Law Commission: 23ನೇ ಕಾನೂನು ಆಯೋಗ ರಚನೆ: ಯುಸಿಸಿ ಸೇರಿ ಹಲವು ಕಾಯ್ದೆ ಪರಿಶೀಲನೆ
Team Udayavani, Sep 4, 2024, 5:13 AM IST
ನವದೆಹಲಿ: ಏಕರೂಪ ನಾಗರಿಕ ಸಂಹಿತೆ(ಯುಸಿಸಿ), ಬಡವರ ಮೇಲೆ ಪರಿಣಾಮ ಬೀರುವ ಕಾನೂನುಗಳು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಶೀಲಿಸುವುದು ಸೇರಿ ವಿವಿಧ ಕಾನೂನಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 23ನೇ ಕಾನೂನು ಆಯೋಗವನ್ನು ರಚಿಸಿದೆ.
ಸದ್ಯ ಚಾಲ್ತಿಯಲ್ಲಿರುವ ಕಾನೂನುಗಳನ್ನು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಡಿಯಲ್ಲಿ ಪರಿಶೀಲನೆ ನಡೆಸುವುದು ಮತ್ತು ಸುಧಾರಣೆಗೆ ಶಿಫಾರಸು ಮಾಡುವುದು ಈ ಆಯೋಗದ ಜವಾಬ್ದಾರಿಯಾಗಲಿದೆ ಎಂದು ಕಾನೂನು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಆ.31ಕ್ಕೆ 22ನೇ ಕಾನೂನು ಆಯೋಗದ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಹೊಸ ಕಾನೂನು ಆಯೋಗವನ್ನು ರಚಿಸಲಾಗಿದೆ. ಈ ಹಿಂದಿನ ಆಯೋಗವು, ಯುಸಿಸಿ ಕುರಿತು ಮಹತ್ವದ ವರದಿಯನ್ನು ಸಿದ್ಧಪಡಿಸಿದ್ದರೂ ಇನ್ನೂ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.