ವೈಯಕ್ತಿಕ ದ್ವೇಷ: ವಾಹನ ಹರಿಸಿ ಓರ್ವನ ಕೊಲೆ ? ಕುಂದಾಪುರದ ಯಡಮೊಗೆ ಯಲ್ಲಿ ನಡೆದ ಘಟನೆ
Team Udayavani, Jun 6, 2021, 12:12 AM IST
ಕುಂದಾಪುರ : ವೈಯಕ್ತಿಕ ಜಗಳವೊಂದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕುಂದಾಪುರದ ಯಡಮೊಗೆ ಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಯಡಮೊಗೆಯ ಹೊಸಬಾಳು ನಿವಾಸಿ ಉದಯ ಗಾಣಿಗ (45) ಕೊಲೆಯಾದ ವ್ಯಕ್ತಿ.
ಯಡಮೊಗೆಯ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ವಿರುದ್ಧ ಉದಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ.
ಘಟನೆ ಹೇಗಾಯಿತು?
ರಾತ್ರಿ 8 ಗಂಟೆ ಸುಮಾರಿಗೆ ತನ್ನ ಮನೆಯ ಎದುರಿನ ರಸ್ತೆಯ ಮೇಲೆ ನಿಂತಿದ್ದ ಉದಯ ಅವರ ಮೇಲೆ ಪ್ರಾಣೇಶ್ ಯಡಿಯಾಳ ಏಕಾಏಕಿಯಾಗಿ ಕಾರು ಚಲಾಯಿಸಿದ್ದಾನೆ. ಉದಯ ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯುವ ಯತ್ನ ನಡೆಸಿದರಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದರು.
ಇದನ್ನೂ ಓದಿ ;ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ
ಇದು ಅಪಘಾತವಲ್ಲ.. ಮೇಲ್ನೋಟಕ್ಕೆ ಕೊಲೆಯೆಂದು ತಿಳಿದು ಬರುತ್ತಿದ್ದು, ಮೃತನ ಕುಟಂಬಸ್ಥರು ಸಹ ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಗ್ರಾ.ಪಂ.ನಲ್ಲಿ ನಡೆಯುವ ಅನ್ಯಾಯ, ಅಕ್ರಮಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಉದಯ ಗಾಣಿಗ ಬರಹ ಪ್ರಕಟಿಸಿ ಪ್ರಶ್ನಿಸುತ್ತಿದ್ದರು ಎನ್ನಲಾಗುತ್ತಿದ್ದು, ಇದರಿಂದಾಗಿಯೇ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಹಾಗೂ ಉದಯ ಮಧ್ಯೆ ವೈಯಕ್ತಿಕ ದ್ವೇಷ ಮೂಡಿತ್ತು ಎನ್ನಲಾಗಿದೆ.
ಉದಯ್ ವಿವಾಹಿತರಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಸಗೊಬ್ಬರ ಅಂಗಡಿಯನ್ನು ನಡೆಸುತ್ತಿದ್ದ ಅವರು ಕೃಷಿಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.