ಕೆಸರು ಗದ್ದೆಯಂತಾದ ಕೊಮೆ ಕೊರವಡಿ ಕರಾವಳಿ ಸಂಪರ್ಕ ರಸ್ತೆ
Team Udayavani, Jun 25, 2019, 5:59 AM IST
ತೆಕ್ಕಟ್ಟೆ: ಕುಂಭಾಸಿ ಗ್ರಾ. ಪಂ. ವ್ಯಾಪ್ತಿಯ ಕೊಮೆ ಕೊರವಡಿ ಮೀನುಗಾರಿಕಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ಹಾಗೂ ಅಸಮರ್ಪಕ ಒಳಚರಂಡಿಯ ಪರಿಣಾಮ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿದೆ. ಇದರಿಂದ ಸಾರ್ವಜನಿಕ ಸಂಚಾರವೇ ದುಸ್ತರವಾಗಿ ಪರಿಣಮಿಸಿದೆ.
ಸಾರ್ವಜನಿಕರಿಗೆ ತೊಂದರೆ
ಕಳೆದ ಹಲವು ವರ್ಷಗಳಿಂದಲೂ ಇಲ್ಲಿಗೆ ಸಮೀಪದ ಕೊಮೆ ಕೊರವಡಿ ವಿ. ಸಹಕಾರಿ ಸಂಘದ ಪ್ರಧಾನ ಕಚೇರಿಯ ಸಮೀಪದಲ್ಲಿಯೇ ರಸ್ತೆ ಕೆರೆಯಂತಾಗಿದೆ.
ನಿತ್ಯ ಪ್ರಮುಖ ಮಾರ್ಗದಲ್ಲಿ ಸಂಚರಿಸುವ ಸ್ಥಳೀಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಪಾದಚಾರಿಗಳು ಹಾಗೂ ವಾಹನ ಸವಾರರು ಕೆಸರು ರಸ್ತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಹಿಂದೆ ಮಳೆ ನೀರು ರಸ್ತೆ ಸಮೀಪದ ತೋಡಿನಿಂದಾಗಿ ನೇರವಾಗಿ ಕಡಲ ತೀರದೆಡೆಗೆ ಹರಿದು ಹೋಗುತ್ತಿತ್ತು ಆದರೆ ಬದಲಾದ ಕಾಲದಲ್ಲಿ ತೋಡು ರಸ್ತೆಯಾಗಿ ಪರಿವರ್ತನೆಗೊಂಡ ಪರಿಣಾಮ ಮಳೆ ನೀರಿನ ಹರಿವಿಕೆಗೆ ತಡೆ ಹೇರಿದಂತಾಗಿದೆ.
ಸಂಭವನೀಯ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಾರ್ವಜನಿಕ ವಲಯ ಪ್ರತಿನಿತ್ಯ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ತುರ್ತು ಸಭೆ ಕರೆದು ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವುದು ಸ್ಥಳೀಯರ ಒಕ್ಕೊರಲ ಅಭಿಪ್ರಾಯವಾಗಿದೆ.
ತುರ್ತು ಪರಿಹಾರ ಕ್ರಮಕ್ಕಾಗಿ ಸ್ಥಳೀಯರ ಆಗ್ರಹ
ಇಲ್ಲಿ ಈಗಾಗಲೇ ದ್ವಿಚಕ್ರ ವಾಹನ ಚಾಲಕರು ಹಾಗೂ ಸಾರ್ವಜನಿಕರು ಅಯತಪ್ಪಿ ಕೆಸರು ನೀರಿಗೆ ಬಿದ್ದಿದ್ದಾರೆ. ಘನವಾಹನಗಳು ಸಂಚರಿಸುವ ಸಂದರ್ಭದಲ್ಲಿ ಪಾದಚಾರಿಗಳು ರಸ್ತೆ ಸಮೀಪದಲ್ಲಿರುವ ಮನೆಯ ಧರೆ ಏರಿ ಸರ್ಕಸ್ ಮಾಡಿಕೊಂಡು ನಡೆದಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.
– ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.