![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2021, 6:20 PM IST
ಪಣಜಿ: ಕಳೆದ ತಿಂಗಳು ಸಮುದ್ರ ದಡದಲ್ಲಿ ಅರೆನಗ್ನ ಸ್ಥಿತಿಯಲ್ಲಿ 19 ವರ್ಷದ ಸಿದ್ಧಿ ನಾಯ್ಕ ಎಂಬ ಯುವತಿಯ ಮೃತದೇಹ ಪತ್ತೆಯಾಗಿತ್ತು. ಈಕೆಯ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಒಂದು ತಿಂಗಳು ಕಳೆದರೂ ಕೂಡ ಈ ಪ್ರಕರಣದಲ್ಲಿ ಪೋಲಿಸರು ಯಶ ಸಾಧಿಸಲು ಸಾಧ್ಯವಾಗಿಲ್ಲ. ಇದರಿಂದಾಗಿ ಸರ್ಕಾರವು ಯಾರನ್ನು ರಕ್ಷಿಸಲು ನೋಡುತ್ತಿದೆ…? ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಈ ಪ್ರಕರಣದ ಸತ್ಯ ಏನು ಎಂಬುದನ್ನು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿಯ ಅಧ್ಯಕ್ಷ ಗಿರೀಶ್ ಚೋಡಣಕರ್ ಮನವಿ ಮಾಡಿದ್ದಾರೆ.
ಪಣಜಿಯ ಕಾಂಗ್ರೇಸ್ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು-ಸರ್ಕಾರದಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀಕೃತವಾಗಿ ಯಾವುದೇ ಸ್ಪಷ್ಠೀಕರಣ ನೀಡಲಾಗಿಲ್ಲ. ಇದು ಸಹಜ ಸಾವಲ್ಲ,ತಮ್ಮ ಮಗಳ ಕೊಲೆಯಾಗಿದೆ ಎಂದು ಸಿದ್ಧಿಯ ಪಾಲಕರು ಸಂಶಯ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಈ ಪ್ರಕರಣದ ಸತ್ಯ ಏನು ಎಂಬುದು ಗೊತ್ತಾಗಬೇಕು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನೆಡೆಸುವ ಭರವಸೆ ನೀಡಿದ್ದರು. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಬೇಕು ಎಂದು ಗಿರೀಶ್ ಚೋಡಣಕರ್ ಆಗ್ರಹಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

You seem to have an Ad Blocker on.
To continue reading, please turn it off or whitelist Udayavani.