Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Team Udayavani, Dec 21, 2024, 1:24 PM IST
ಮೇರಿಹಿಲ್: ಕರಾವಳಿಯ ಸೊಬಗವನ್ನು ಎತ್ತರಿಂದ ಆಹ್ಲಾದಿಸಬೇಕು ಎಂಬ ಉದ್ದೇಶಕ್ಕೆ ಕರಾವಳಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾದ ಹೆಲಿಕಾಪ್ಟರ್ ಪ್ರಯಾಣ ವ್ಯವಸ್ಥೆಗೆ ಶನಿವಾರ (ಡಿ.21) ಬೆಳಗ್ಗೆ ಚಾಲನೆ ದೊರೆಯಿತು.
ಮೇರಿಹಿಲ್ ಹೆಲಿಪ್ಯಾಡ್ನಲ್ಲಿ ಉದ್ಘಾಟಿಸಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮಾತನಾಡಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಕರಾವಳಿ ಉತ್ಸವ ನಡೆಯುತ್ತಿದ್ದು, ಮೊದಲ ಬಾರಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ದೊರಕಿದೆ ಎಂದರು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮಾತನಾಡಿ, ಕರಾವಳಿ ಉತ್ಸವದ ಪ್ರಯುಕ್ತ ‘ಕುಡ್ಲ ಹೈ’ ಎಂಬ ಮಂಗಳೂರು ನಗರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಡ್ಲದ ಸುಂದರತೆಯನ್ನು ಹೆಲಿಕಾಫ್ಟರ್ನಲ್ಲಿ ನೋಡುವುದು ಸುಂದರ. ಇದರೊಂದಿಗೆ ನಗರದ ಪ್ರಕೃತಿ, ನದಿ, ಸಮುದ್ರದ ಜೊತೆಗೆ ಅಭಿವೃದ್ಧಿಯ ದರ್ಶನವಾಗುತ್ತದೆ. ಪ್ರವಾಸೋದ್ಯಮದ ದೂರದೃಷ್ಟಿಯಿಂದ ಈ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಹೇಳಿದರು.
ಡಿ.29 ರವರೆಗೆ ಅವಕಾಶ
ಡಿ.21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಪ್ರಯಾಣ ನಡೆಯಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಅವಕಾಶ ಇದೆ. ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್ನಲ್ಲಿ ೬ ಜನರಿಗೆ ಸಂಚರಿಸಲು ಅವಕಾಶವಿದೆ. ಹೆಲಿಕಾಫ್ಟರ್ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್ಗಾಗಿ ವೆಬ್ಸೈಟ್ http://www.helitaxii.com ಸಂಪರ್ಕಿಸಬಹುದು.
ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ, ನಗರ ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ಉಪ ಜಿಲ್ಲಾಕಾರಿ ಡಾ| ಸಂತೋಷ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸಹಿತ ಮತ್ತಿತರರು ಇದ್ದರು.
ಇದನ್ನೂ ಓದಿ: iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.