ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Team Udayavani, Apr 25, 2024, 12:30 AM IST
ಹುಬ್ಬಳ್ಳಿ: ನೇಹಾ ಹಿರೇಮಠ ಹಂತಕ ಫಯಾಜ್‌ನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದು, ಸುಮಾರು ಮೂರೂವರೆ ತಾಸು ಘಟನ ಸ್ಥಳದ ಮಹಜರು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಾಹಿತಿ ಕಲೆ ಹಾಕಿದರು.
ಅಪರಾಧ ಕೃತ್ಯ ನಡೆದ ಇಲ್ಲಿನ ವಿದ್ಯಾನಗರದ ಕಾಲೇಜಿಗೆ ಹಂತಕ ನನ್ನು ಕರೆದುಕೊಂಡು ಬಂದು ಮಹಜರು ಆರಂಭಿಸಿದರು. ಕೃತ್ಯ ನಡೆದ ಸ್ಥಳದ ಸುತ್ತಲೂ ಅಳವಡಿಸಿದ್ದ ಸಿಸಿ ಕೆಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದರು.
ಮಹಜರು ವೇಳೆ ಫಯಾಜ್, ನೇಹಾಳನ್ನು ಕೊಲೆ ಮಾಡುವ ಉದ್ದೇಶ ದಿಂದ ಮೊದಲೇ ಚಾಕು ಖರೀದಿ ಮಾಡಿಕೊಂಡು ಬ್ಯಾಗ್ ನಲ್ಲಿಟ್ಟು ಕೊಂಡು ಅವಳ ಹತ್ಯೆಗೆ ಸಂಚು ರೂಪಿಸಿದ್ದೆ. ಎ. 18ರಂದು ನೇಹಾಳ ಬರುವಿಕೆಗಾಗಿ ಸುಮಾರು ಒಂದೂವರೆ ತಾಸು ಕಾಯ್ದು ಕೊಂಡು ನಿಂತಿದ್ದೆ. ಅವಳು ಪರೀಕ್ಷೆ ಮುಗಿಸಿಕೊಂಡು ಬರು ತ್ತಿದ್ದಂತೆ ಅವಳ ಹಿಂದೆ ಹೋಗಿ ಮಾತನಾಡಿಸಿದರೂ ಸ್ಪಂದಿಸ ದಿದ್ದಾಗ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಗಿ ಸಿಐಡಿ ಅಧಿಕಾರಿಗಳಿಗೆ ಫಯಾಜ್ ಮಾಹಿತಿ ಹಂಚಿಕೊಂಡಿದ್ದಾನೆಂದು ಹೇಳಲಾಗುತ್ತಿದೆ.
ಎಬಿವಿಪಿಯಿಂದ ಸಿಐಡಿ ಕಾರಿಗೆ ಮುತ್ತಿಗೆ ಯತ್ನ
ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ ಎಬಿವಿಪಿ ಕಾರ್ಯಕರ್ತರು ಪ್ರತಿ ಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಫಯಾಜ್‌ನನ್ನು ಕರೆದುಕೊಂಡು ಹೋಗುತ್ತಿದ್ದ ಕಾರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಪರಸ್ಪರ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲದಿದ್ದರೆ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಕಾರಾಗೃಹದಿಂದ ಸಿಐಡಿ ಪೊಲೀಸರ ವಶಕ್ಕೆ
ಧಾರವಾಡ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಜೈಲಿನಿಂದ ವಶಕ್ಕೆ ಪಡೆದರು. ಕೊಲೆಯಾದ ಅನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಫಯಾಜ್‌ನನ್ನು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಬುಧವಾರ ಬೆಳಗ್ಗೆಯೇ ಕಾರಾಗೃಹಕ್ಕೆ ಬಂದ ಸಿಐಡಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಕೇಂದ್ರ ಕಾರಾಗೃಹಕ್ಕೆ ವೈದ್ಯರನ್ನು ಕರೆಯಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದರು. ಅನಂತರ ಐದು ವಾಹನಗಳಲ್ಲಿ ಸೂಕ್ತ ಬಂದೋಬಸ್ತ್ ಮಧ್ಯೆ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದುಕೊಂಡು ಹುಬ್ಬಳ್ಳಿಯತ್ತ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.