ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Team Udayavani, Dec 24, 2024, 12:14 AM IST
ಬೆಂಗಳೂರು: ಮುಂಬರುವ 2025ನೇ ಸಾಲಿನ “ಕರ್ನಾಟಕ ಕ್ರೀಡಾಕೂಟ’ಕ್ಕೆ ಕರಾವಳಿ ಸಾಕ್ಷಿಯಾಗ ಲಿದ್ದು, ಇದಕ್ಕಾಗಿ ಈಗಿನಿಂದಲೇ ಸರಕಾರ ಭರದ ಸಿದ್ಧತೆಗಳನ್ನು ಆರಂಭಿಸಿದೆ.
ಜ. 17ರಿಂದ 23ರ ವರೆಗೆ ಮಂಗ ಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
ಕ್ರೀಡಾಕೂಟದಲ್ಲಿ 3,750 ಕ್ರೀಡಾ ಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಮಂದಿ ಭಾಗವಹಿಸಲಿದ್ದು, ಊಟ-ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕ ಟ್ಟಾಗಿ ನಿರ್ವಹಿಸಬೇಕು.
ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲದಲ್ಲಿ 11 ಕ್ರೀಡೆ ಗಳು ಆಯೋಜನೆಗೊಳ್ಳಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗ ಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾ ಗುವುದು ಎಂದು ವಿವರಿಸಿದರು.
ಮಂಗಳೂರಿನಲ್ಲಿ ಜ. 17ರಂದು ಕರ್ನಾಟಕ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಉಡುಪಿಯಲ್ಲಿ ನಡೆಯಲಿರುವ ಸಮಾರೋಪದಲ್ಲಿ ಡಾ| ಜಿ. ಪರಮೇಶ್ವರ್ ಭಾಗವಹಿಸಲಿದ್ದಾರೆ.
ಲಾಂಛನ ಬಿಡುಗಡೆ
“ಕರ್ನಾಟಕ ಕ್ರೀಡಾಕೂಟ- 2025’ರ ಲಾಂಛನವನ್ನು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಕ್ರೀಡಾಕೂಟದ ಲಾಂಛನದಲ್ಲಿ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆ ಜತೆಗೆ ಸೋಲು-ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವಂತಿದೆ.
ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿ, ಮಾತನಾಡಿದೆ.
ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು,
ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ… pic.twitter.com/1aQ2cAsahK— Siddaramaiah (@siddaramaiah) December 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.