ಕಾಸರಗೋಡು ಅಪರಾಧ ಸುದ್ದಿಗಳು

Team Udayavani, Jun 25, 2019, 5:15 AM IST

Crime-545

ನೀರಿನಲ್ಲಿ ಮುಳುಗಿ ಯುವಕನ ಸಾವು
ಮಂಜೇಶ್ವರ: ಕೆಂಪು ಕಲ್ಲಿನ ಕೋರೆಯಲ್ಲಿ ತುಂಬಿದ್ದ ನೀರಿನಲ್ಲಿ ಸ್ನಾನಕ್ಕೆಂದು ತೆರಳಿದ್ದ ಕರ್ನಾಟಕ ಕೊಪ್ಪಳ ಜಿಲ್ಲೆಯ ಕುಷ್ಟಗಿ ಉಳಸಿಗೇರಿ ನಿವಾಸಿ ವಿಜಯ(19) ನೀರಿನಲ್ಲಿ ಮುಳುಗಿ ಸಾವಿಗೀಡಾದರು.

ಮೀಯಪದವು ಬೆಜ್ಜ ಜೊಕ್ಲಕಟ್ಟೆಯ ಕೋರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ವಿಜಯನಿಗೆ ಈಜಾಡಲು ತಿಳಿದಿರಲಿಲ್ಲ. ನೀರಿನಲ್ಲಿ ಮುಳುಗಿದ ವಿಜಯನನ್ನು ಜೊತೆಯಲ್ಲಿದ್ದವರು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

ಪತಿ, ಪತ್ನಿ, ಪುತ್ರ ನಿಗೂಢ ನಾಪತ್ತೆ
ಕಾಸರಗೋಡು: ಪುಲ್ಲೂರು ಕೇಳ್ಳೋಟ್‌ ನಿವಾಸಿ ಪ್ರಭಾಕರನ್‌ ಅವರ ಪುತ್ರ ರಾಗೇಶ್‌ (32), ಪತ್ನಿ ಪೈಕ ನಿವಾಸಿ ಶಿಲ್ಪಾ (26) ಮತ್ತು ಇವರ ಪುತ್ರ ಆದಿತ್ಯನ್‌ (6) ನಿಗೂಢವಾಗಿ ನಾಪತ್ತೆಯಾಗಿರುವುದಾಗಿ ಅಂಬಲತ್ತರ ಪೊಲೀಸರಿಗೆ ದೂರು ನೀಡಲಾಗಿದೆ. ಇವರು ಪೈಕಕ್ಕೆ ಎಂದು ಹೇಳಿ ಮನೆಯಿಂದ ಹೊರಟಿದ್ದರು. ಆದರೆ ಅವರು ಪೈಕಕ್ಕೆ ತಲುಪಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಹೆರಿಗೆಗೆ ಮುನ್ನ
ಹೃದಯಾಘಾತದಿಂದ ದಾದಿ ಸಾವು
ಕಾಸರಗೋಡು: ಹೆರಿಗೆ ಸಂಬಂಧಿತ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದಾದಿ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

ಕಾಸರಗೋಡು ಜನರಲ್‌ ಆಸ್ಪತ್ರೆಯ ಸ್ಟಾಫ್‌ ನರ್ಸ್‌ ಹಾಗೂ ನೀಲೇಶ್ವರ ಚೊಯ್ನಾಂಕೋಡು ಅದಿಕಾರತ್ತಿಲ್‌ ಸೆಬಾಸ್ಟಿನ್‌ ಅವರ ಪುತ್ರಿ, ಕಂಬಲ್ಲೂರಿನ ದಿನೇಶನ್‌ ಅವರ ಪತ್ನಿ ರಶ್ಮಿ ಎಸ್‌. (33) ಸಾವಿಗೀಡಾದರು. ಹೆರಿಗೆ ಸಂಬಂಧ ಚಿಕಿತ್ಸೆಗಾಗಿ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ರಶ್ಮಿ ಅವರನ್ನು ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವು ಸಂಭವಿಸಿತು.

