‘ಪತ್ರಕರ್ತರು ಸಾಮಾಜಿಕ ಚಟುವಟಿಕೆಗಳಿಗೂ ಗಮನ ನೀಡಿ’
Team Udayavani, Jul 9, 2019, 5:33 AM IST
ಉಡುಪಿ: ಪತ್ರಕರ್ತರು ಸಾಮಾಜಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು ಎಂದು ಸಿಂಡಿಕೇಟ್ ಬ್ಯಾಂಕ್ ಮಣಿಪಾಲದ ವಲಯ ಕಚೇರಿಯ ಪ್ರಧಾನ ವ್ಯವಸ್ಥಾಪಕ ಭಾಸ್ಕರ ಹಂದೆ ಹೇಳಿದರು.
ಶನಿವಾರ ನಗರದ ಪುರಭವನದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರಸ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಎಚ್ಚರಿಕೆಯಿಂದ ಮಾಡಿಕೊಂಡು ಬರುತ್ತಿ ದ್ದಾರೆ. ಇತ್ತೀಚೆಗೆ ಮಾದಕ ದ್ರವ್ಯ ಸೇವನೆ ವಿರುದ್ಧ ಕೂಡ ಅಭಿಯಾನ ನಡೆಸಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳು ಹೆಚ್ಚಾಗಲಿ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಮಾತನಾಡಿ ಪತ್ರಕರ್ತರು ಹೆಚ್ಚು ಒತ್ತಡದಿಂದ ಕೆಲಸ ನಿರ್ವಹಿಸುತ್ತಾರೆ. ಅವರ ಮನಸ್ಸು ಉಲ್ಲಸಿತವಾಗಲು ಅವರು ಕ್ರೀಡೆಯಂಥ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಹೇಳಿದರು.
ಸಂಘದ ಸದಸ್ಯ ಉದಯ್ ಆಚಾರ್ಯ ಸಾಸ್ತಾನ ಅವರಿಗೆ ವೈದ್ಯಕೀಯ ನೆರವನ್ನು ವಿತರಿಸಲಾಯಿತು. ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೇಚ್ಚಾರ್, ವರದಿಗಾರರಾದ ಅಶೋಕ್ ಪುತ್ತೂರು, ಪಲ್ಲವಿ ಸಂತೋಷ್ ವಿಜೇತರ ಪರಿಚಯ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಕೋಶಾಧಿಕಾರಿ ದಿವಾಕರ ಹಿರಿಯಡ್ಕ, ಪ್ರಸ್ ಕ್ಲಬ್ ಸಂಚಾಲಕ ನಾಗರಾಜ್ ರಾವ್ ಉಪಸ್ಥಿತರಿದ್ದರು. ಸಹ ಕಾರ್ಯದರ್ಶಿ ಮೈಕಲ್ ರೊಡ್ರಿಗಸ್ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು ವಂದಿಸಿದರು. ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.