Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

ಭರವಸೆಗಳ ಸಮಿತಿ ಸಭೆಯಲ್ಲಿ ಇಲಾಖೆ ಮುಖ್ಯಸ್ಥರಿಗೆ ಅಧ್ಯಕ್ಷ ಟಿ.ಎ. ಶರವಣ ತಾಕೀತು

Team Udayavani, Jan 3, 2025, 10:46 PM IST

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

ಬೆಂಗಳೂರು: ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿನ ಆರ್ಥಿಕ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸದನಕ್ಕೆ ನೀಡಿದ ಭರವಸೆಯಂತೆ ತಪ್ಪಿತಸ್ಥರ ವಿರುದ್ಧ ಒಂದು ತಿಂಗಳಲ್ಲಿ ಕಾನೂನು ಕ್ರಮ ಜರಗಿಸಲು ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ತಾಕೀತು ಮಾಡಿದೆ.

ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಿತಿಯ ಸಭೆಯಲ್ಲಿ 2015ರಲ್ಲಿ ಸಾರಿಗೆ ಇಲಾಖೆಯಲ್ಲಿ ತೆರಿಗೆ ವಂಚಿಸಿ ಐಷಾರಾಮಿ ಕಾರುಗಳನ್ನು ಖರೀದಿಸಿದ ಹಾಗೂ 2017ರಲ್ಲಿ ಅಬಕಾರಿ ಇಲಾಖೆಯಲ್ಲಿನ ಹಣ ದುರುಪಯೋಗ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರಕಾರ ಸದನದಲ್ಲಿ ನೀಡಿದ್ದ ಭರವಸೆ ಹಾಗೂ ಅದರ ಮೇಲೆ ಇಲ್ಲಿವರೆಗೆ ಆಗಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು. ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ. ಶರವಣ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು “ಉದಯವಾಣಿ’ಗೆ ಮಾಹಿತಿ ನೀಡಿದ ಟಿ.ಎ.ಶರವಣ, ತೆರಿಗೆ ವಂಚಿಸಿ ಐಷಾರಾಮಿ ಕಾರುಗಳನ್ನು ಖರೀದಿಸಿದ ಪ್ರಕರಣ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ಆರ್‌ಟಿಒ ಕಚೇರಿಯಲ್ಲಿ ನಡೆದಿತ್ತು. ಎಫ್ಐಆರ್‌ ದಾಖಲಾಗಿ ತನಿಖೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ 1,470 ಕಡತಗಳು ನಾಪತ್ತೆಯಾಗಿದ್ದವು. ಈ ಪೈಕಿ 550 ಕಡತಗಳನ್ನು ಪತ್ತೆ ಹಚ್ಚಲಾಗಿದೆ. 32 ಕೋಟಿ ರೂ. ಅಕ್ರಮ ನಡೆದಿದೆ ಎಂದು ಸಿಎಜಿ ವರದಿ ಹೇಳಿದೆ. 2 ಕೋಟಿ ರೂ. ರಿಕವರಿ ಮಾಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ 2021ರಲ್ಲಿ ಅಂದಿನ ಸಾರಿಗೆ ಸಚಿವರು ಭರವಸೆ ನೀಡಿದ್ದರು. ಪ್ರಕರಣವು ಸರಕಾರಿ ಭರವಸೆಗಳ ಸಮಿತಿಗೆ ವರ್ಗಾವಣೆಗೊಂಡಿತ್ತು. ಅದರಂತೆ, ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಈವರೆಗಿನ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ 1 ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.

ಅದೇ ರೀತಿ ಅಬಕಾರಿ ಇಲಾಖೆಯಲ್ಲಿ 2017ರಲ್ಲಿ ನಡೆದಿದ್ದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡ ಬಗ್ಗೆ ಚರ್ಚಿಸಲಾಯಿತು. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ಸದನಕ್ಕೆ ಭರವಸೆ ನೀಡಿದ್ದರು. ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆಯ ಮೇಲಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಟಿ.ಎ. ಶರವಣ ಹೇಳಿದರು.

ಸೂಕ್ತ ಮಾಹಿತಿ ಜತೆ ಹಾಜರಾಗಿ: ಡಾ| ಶಾಲಿನಿ ರಜನೀಶ್‌
ವಿಧಾನಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸಭೆಗಳನ್ನು ಇಲಾಖಾ ಮುಖ್ಯಸ್ಥರು ಕಡೆಗಣಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದಶಿ ಡಾ| ಶಾಲಿನಿ ರಜನೀಶ್‌ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಸೂಕ್ತ ಮಾಹಿತಿಯೊಂದಿಗೆ ಕಡ್ಡಾಯ ಹಾಜರಾತಿಗೆ ಸೂಚಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವಿಧಾನಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಟಿ.ಎ. ಶವರಣ ಕಳೆದ ನವೆಂಬರ್‌ ತಿಂಗಳಲ್ಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದನ್ನು ಉಲ್ಲೇಖೀಸಿ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಜ.3ರಂದು ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.