ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ : ಜಗದೀಶ ಶೆಟ್ಟರ್‌


Team Udayavani, Apr 20, 2021, 7:41 PM IST

ಕಜಹಗ್ದೆಡ

ಬೆಂಗಳೂರು:  ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಆಕ್ಸಿಜನ್‌ ಉತ್ಪಾದಿಸುವ ಹೊಸ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ.

ಕರ್ನಾಟಕ ಉದ್ಯೋಗ ಮಿತ್ರದ ಕಚೇರಿಯಲ್ಲಿ ಮಂಗಳವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆಕ್ಸಿಜನ್‌ ಪೂರೈಕೆ  ಸಮಸ್ಯೆ ಆಗದಂತೆ ನಿಗಾವಹಿಸಲು ಇಲಾಖೆಗಳ ನಡುವೆ ಸಮನ್ವಯ ಸಾಧಿಸುವಂತೆ ನಿರ್ದೇಶನ ನೀಡಿದರು.

“ಡಿಆರ್‌ ಡಿಓ  ಮಾರ್ಗದರ್ಶನದಲ್ಲಿ ಆಕ್ಸಿಜನ್‌ ಉತ್ಪಾದಿಸುವ  ಹೊಸ ಘಟಕಗಳ ಸ್ಥಾಪನೆಗೆ  ಉತ್ತರ ಪ್ರದೇಶದಲ್ಲಿ 5-6 ದಿನಗಳಲ್ಲಿ ಅನುಮತಿ ನೀಡಲಾಗಿದ್ದು, ಅವು ಈಗಾಗಲೇ ಕಾರ್ಯಾಚರಣೆ ಆರಂಭಿಸಿವೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಹೊಸ ಘಟಕಗಳ ಸ್ಥಾಪನೆಗೆ ಪರವಾನಗಿ ನೀಡಿ, ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ಯೂನಿವರ್ಸಲ್‌ ಏರ್‌ ಪ್ರಾಡಕ್ಟ್‌ ಕಂಪನಿ ಹೊಸ ಘಟಕ ಆರಂಭಿಸಲು ಅನುಕೂಲವಾಗುವಂತೆ ವಿದ್ಯುತ್‌ ಸಂಪರ್ಕ ಹಾಗೂ ಇನ್ನಿತರ ಪರವಾನಗಿ ನೀಡುವ ಸಂಬಂಧ ಸಭೆಯಲ್ಲೇ ನಿರ್ದೇಶನ ನೀಡಲಾಗಿದೆ,” ಎಂದು ತಿಳಿಸಿದರು.

ಆಕ್ಸಿಜನ್‌ ಪೂರೈಕೆ ಸರಪಳಿಗೆ ತೊಂದರೆ ಆಗದಂತೆ ನಾನಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಸಾರಿಗೆ ಇಲಾಖೆ, ವಾಣಿಜ್ಯ ತೆರಿಗೆ, ರಾಷ್ಟ್ರೀಯ ಹೆದ್ದಾರಿ, ಇಂಧನ ಮುಂತಾದ  ಪ್ರಮುಖ ಇಲಾಖೆಗಳ ಮುಖ್ಯಸ್ಥರಿಗೆ ಅಗತ್ಯ ಸೂಚನೆ ನೀಡಿದ ಸಚಿವರು,  ಆಕ್ಸಿಜನ್ ಉತ್ಪಾದನೆ ಹಾಗೂ ಪೂರೈಕೆ ಮಾಡುವ ಸಂಸ್ಥೆಗಳ ಸಮಸ್ಯ ಆಲಿಸಿ ಕೂಡಲೇ ಅದನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದರು.

ಆಕ್ಸಿಜನ್‌ ಸಾಗಣೆ ವಾಹನಕ್ಕೆ ಅಡ್ಡಿ ಇಲ್ಲ

“ಮೆಡಿಕಲ್‌ ಆಕ್ಸಿಜನ್‌ ಸಿಲಿಂಡರ್‌ ಸಾಗಣೆ ಸಂದರ್ಭದಲ್ಲಿ ಯಾವುದೇ ತೊಂದರೆ ಆಗದಂತೆ ಆರ್‌ಟಿಓ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ  ನಿರ್ದೇಶನ ನೀಡಲಾಗಿದೆ. ಟೋಲ್‌ ಗೇಟ್‌ಗಳಲ್ಲಿ ಆಕ್ಸಿಜನ್‌ ವಾಹನಗಳು ತಾಸು ಗಟ್ಟಲೆ ಕಾಯುವಂತೆ ಆಗಬಾರದು. ಹಾಗಾಗಿ, ಅಂಥ ವಾಹನಗಳಿಗೆ ಕೊವಿಡ್‌ ತುರ್ತು ಸೇವೆ ವಾಹನದ ಸ್ಟಿಕರ್‌ ನೀಡಿ, ಆಂಬುಲೆನ್ಸ್‌ ರೀತಿ ಟೋಲ್‌ಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,”ಎಂದರು.

ಹೆಚ್ಚುವರಿ ಆಕ್ಸಿಜನ್‌ ಪೂರೈಕೆ

“ಸದ್ಯ ನಗರಕ್ಕೆ 330 ಟನ್‌ ಆಕ್ಸಿಜನ್‌ ಪೂರೈಕೆ ಆಗುತ್ತಿದ್ದು, ಇಂದಿನಿಂದ ಹೆಚ್ಚುವರಿ 40 ಟನ್‌ ಹೆಚ್ಚುವರಿ ಆಕ್ಸಿಜನ್‌ ಪೂರೈಕೆ ಆಗುತ್ತಿದೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚು ಆಕ್ಸಿಜನ್‌ ಪೂರೈಕೆ ಮಾಡುವಂತೆ ಜಿಂದಾಲ್‌ ಕಂಪನಿಗೆ ಸೂಚನೆ ನೀಡಲಾಗಿದೆ. ಜತೆಗೆ,  ಮೆಡಿಕಲ್‌ ಆಕ್ಸಿಜನ್‌ ಪೂರೈಕೆಗಾಗಿ ಕೈಗಾರಿಕಾ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಉಪಯೋಗಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಿಂದಲೂ ಹೆಚ್ಚುವರಿ ಆಕ್ಸಿಜನ್‌ ಪೂರೈಕೆ ಸಾಧ್ಯವಾಗಲಿದೆ,” ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಡ್ರಗ್‌ ಕಂಟ್ರೋಲ್‌,  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರು, ಸಾರಿಗೆ ಆಯುಕ್ತರು, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಆಕ್ಸಿಜನ್‌ ಉತ್ಪಾದಕರು ಹಾಗೂ ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳು,  ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಡಾ. ರಾಜ್‌ ಕುಮಾರ್‌ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ  ಗುಂಜನ್ ಕೃಷ್ಣಾ , ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌.ಎಂ. ರೇವಣ್ಣಗೌಡ  ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.