ದೇಶದ ಏಳ್ಗೆಗೆ ಎಲ್ಲರೂ ಶ್ರಮಿಸಬೇಕಿದೆ:ಗುರುಸಿದ್ದ ಸ್ವಾಮಿಗಳು
Team Udayavani, Jan 31, 2024, 2:20 PM IST
ಉದಯವಾಣಿ ಸಮಾಚಾರ
ಬೆಳಗಾವಿ: ದೇಶದ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸಬೇಕು. ಧರ್ಮಗಳನ್ನು ಗೌರವಿಸಿ, ಪ್ರೀತಿಸುವ ಭಾವನೆಯನ್ನು ಬೆಳೆಸಿಕೊಂಡು ಒಗ್ಗಟ್ಟಾಗಿ ನಿಲ್ಲಬೇಕು. ಧರ್ಮಗಳ ಹೂದೋಟವಾಗಿರುವ ದೇಶದಲ್ಲಿ ಸೌಹಾರ್ದತೆಯ ಬದುಕಿನಿಂದ ಮಾತ್ರ ಪರಂಪರೆ ಬೇರು ಉಳಿಯಲು ಸಾಧ್ಯ ಎಂದು ಕಾರಂಜಿಮಠದ ಗುರುಸಿದ್ದ ಸ್ವಾಮಿಗಳು ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸೌಹಾರ್ದ ಕರ್ನಾಟಕ ವೇದಿಕೆಯ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಆಯೋಜಿಸಿದ್ದ ಸೌಹಾರ್ದತಾ ಮಾನವ ಸರಪಳಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಬೇಕಾಗಿದೆ. ಹೀಗಾಗಿ ಸರ್ವಧರ್ಮಗಳು ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೌಹಾರ್ದತೆಯ ದಾರಿಯಲ್ಲಿ ಸಾಗಬೇಕು ಎಂದರು.
ಸೌಹಾರ್ದತೆಯಿಂದ ಬಾಳಬೇಕೆಂದು ನೂರಾರು ವರ್ಷಗಳಿಂದ ಹೇಳಲಾಗುತ್ತಿದೆ. ಆದರೆ ಈ ಹೇಳಿಕೆಗಳು ಭಾಷಣಕ್ಕೆ ಮಾತ್ರ ಸೀಮಿತವಾಗಿವೆ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಸಮಾಜ ಸುಧಾರಕರು ಹಾಗೂ ಚಿಂತಕರು ಒಂದಾಗಿ ಸೌಹಾರ್ದತೆಯ ನೆಲೆಗಟ್ಟಿನಲ್ಲಿ ಸಾಗಬೇಕಿದೆ ಎಂದು ಹೇಳಿದರು.
ಮುಸ್ಲಿಂ ಸಮುದಾಯದ ಮೌಲಾನಾ ಮುಸ್ತಾಕ್ ಅಹಮ್ಮದ್ ಅಶ್ರಪಿ ಮಾತನಾಡಿ, ನೋಟಿನಲ್ಲಿ ರಾಮನ ಭಾವಚಿತ್ರ ಅಳವಡಿಸಿ
ದೇಶದ ಧರ್ಮಗಳನ್ನು ಬೇರೆ-ಬೇರೆ ಮಾಡಲಾಗುತ್ತಿದೆ. ಅದು ಸರಿಯಲ್ಲ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಗಾಂಧಿಜೀಯವರ
ಭಾವಚಿತ್ರ ಇದ್ದರೆ ಸೌಹಾರ್ದತೆಯ ನಾಡಾಗಲಿದೆ. ಧರ್ಮಗಳ ಒಲೈಕೆಗೆ ರಾಮನ ಹೆಸರು ಅಸ್ತ್ರ ಮಾಡಿಕೊಳ್ಳುವುದು ಬೇಸರದ ಸಂಗತಿ ಎಂದರು.
