ಶಿಕ್ಷಣ ಸಂಸ್ಥೆಗಳು ಬದುಕಿಗೆ ಬೆಳಕಾಗಲಿ: ಸುಬ್ರಹ್ಮಣ್ಯ ಶ್ರೀ

Team Udayavani, May 31, 2019, 6:00 AM IST

subra

ಅಜೆಕಾರು: ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಭವಿಷ್ಯ ರೂಪಿಸುವ ಕೇಂದ್ರ ಗಳಾಗಿ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಬೇಕು. ಈ ನಿಟ್ಟಿನಲ್ಲಿ ಜ್ಞಾನ ಸುಧಾ ಕಾಲೇಜು ದಿಟ್ಟ ಹೆಜ್ಜೆಯನ್ನಿಟ್ಟಿದ್ದು ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿ ರೂಪುಗೊಂಡಿದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅಜೆಕಾರು ಪದ್ಮಗೋಪಾಲ ಎಜುಕೇಶನ್‌ ಟ್ರಸ್ಟ್‌ ಮತ್ತು ಕಾರ್ಕಳ ಗಣಿತನಗರ ಜ್ಞಾನಸುಧಾ ಸಂಸ್ಥೆಗಳಆಶ್ರಯದಲ್ಲಿ ಸಂಸ್ಥೆಯ ಸಭಾಂಗಣ ದಲ್ಲಿ ನಡೆದ ಶ್ರೀ ಮಹಾಗಣಪತಿ ದೇವಸ್ಥಾನದ 6ನೇ ಪ್ರತಿಷ್ಠಾ ಮಹೋತ್ಸವ ಮತ್ತು ಜ್ಞಾನಸುಧಾ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಬದುಕಿಗೆ ಲೌಕಿಕ ಶಿಕ್ಷಣದ ಜತೆಗೆ ಅಧ್ಯಾತ್ಮ ಶಿಕ್ಷಣವೂ ಅಗತ್ಯ, ಇದನ್ನು ಮನಗಂಡ ಡಾ| ಸುಧಾಕರ ಶೆಟ್ಟಿ ಅವರು ಶಿಕ್ಷಣ ಸಂಸ್ಥೆಯ ವಠಾರದಲ್ಲಿಯೇ ದೇವಸ್ಥಾನ ನಿರ್ಮಿಸಿ ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಮಾಡಿದ್ದಾರೆ. ಹೆತ್ತವರೂ ಸಹ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು ಆಗ ವಿದ್ಯಾರ್ಥಿಯು ರಾಷ್ಟ್ರೀಯ ಸಂಪತ್ತಾಗುತ್ತಾನೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಜೆಕಾರು ಪದ್ಮಗೋಪಾಲ್ ಎಜುಕೇಶನ್‌ ಟ್ರಸ್ಟ್‌ನ ಸದಸ್ಯ ಗಣಪತಿ ಪೈ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಬೇಕೆಂಬ ಉದ್ದೇಶ ದಿಂದ ಈ ಸಂಸ್ಥೆ ನಿರ್ಮಾಣಗೊಂಡಿದೆ ಎಂದರು.

ಮುಖ್ಯ ಅತಿಥಿ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಮಾತನಾಡಿ ಶಿಕ್ಷಣದ ಜತೆಗೆಮಾನವೀಯ ಮೌಲ್ಯ ಬೆಳೆಸುವ ಕಾರ್ಯವನ್ನು ಈ ಶಿಕ್ಷಣ ಸಂಸ್ಥೆ ಮಾಡುತ್ತಿರು ವುದು ಹೆಮ್ಮೆಯ ವಿಷಯ ಎಂದರು.

ಅಜೆಕಾರು ಪದ್ಮಗೋಪಾಲ್ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷರು, ಜ್ಞಾನಸುಧಾ ಕಾಲೇಜಿನ ಸಂಸ್ಥಾಪಕ ಡಾ| ಸುಧಾಕರ್‌ ಶೆಟ್ಟಿ ಪ್ರಸ್ತಾವಿಸಿದರು. ಟ್ರಸ್ಟಿಗಳಾದ ಕರುಣಾಕರ ಶೆಟ್ಟಿ, ಪ್ರಕಾಶ್‌ ಶೆಣೈ, ವಿದ್ಯಾ ಎಸ್‌. ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಅನಿಲ್ ಕುಮಾರ್‌ ಜೈನ್‌ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರದ ಪಟ್ಟಿಯನ್ನು ಶಿಕ್ಷಕರಾದ ಶಿಲ್ಪಾ, ರವಿ, ಸಂದೀಪ್‌, ಪ್ರಜ್ವಲ್ ಕುಲಾಲ್ ವಾಚಿಸಿದರು. ಡಾ| ಸುಧಾಕರ ಶೆಟ್ಟಿ ಸ್ವಾಗತಿಸಿದರು. ಸಂಗೀತ ಕುಲಾಲ್ ನಿರೂಪಿಸಿದರು. ಸಂಸ್ಥೆಯ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು.

ಸಂಸ್ಥೆಯ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ವಿಭಾಗದಲ್ಲಿ ವಿಷಯವಾರು ಶೇ. 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಶಿಕ್ಷಕರಿಗೆ ಸುಮಾರು 44 ಲಕ್ಷ ರೂ. ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಎಸ್‌ಎಸ್‌ಎಲ್ಸಿಯಲ್ಲಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ವಿದ್ಯಾರ್ಥಿ ಮನ್ವಿತ್‌ ಪ್ರಭು, ಬ್ಯಾಡ್‌ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿದ ನಿಯತಿ ಕೆ. ಶೆಟ್ಟಿ, ಪಿಎಚ್‌ಡಿ ಪದವಿ ಪಡೆದ ಡಾ| ಮಹಾದೇವ ಗೌಡ, ಕೋಚ್ ಸುಭಾಶ್‌ ಜೈನ್‌ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯಾ ಹೆಗ್ಡೆ, ಸಿಇಟಿಯಲ್ಲಿ ಉತ್ತಮ ರ್‍ಯಾಂಕ್‌ ಪಡೆದವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.