ಮಸ್ಕಿಯಲ್ಲಿ ಜೆಡಿಎಸ್ ಬಲ ಯಾರಿಗೆ?
ಬೆಂಬಲ ನಿರೀಕ್ಷೆಯಲ್ಲಿ ಕೈ-ಕಮಲ ನಾಯಕರು! ಅಭ್ಯರ್ಥಿ ಕಣಕ್ಕಿಳಿಸದೆ ಜಾಣ ನಡೆ ತೋರಿದ ದಳ
Team Udayavani, Mar 31, 2021, 10:00 PM IST
ರಾಯಚೂರು: ಮಸ್ಕಿ ಉಪಚುನಾವಣೆ ಕಣದಲ್ಲಿ ನಿರೀಕ್ಷೆಯಂತೆ ಕೈ-ಕಮಲದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಆದರೆ, ಸೂಕ್ತ ಅಭ್ಯರ್ಥಿ ಕೊರತೆ ಎದುರಿಸಿದ ಜೆಡಿಎಸ್ ತಟಸ್ಥವಾಗಿದ್ದು, ಯಾವ ಪಕ್ಷಕ್ಕೆ ಬೆಂಬಲ ನೀಡಲಿದೆ ಎನ್ನುವ ಕೌತುಕ ಮೂಡಿದೆ.
ಆರಂಭದಲ್ಲಿ ಪಕ್ಷದ ವರಿಷ್ಠರು ಭಿನ್ನ ಹೇಳಿಕೆ ನೀಡುವ ಮೂಲಕ ಸಾಕಷ್ಟು ಗೊಂದಲ ಮೂಡಿಸಿದ್ದರು. ಜಿಲ್ಲೆಗೆ ಭೇಟಿ ನೀಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಉಪಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಅದಾದ ಕೆಲವೇ ದಿನಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಾಲ ಮಾಡಿಯಾದರೂ ಉಪಚುನಾವಣೆಗೆ ಸ್ಪ ರ್ಧಿಸುವುದಾಗಿ ತಿಳಿಸಿದ್ದರು. ಇದರಿಂದ ಸ್ಥಳೀಯ ಮಟ್ಟದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿತಾದರೂ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಮೂಡಿತು.
ಅಭ್ಯರ್ಥಿ ಆಯ್ಕೆ ವಿಚಾರ ಬಂದಾಗ ಸೂಕ್ತ ಅಭ್ಯರ್ಥಿ ಸಿಗದೆ ಕಾರ್ಯಕರ್ತರ ಉತ್ಸಾಹ ಮಂಜಿನಂತೆ ಕರಗಿ ಹೋಗಿದೆ. ಕಾರಣ ಉಪಚುನಾವಣೆ ಕಣದಿಂದ ಜೆಡಿಎಸ್ ಹಿಂದಡಿ ಇಟ್ಟಿದೆ. ಆದರೆ, ಯಾರಿಗೆ ಬೆಂಬಲ ನೀಡಲಿದೆ ಎಂಬ ಪ್ರಶ್ನೆ ಮಾತ್ರ ಮುಂದುವರಿದಿದೆ. ಮಸ್ಕಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಹೊಂದಿವೆ ಎನ್ನುವುದು ಕಳೆದ ಚುನಾವಣೆಯಲ್ಲಿ ಸಾಬೀತಾಗಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯಾವುದಾದರೂ ಪಕ್ಷಕ್ಕೆ ತುಸು ಹಿನ್ನಡೆಯಾಗಿದ್ದರೆ ಜೆಡಿಎಸ್ ಬೆಂಬಲ ಕೈ ಹಿಡಿಯಬಹುದು ಎನ್ನುವ ಲೆಕ್ಕಾಚಾರವಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಜಾ ಸೋಮನಾಥ ನಾಯಕ ಉತ್ತಮ ಮತಗಳನ್ನು ಪಡೆದಿದ್ದರು. ಆ ಮತಗಳೆಲ್ಲ ಪಕ್ಷದ ಸಿದ್ಧಾಂತದಡಿಯೇ ಬಂದಿದ್ದಾದರೆ ಜೆಡಿಎಸ್ ಈ ಬಾರಿಯೂ ನಿರ್ಣಾಯಕ ಪಾತ್ರ ವಹಿಸಬಲ್ಲದು ಎಂದೇ ವಿಶ್ಲೇಷಿಸಲಾಗುತ್ತಿದೆ.
ಸಿದ್ಧಯ್ಯಸ್ವಾಮಿ ಕುಕುನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.