![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 8, 2024, 11:46 PM IST
ಮಂಗಳೂರು: ಕಚೇರಿಯ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಬಂಧಿಸಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್, ದುರ್ಗಾವಾಹಿನಿ ಆಗ್ರಹಿಸಿದೆ.
ಮನ್ಸೂರ್ ಅಲಿ ಕಚೇರಿ ಮಹಿಳಾ ಸಿಬಂದಿ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಮುಡಾ ಆಯುಕ್ತ ಮನ್ಸೂರ್ ಆಲಿ ತನಗೆ ಲೈಂಗಿಕ, ಮಾನಸಿಕ, ದೈಹಿಕ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಕೃತ್ಯವನ್ನು ದುರ್ಗಾವಾಹಿನಿ ಖಂಡಿಸುತ್ತದೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಮನ್ಸೂರ್ ಅಲಿಯನ್ನು ವಜಾಗೊಳಿಸಬೇಕು ಮತ್ತು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಡಾ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದುರ್ಗಾ ವಾಹಿನಿ ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ತಿಳಿಸಿದ್ದಾರೆ.
ಜಿಲ್ಲಾಡಳಿತ ತತ್‌ಕ್ಷಣ ಪ್ರಕರಣದ ಬಗ್ಗೆ ಗಮನಹರಿಸಿ, ಮುಡಾ ಆಯುಕ್ತ ಮನ್ಸೂರ್ ಅಲಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಆಗ್ರಹಿಸಿದ್ದಾರೆ.
ಹಗೆತನದಿಂದ ದೂರು; ಆಯುಕ್ತ
ಕಚೇರಿಯ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತಂತೆ ತನ್ನ° ಮೇಲೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮುಡಾ ಆಯುಕ್ತ ಮನ್ಸೂರ್ ಅಲಿ ಅವರು ಸೋಮವಾರ ಉರ್ವ ಠಾಣೆಗೆ ಹಾಜರಾಗಿ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆಯುಕ್ತರು, ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಭಯ ಮತ್ತು ಹಗೆತನದಿಂದ ಮಹಿಳೆ ದೂರು ನೀಡಿದ್ದಾರೆ. ಡಿ. 27ರಂದು ಮುಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಗೆ ಸಂಬಂಧಿಸಿದ ಸುಮಾರು 100 ಪುಟಗಳಿಗೂ ಹೆಚ್ಚಿದ ನಡಾವಳಿಯನ್ನು ತಪ್ಪಾಗಿ ಬರೆದು ಕೊಟ್ಟಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಷ್ಟು ಉದ್ದದ ವರದಿ ಬರೆಯಲು ಸಾಧ್ಯವಿಲ್ಲ ಎಂದಿದ್ದರು. ಈ ಬಗ್ಗೆ ಸರಿಯಾಗಿ ಕೆಲಸ ಮಾಡುವುದಾದರೆ ಇರಿ, ಇಲ್ಲದಿದ್ದರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ. ಈ ಬಗ್ಗೆ ಗುತ್ತಿಗೆ ಏಜೆನ್ಸಿಗೂ ತಿಳಿಸಿದ್ದೆ. ಅದಕ್ಕೆ ಹಗೆತನದಲ್ಲಿ ದೂರು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್

You seem to have an Ad Blocker on.
To continue reading, please turn it off or whitelist Udayavani.