Election: ಬೇಗ ಚುನಾವಣೆ ನಡೆಸಲು ಮೀಸಲಾತಿ ಪಟ್ಟಿ ಕೊಡಿ: ಸರಕಾರಕ್ಕೆ ಆಯೋಗ ಪತ್ರ
ನನೆಗುದಿಗೆ ಬಿದ್ದಿರುವ ಜಿ.ಪಂ., ತಾ.ಪಂ., ಬಿಬಿಎಂಪಿ ಚುನಾವಣೆ
Team Udayavani, Aug 21, 2024, 6:20 AM IST
ಬೆಂಗಳೂರು: ಮೂರ್‍ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ರಾಜ್ಯದ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಅನುಕೂಲವಾಗುವಂತೆ ಮೀಸಲಾತಿ ಅಧಿಸೂಚನೆ ಹೊರಡಿಸಿ, ಅದನ್ನು ಆಯೋಗಕ್ಕೆ ಕಳಿಸಿಕೊಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯ ಚುನಾವಣ ಆಯೋಗ ಪತ್ರ ಬರೆದಿದೆ.
ರಾಜ್ಯದ ತಾ.ಪಂ.-ಜಿ.ಪಂ. ಹಾಗೂ ಬಿಬಿಎಂಪಿಗೆ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದಿರುವ ಕಾರಣಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನನ್ವಯ ಕೇಂದ್ರ ಸರಕಾರದಿಂದ ಬಿಡುಗಡೆಯಾಗಬೇಕಿದ್ದ ಸುಮಾರು 2,100 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ.
ಆದ್ದರಿಂದ ಚುನಾವಣೆ ಇಲ್ಲದ ಈ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ವಿಳಂಬವಿಲ್ಲದೆ ಚುನಾವಣೆ ನಡೆಸುವಂತೆ ಕೋರಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅವರು 2024ರ ಆಗಸ್ಟ್ 2ರಂದು ರಾಜ್ಯ ಚುನಾವಣ ಆಯೋಗಕ್ಕೆ ಬರೆದಿರುವ ಪತ್ರವನ್ನು ಉಲ್ಲೇಖೀಸಿ ರಾಜ್ಯ ಚುನಾವಣ ಆಯುಕ್ತ ಜಿ.ಎಸ್. ಸಂಗ್ರೇಶಿಯವರ ನಿರ್ದೇಶನದಂತೆ ಆಯೋಗದ ಕಾರ್ಯದರ್ಶಿ ಎಸ್. ಹೊನ್ನಾಂಬ ಅವರು ಆಗಸ್ಟ್ 17ರಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
ಈ ವಿಚಾರವಾಗಿ 2023ರ ಡಿ. 19ರಂದು ಹೈಕೋರ್ಟ್ ನೀಡಿರುವ ಆದೇಶದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಿಂದ ಚುನಾವಣ ಆಯೋಗಕ್ಕೆ ಯಾವುದೇ ಮಾಹಿತಿ ಬಂದಿಲ್ಲ. ಹಾಗಾಗಿ ನಿಗದಿತ ಕಾಲಮಿತಿಯಲ್ಲಿ ತಾ.ಪಂ., ಜಿ.ಪಂ. ಮೀಸಲಾತಿ ಕರಡು ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿ ಅದನ್ನು ಆಯೋಗಕ್ಕೆ ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ 2024ರ ಜ. 9ರಂದು ಚುನಾವಣ ಆಯೋಗ ಪತ್ರ ಬರೆದಿತ್ತು. ಈವರೆಗೆ ಯಾವುದೇ ಬೆಳವಣಿಗೆ ನಡೆದಿಲ್ಲ. ಈ ಮಧ್ಯೆ ರಾಜ್ಯ ಹಣಕಾಸು ಆಯೋಗ ಪತ್ರವನ್ನೂ ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.