ವರದಕ್ಷಿಣೆಗಾಗಿ ಪತ್ನಿಗೆ ಹಲ್ಲೆ:
ಪತಿ ವಿರುದ್ಧ ಕೇಸು ದಾಖಲು
ಕುಂಬಳೆ: ವರದಕ್ಷಿಣೆಗಾಗಿ ಒತ್ತಾಯಿಸಿ ಪತ್ನಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಆಮಿನತ್‌ ಶರೀನ ನೀಡಿದ ದೂರಿನಂತೆ ಪತಿ ಮಂಗಲ್ಪಾಡಿ ಪುಳಿಕುತ್ತಿ ನಿವಾಸಿ ಮೊದೀನ್‌ ಶಬೀರ್‌ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ವಿದ್ಯುತ್‌ ಕಂಬಕ್ಕೆ ಲಾರಿ ಢಿಕ್ಕಿ
ಕಾಸರಗೋಡು: ಹೊಸದುರ್ಗದ ಖಾಸಗಿ ಶಾಲೆ ಬಳಿಯ ವಿದ್ಯುತ್‌ ಕಂಬವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾರಿಗೂ ಅಪಾಯ ಸಂಭವಿಸಿಲ್ಲ.

ವಿದೇಶಿ ಮದ್ಯ ವಶಕ್ಕೆ
ಮಂಜೇಶ್ವರ: ಕಾಸರಗೋಡು ಸರ್ಕಲ್‌ ಅಬಕಾರಿ ಕಚೇರಿಯ ಪ್ರಿವೆಂಟಿವ್‌ ಆಫೀಸರ್‌ ವಿನಯ ರಾಜ್‌ ಅವರ ನೇತೃತ್ವದಲ್ಲಿ ಅಬಕಾರಿ ತಂಡ ಮೀಯಪದವಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 90 ಎಂ.ಎಲ್‌.ನ 48 ಬಾಟಿÉ ವಿದೇಶಿ ಮದ್ಯ ವಶಪಡಿಸಿಕೊಂಡಿದೆ. ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ.

ವಾಹನ ಅಪಘಾತ :
ಗಾಯಾಳು ಮಹಿಳೆ ಸಾವು
ಹೊಸದುರ್ಗ: ಮಂಗಳೂರಿನಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗೋಡೆಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಕಾಂಞಂಗಾಡ್‌ನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಡನ್ನಕ್ಕಾಡು ನಿವಾಸಿ ಸುಹೈಲ್‌ ಅವರ ಪತ್ನಿ ಖೈರುನ್ನೀಸಾ(22) ಸಾವಿಗೀಡಾದರು. ಜೂ.18 ರಂದು ಕಾರ ಅಪಘಾತಕ್ಕೀಡಾಗಿತ್ತು.

ತಂಡದಿಂದ ಅಪಹರಣ
ಕುಂಬಳೆ: ಉಪ್ಪಳ ಸೋಂಕಾಲ್‌ನ ಅಲ್ತಾಫ್‌ (46) ಮತ್ತು ಪುತ್ರಿಯ ಮಗುವನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿ, ಮಗವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.

ಈ ಬಗ್ಗೆ ಅಲ್ತಾಫ್‌ ಅವರ ಪತ್ನಿ ಫಾತಿಮಾ ನೀಡಿದ ದೂರಿನಂತೆ ಮಗಳ ಪತಿ ಶಬೀರ್‌, ರಿಯಾಸ್‌, ಲತೀಫ್‌ ಸಹಿತ ಐದು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ರಿಕ್ಷಾ ಢಿಕ್ಕಿ : ಕೇಸು ದಾಖಲು
ಉಪ್ಪಳ: ಬಾಯಿಕಟ್ಟೆ ಜಂಕ್ಷನ್‌ನಲ್ಲಿ ರಿಕ್ಷಾ ಢಿಕ್ಕಿ ಹೊಡೆದು ಪಾದಚಾರಿ ಬಾಯಿಕಟ್ಟೆ ನಿವಾಸಿ ಅಬ್ದುಲ್‌ ಖಾದರ್‌(65) ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ರಿಕ್ಷಾ ಚಾಲಕನ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.