ರಸ್ತೆ ಸುಧಾರಣೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ
Team Udayavani, Jun 19, 2022, 2:22 PM IST
ವಿಜಯಪುರ: ರಸ್ತೆ ಸುಧಾರಣೆ ಕಾಮಗಾರಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ಹೀಗಾಗಿ ಕಾಮಗಾರಿ ಅಚ್ಚುಕಟ್ಟಾಗಿ ನಡೆಯಬೇಕು. ಗುಣಮಟ್ಟದಲ್ಲಿ ಲೋಪವಾಗದಂತೆ ಗುತ್ತಿಗೆದಾರರಿಗೆ ಉತ್ತಮ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಸೂಚಿಸಿದರು.
ತಿಕೋಟಾ ತಾಲೂಕಿನ ಕನಮಡಿ ಗ್ರಾಮದಿಂದ ಧರಿದೇವರ ಗುಡ್ಡದವರೆಗಿನ 4.25 ಕಿ.ಮೀ. ದೂರದ ರಸ್ತೆ ಸುಧಾರಣೆಗೆ ಅಂದಾಜು 4 ಕೋಟಿ ರೂ. ವೆಚ್ಚದದಲ್ಲಿ ತಮ್ಮ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಿಗಳು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು. ಕಾಮಗಾರಿ ಗುಣಮಟ್ಟ ಮತ್ತು ಕಾಲಮಿತಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಮಾತನಾಡಿ, ಜನರ ನಿರೀಕ್ಷೆಗೆ ತಕ್ಕಂತೆ ಸದೃಢ ರಸ್ತೆ ನಿರ್ಮಾಣಕ್ಕೆ ಒತ್ತು ಕೊಡಬೇಕು ಎಂದು ತಿಳಿಸಿದರು.
ತಿಕೋಟಾ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ತಿಕೋಟಾ ತಹಶೀಲ್ದಾರ್ ಎಂ.ಎಸ್.ಅರಕೇರಿ, ಲೋಕೊಪಯೋಗಿ ಇಲಾಖೆ ಇಇ ಸಿ.ಬಿ.ಚಿಕ್ಕಲಕಿ, ಜೆಇ ರಾಜು ಮುಜಮದಾರ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.