Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Team Udayavani, Jan 10, 2025, 11:13 AM IST
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ (ಜ.10) ಮಂಗಳೂರಿನಲ್ಲಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ.
ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ.
ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು. ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ ಬಂದಿದ್ದ ಅನರುಲ್ ಶೇಖ್ ಮೊದಲು ಉಡುಪಿಗೆ ಬಂದು ನೆಲೆಸಿದ್ದ ಎಂದು ವರದಿಯಾಗಿದೆ.
ಖಚಿತ ಮಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸ್ ಹಾಗು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಅನರುಲ್ ಶೇಖ್ ನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.