿಡಿ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ : ‘ಬಾಂಬೆ ಬೇಗಮ್ಸ್’ ಪ್ರಸಾರ ರದ್ದುಗೊಳಿಸುವಂತೆ ನೆಟ್ ಫ್ಲಿಕ್ಸ್ ಗೆ  NCPCR ನೋಟಿಸ್

ರೈತರಿಗೆ ಭೂಮಿ‌ ನೀಡುವವರು ಕಾಂಗ್ರೆಸ್ಸಿಗರು, ರೈತರ ಭೂಮಿ ಕಿತ್ತುಕೊಂಡು‌‌ ಮಾರುವವರು ಬಿಜೆಪಿಯವರು. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ. ಕಾಂಗ್ರೆಸ್ಸಿನದು ರಾಷ್ಟ್ರೀಕರಣ ನೀತಿ. ಬಿಜೆಪಿಯದ್ದು ಖಾಸಗಿಕರಣ ನೀತಿ. ರಾಜ್ಯದಲ್ಲಿ ಬಿಜೆಪಿಯ ಅಂತ್ಯ ಶಿವಮೊಗ್ಗದಿಂದಲೇ‌ ಆರಂಭಗೊಳ್ಳಬೇಕು. ಇದಕ್ಕಾಗಿಯೇ ಶಿವಮೊಗ್ಗದಿಂದಲೇ‌ ಹೋರಾಟ ಆರಂಭಿಸಿದ್ದೇವೆ ಎಂದು ಸರಕಾರದ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.