ಕ್ರೈಸ್ತ ಪಾದ್ರಿ ಡಾ. ಪಾಧರ್ ಮೆನಿನೊ ಗೋನ್ಸಾಲ್ವಿಸ್ ಮಾತನಾಡಿ, ಪ್ರಕೃತಿ ಸೌಂದರ್ಯವನ್ನು ಪ್ರೀತಿಸುವ ಉತ್ತಮ ವ್ಯಕ್ತಿ
ನಾವಾಗಬೇಕೇ ಹೊರತು ಪ್ರಕೃತಿ ನೀಡಿರುವ ಧರ್ಮಗಳನ್ನು ಒಂದೇ ಧರ್ಮಕ್ಕೆ ಸೀಮಿತಗೊಳಿಸಿ ನಾಡಿನಲ್ಲಿ ಸೌಹಾರ್ದತೆ ಹಾಳು ಮಾಡಬಾರದು ಎಂದು ಅಭಿಪ್ರಾಯಪಟ್ಟರು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮಾ ಗಾಂಧಿಜೀಯವರು ಸಮಾಜದ ಸುಧಾರಣೆಗೆ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ದೇವರನ್ನು ಕಾಣುವ ಮೂಲಕ ಎಲ್ಲವನ್ನೂ ಪ್ರೀತಿಯಿಂದ ನೋಡಬೇಕು. ಬಸವಣ್ಣನವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸೌಹಾರ್ದತೆಯ ಪರಂಪರೆಯನ್ನು ಉಳಿಸಬೇಕು. ಜಾತಿ, ಧರ್ಮಗಳನ್ನು ಬಿಟ್ಟು ಸಮಾಜದಲ್ಲಿ
ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು.
ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಿ ಎಮ್ ಜೈನೆಖಾನ್ ಮಾತನಾಡಿ, ಈಗ ಧರ್ಮ ಒಡೆಯುವ ಮನಸ್ಥಿತಿ ನಿರ್ಮಾಣವಾಗುತ್ತಿದೆ. ದೇವರ ಹೆಸರಿನಲ್ಲಿ ಧರ್ಮದ ಅಸ್ತ್ರಗಳನ್ನು ಬೀಸುವ ಯತ್ನವನ್ನು ನಾವೆಲ್ಲರೂ ಒಗ್ಗಟ್ಟಾಗಿದ್ದರೆ ತಡೆಯಬಹುದು ಎಂದರು.
ಬಂಡಾಯ ಸಾಹಿತಿ ಡಾ.ವಾಯ್ ಬಿ. ಹಿಮ್ಮಡಿ ಮಾತನಾಡಿ, ಮಹಾತ್ಮ ಗಾಂಧಿಯವರ ರಾಮನನ್ನು ಈಗ ದುರುಪಯೋಗ
ಮಾಡಿಕೊಳ್ಳುವ ಯತ್ನ ನಡೆಯುತ್ತಿದೆ. ಹೀಗಾಗಿ ರಾಮನಿಂದ ಸೀತೆ, ಲಕ್ಷ್ಮಣ, ಹನುಮಂತನನ್ನು ಅಗಲಿಸಿ ಕೇವಲ ರಾಮನನ್ನು ಮಾತ್ರ ಪ್ರತಿಷ್ಠಾನ ಮಾಡಲಾಗಿದೆ. ನಮಗೆ ಕುವೆಂಪು, ಕನಕದಾಸರ ರಾಮ ಬೇಕು ಎಂದು ಹೇಳಿದರು.
ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಭರಮಣ್ಣ ತೋಳಿ ಮಾತನಾಡಿ, ಎಲ್ಲಾ ಸಮುದಾಯದ ಜನರು ಸೌಹಾರ್ದ ಸಮಾಜದಲ್ಲಿ ಬದುಕಿ ಬಾಳಬೇಕಿದೆ. ಮಹಾತ್ಮಾ ಗಾಂಧೀಜಿಯವರ ವಿಚಾರ ಹಾಗೂ ಚಿಂತನೆಗಳನ್ನು ವಿಶ್ವವೇ ಗೌರವಿಸುವ
ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಅವರನ್ನು ವಿರೋಧಿಸುವ ಕೆಲಸಗಳು ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದರು.
ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್, ನಾಗೇಶ ಸಾತೇರಿ ಮೊದಲಾದವರು ಉಪಸ್ಥಿತರಿದ್ದರು. ಸಭೆಯ ನಂತರ ರಾಣಿ ಚನ್ನಮ್ಮ ವೃತ್ತದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯಿಂದ ಸೌಹಾರ್ದ ಮಾನವ ಸರಪಳಿ ಅಭಿಯಾನದಲ್ಲಿ ನೂರಾರು ಜನರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.