Lok Sabha Election 2024; ಕಾಂಗ್ರೆಸ್‌ಗೆ ಕಗ್ಗಂಟಾದ 4 ಕ್ಷೇತ್ರದ ಟಿಕೆಟ್‌

ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ನೋಡಿ ನಿರ್ಧಾರ; ಅಭ್ಯರ್ಥಿಗಳ ಅಂತಿಮಗೊಳಿಸಲು ತ್ರಿಮೂರ್ತಿಗಳ ಕಸರತ್ತು

Team Udayavani, Mar 22, 2024, 11:59 PM IST

Lok Sabha Election 2024; ಕಾಂಗ್ರೆಸ್‌ಗೆ ಕಗ್ಗಂಟಾದ 4 ಕ್ಷೇತ್ರದ ಟಿಕೆಟ್‌

ಬೆಂಗಳೂರು: 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಕಗ್ಗಂಟಾಗಿರುವ ಉಳಿದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಶುಕ್ರವಾರ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ನೇತೃತ್ವದಲ್ಲಿ ಸಿಎಂ, ಡಿಸಿಎಂ ಜತೆ ಚರ್ಚೆ ನಡೆಯಿತು.

ಬಣಗಳ ಗುದ್ದಾಟ, ಪ್ರತಿಷ್ಠೆಗಿಳಿದ ನಾಯಕರು, ಮನವೊಲಿಕೆ ಬಳಿಕವೂ ಕಣಕ್ಕಿಳಿಯಲು ಮನಸ್ಸು ಮಾಡದಿರುವುದು ಸಹಿತ ಹಲವು ಕಾರಣಗಳಿಂದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಅಂತಿಮಗೊಳಿಸಲು ಮುಂದಾದರೂ ಕೊನೆಯ ಕ್ಷಣದಲ್ಲಿ ಅದಕ್ಕೆ ಕೊಕ್ಕೆ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ-ಡಿಸಿಎಂ ಜತೆ ಸುಜೇìವಾಲ ಮಾತುಕತೆ ನಡೆಸಿದರು.

ನಗರದ ತಾಜ್‌ ವೆಸ್ಟ್‌ ಎಂಡ್‌ನ‌ಲ್ಲಿ ನಡೆದ ತ್ರಿಮೂರ್ತಿಗಳ ಸಭೆಯಲ್ಲಿ ಕೋಲಾರದಲ್ಲಿ ಕೆ.ಎಚ್‌. ಮುನಿಯಪ್ಪ ಮತ್ತು ರಮೇಶ್‌ ಕುಮಾರ್‌ ನಡುವಿನ ತಿಕ್ಕಾಟ, ತಮ್ಮ ಬಣದವರಿಗೆ ನೀಡುವಂತೆ ಒತ್ತಡ ಹಾಕುತ್ತಿರುವುದು, ತಮ್ಮ ಅಳಿಯನಿಗೆ ಟಿಕೆಟ್‌ ನೀಡುವಂತೆ ಮುನಿಯಪ್ಪ ಒತ್ತಾಯ, ಎಲ್ ಹನುಮಂತಯ್ಯ ಪರ ರಮೇಶ್‌ಕುಮಾರ್‌ ಪ್ರಭಾವ, ಚಾಮರಾಜನಗರದಲ್ಲಿ ಎಚ್‌.ಸಿ.ಮಹದೇವಪ್ಪ ಪುತ್ರನಿಗೆ ಟಿಕೆಟ್‌ ಬೇಡಿಕೆ ಇಟ್ಟಿದ್ದು ಒಂದೆಡೆಯಾದರೆ, ಸ್ವತಃ ಮಹದೇವಪ್ಪ ಅವರನ್ನೇ ಕಣಕ್ಕಿಳಿಸಲು ವರಿಷ್ಠರ ಲೆಕ್ಕಾಚಾರ, ಬಳ್ಳಾರಿಯಲ್ಲಿ ಶಾಸಕ ತುಕಾರಾಂ ಪುತ್ರಿ ಬದಲು ಸ್ವತಃ ಶಾಸಕರಿಗೇ ನಿಲ್ಲಲು ಮನವೊಲಿಕೆ ಯತ್ನ, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಪುತ್ರ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್‌ ನೀಡುವಂತೆ ಕೇಳಿಬರುತ್ತಿರುವ ದನಿ, ಈ ನಡುವೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಿವಶಂಕರ್‌ ರೆಡ್ಡಿ ಹೆಸರು ಕೂಡ ಕೇಳಿಬರುತ್ತಿವೆ. ಈ ಎಲ್ಲ ಅಂಶಗಳ ಬಗ್ಗೆ ಸುದೀರ್ಘ‌ ಚರ್ಚೆ ನಡೆಯಿತು ಎನ್ನಲಾಗಿದೆ.

ಆದರೆ ನಾಲ್ಕೂ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇನ್ನೂ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮತ್ತೂಂದೆಡೆ ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಕೂಡ ಈ ನಾಲ್ಕರಲ್ಲಿ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಹಾಗಾಗಿ ಗೊಂದಲದ ನೆಪದಲ್ಲಿ ಕಾದುನೋಡುವ ತಂತ್ರ ಕೂಡ ಇದರ ಹಿಂದಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮೂರನೇ ಹಂತದ ಪಟ್ಟಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

ಅಳಿಯನ ಪರ ಮುನಿಯಪ್ಪ ಬ್ಯಾಟಿಂಗ್‌
ಈ ಮಧ್ಯೆ ಕೋಲಾರ ಟಿಕೆಟ್‌ ಗೊಂದಲ ವಿಚಾರವಾಗಿ ಸಚಿವ ಕೆ.ಎಚ್‌. ಮುನಿಯಪ್ಪ ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸದಾಶಿವ ನಗರದಲ್ಲಿರುವ ಶಿವಕುಮಾರ್‌ ಅವರ ನಿವಾಸದಲ್ಲಿ ಭೇಟಿಯಾದ ಮುನಿಯಪ್ಪ, ತಮ್ಮ ಅಳಿಯನ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಮಕ್ಕಳಿಗೆ ಟಿಕೆಟ್‌ ಸಿಕ್ಕಿದೆ. ಅದೇ ರೀತಿ, ನಾನೂ ಕೇಳುತ್ತಿದ್ದೇನೆ. ಶುಭ ಸುದ್ದಿ ಸಿಗುತ್ತದೆ ಎಂಬ ಆಶಾಭಾವನೆ ಇದೆ. 35-40 ವರ್ಷಗಳಿಂದ ಪಕ್ಷ ಕಟ್ಟಿದ್ದೇನೆ. ಅಕಸ್ಮಾತ್‌ ಕಳೆದ ಬಾರಿ ನನಗೆ ಸೋಲಾಗಿದೆ. ನನ್ನನ್ನು ಸೋಲಿಸಿದರೂ ನಾನು ಮಾತನಾಡಲಿಲ್ಲ ಎಂದರು.

ದೊಡ್ಡ ಪಕ್ಷ ಎಂದಾಗ ಭಿನ್ನಾಬಿಪ್ರಾಯ ಇರುತ್ತದೆ. ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು. ಡಿ.ಕೆ. ಶಿವಕುಮಾರ್‌ ಭೇಟಿ ವೇಳೆ ನಂದಿನಿ ಚಿಕ್ಕಪೆದ್ದಣ್ಣ ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.