IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Team Udayavani, Nov 28, 2024, 9:40 AM IST
ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ, ಚೆನ್ನೈ ಕಿಂಗ್ಸ್ ಮಾಲಿಕ ಎನ್.ಶ್ರೀನಿವಾಸನ್ (N.Srinivasan )ವಿರುದ್ಧ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ (Lalit Modi) ಗಂಭೀರ ಆರೋಪ ಮಾಡಿದ್ದಾರೆ. 2ನೇ ಐಪಿಎಲ್ ಹರಾಜಿನ ವೇಳೆ ಬಿಡ್ಡಿಂಗ್‌ನಲ್ಲಿ ಶ್ರೀನಿವಾಸನ್ ಮೋಸ ಮಾಡಿದ್ದಾರೆ. ಅವರು ಖ್ಯಾತ ಮಾಜಿ ಆಲ್‌ರೌಂಡರ್ ಆ್ಯಂಡ್ರ್ಯೂ ಫ್ಲಿಂಟಾಫ್ (Andrew Flintoff) ಬೇಕೆಂದು ಹಠ ಹಿಡಿದಿದ್ದರು. ಅದರಿಂದಾಗಿ ನಾನೇ ಬೇರೆ ಫ್ರಾಂಚೈಸಿಗಳಿಗೆ ಫ್ಲಿಂಟಾಫ್ರನ್ನು ಖರೀದಿ ಮಾಡದಂತೆ ತಿಳಿಸಿದ್ದೆ ಎಂದು ಮೋದಿ ಆರೋಪಿಸಿದ್ದಾರೆ.
ಬಿಸಿಸಿಐ ಸದಸ್ಯರಾಗಿದ್ದ ಅವರು ಮಂಡಳಿಗೆ ಮುಳ್ಳಾಗಿದ್ದರು. ಅವರ ಮಾತು ಕೇಳದಿದ್ದರೆ ಐಪಿಎಲ್ ನಡೆಯಲು ಬಿಡುತ್ತಿರಲಿಲ್ಲ. ಅವರು ಹಲವು ಕೃತ್ಯವೆಸಗಿದ್ದಾರೆ. ನಾನು ಅಂಪೈರ್‌ಗಳನ್ನು ಫಿಕ್ಸ್ ಮಾಡಿದ್ದೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಅವರೇ ಅದನ್ನು ಮಾಡಿದ್ದಾರೆ. ಅವರು ಅಂಪೈರ್‌ಗಳನ್ನು ಬದಲಿಸಬಹುದಿತ್ತು. ಆರಂಭದಲ್ಲಿ ನಾನದನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಒಮ್ಮೆ ಚೆನ್ನೈ ಪಂದ್ಯಕ್ಕೆ ಅವರು ಚೆನ್ನೈ ಅಂಪೈರನ್ನೇ ನಿಗದಿ ಮಾಡಿದಾಗ ನನಗೆ ತಡೆದುಕೊಳ್ಳಲು ಆಗಲಿಲ್ಲ. ಇದು ಪರೋಕ್ಷವಾಗಿ ಫಿಕ್ಸಿಂಗ್ ಎಂದು ಪಾಡ್‌ಕಾಸ್ಟ್ ಸಂದರ್ಶನವೊಂದರಲ್ಲಿ ಮೋದಿ ಕಿಡಿಕಾರಿದ್ದಾರೆ.
ಚೆನ್ನೈ ಐಪಿಎಲ್‌ನಲ್ಲಿ 5 ಬಾರಿ ಚಾಂಪಿಯನ್ ಆಗಿದೆ, ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ 2 ಕೂಟಕ್ಕೆ ನಿಷೇಧಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.