Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Team Udayavani, Nov 21, 2024, 11:29 PM IST
ಬೆಂಗಳೂರು: ವಿಶ್ವವ್ಯಾಪಿ ತನ್ನ ಬ್ರ್ಯಾಂಡ್ ಮೌಲ್ಯವನ್ನು ದ್ವಿಗುಣಗೊಳಿಸಿಕೊಳ್ಳುತ್ತಿರುವ ಕೆಎಂಎಫ್ ಇದೀಗ ರಾಷ್ಟ್ರ ರಾಜಧಾನಿ ದಿಲ್ಲಿಗೂ ಲಗ್ಗೆಯಿಟ್ಟಿದೆ. ಆ ಮೂಲಕ ಅಮುಲ್ ಮತ್ತು ಮದರ್ ಡೇರಿಯಂಥ ದೈತ್ಯ ಕಂಪೆನಿಗಳಿಗೆ ಸೆಡ್ಡು ಹೊಡೆಯಲು ವೇದಿಕೆ ಸಿದ್ಧಗೊಳಿಸಿದೆ.
ಗುರುವಾರ ದಿಲ್ಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವಿವಿಧ ಶ್ರೇಣಿಯ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಿದರು.
ಸಿದ್ದರಾಮಯ್ಯ ಮಾತನಾಡಿ, ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ 2ನೇ ಸ್ಥಾನದಲ್ಲಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮುಂದಿನ 6 ತಿಂಗಳ ಒಳಗೆ ಸುಮಾರು 5 ಲಕ್ಷ ಲೀಟರ್ ನಂದಿನಿ ಹಾಲನ್ನು ಮಾರಾಟ ಮಾಡುವ ಗುರಿ ಹೊಂದಲಾಗಿದೆ ಎಂದರು.
ಪ್ರೋತ್ಸಾಹಧನಕ್ಕಾಗಿ ಪ್ರತೀ ದಿನ 5 ಕೋ. ರೂ.
ರಾಜ್ಯದಲ್ಲಿ ಪ್ರತೀ ದಿನ 92ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀಟರ್ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದೆ. ರಾಜ್ಯ ಸರಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತೀ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನವನ್ನು ನಂತರ 3 ರೂ.ಗೆ ಏರಿಕೆ ಮಾಡಲಾಯಿತು. ನಾನು ಮುಖ್ಯಮಂತ್ರಿಯಾದ ಅನಂತರ 5 ರೂ.ಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತೀ ದಿನ 5 ಕೋಟಿ ರೂ.ಗಳನ್ನು ಸರಕಾರ ವೆಚ್ಚ ಮಾಡುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.