Mangaluru: ಮತದಾರರ “ಮಿಂಚಿನ ನೋಂದಣಿ’
Team Udayavani, Nov 6, 2024, 9:19 PM IST
ಮಂಗಳೂರು: ಭಾರತ ಚುನಾವಣ ಆಯೋಗದ ನಿರ್ದೇಶನದಂತೆ ನ. 9, 10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೂತ್ಮಟ್ಟದ ಅಧಿಕಾರಿ ಹಾಗೂ ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜ. 1, ಎ. 1, ಜು. 1 ಹಾಗೂ ಅ.1ಕ್ಕೆ) 18 ವರ್ಷ ತುಂಬುವ ಯುವ ಮತದಾರರಿಂದ ನಮೂನೆ-6ನ್ನು ಸ್ವೀಕರಿಸಲಾಗುತ್ತದೆ.
ವಲಸೆಹೋದ, ಮೃತಪಟ್ಟ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ನಮೂನೆ 7ನ್ನು ಸ್ವೀಕರಿಸಲಿದ್ದಾರೆ.
ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ನಮೂದುಗಳಲ್ಲಿ ವಿಳಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸುವಿಕೆ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಚೀಟಿ (ಎಪಿಕ್) ನೀಡುವಿಕೆ ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ಮನವಿ ಹಾಗೂ ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ 8ನ್ನು ಸ್ವೀಕರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.