ರಾಮಮಂದಿರದೊಂದಿಗೆ ರಾಮರಾಜ್ಯ ಸ್ಥಾಪನೆಯಾಗಲಿ: ಪೇಜಾವರ ಶ್ರೀ

Team Udayavani, Jan 26, 2023, 7:40 AM IST

ರಾಮಮಂದಿರದೊಂದಿಗೆ ರಾಮರಾಜ್ಯ ಸ್ಥಾಪನೆಯಾಗಲಿ: ಪೇಜಾವರ ಶ್ರೀ

ಬೆಂಗಳೂರು: ಇನ್ನೊಂದು ವರ್ಷದಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ರಾಮ ರಾಜ್ಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಾಮರ್ಥ್ಯ ಇದ್ದವರು ಸೂರಿಲ್ಲದವರಿಗೆ ಮನೆ ಕಟ್ಟಿಸುವ ಕೈಂಕರ್ಯದಲ್ಲಿ ತೊಡಗಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಮುಂದಿನ ಮಕರ ಸಂಕ್ರಮಣದ ಬಳಿಕದ ಶುಭ ಲಗ್ನದಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪತ್ರಿಷ್ಠಾಪನೆ ನಡೆಯಲಿದೆ. ಈ ಸಂದರ್ಭವನ್ನು ಬಳಸಿಕೊಂಡು ಮುಂದಿನ ಒಂದು ವರ್ಷದಲ್ಲಿ ಸಾಧ್ಯವಾದಷ್ಟು ಸಮಾಜಪರ ಕೆಲಸ ಮಾಡಿ ರಾಮ ಮಂದಿರದ ಜತೆಗೆ ರಾಮ ರಾಜ್ಯ ಸ್ಥಾಪನೆ ಆಗುವಂತೆ ನೋಡಿಕೊಳ್ಳಬೇಕು. ಹಾಗಾಗಿ ವಸತಿ ಸೌಕರ್ಯ ಇಲ್ಲದವರಿಗೆ ವಸತಿ ಕಲ್ಪಿಸುವ ಪ್ರಯತ್ನವನ್ನು ಮಾಡೋಣ. ಕನಿಷ್ಠ 5 ಲಕ್ಷ ರೂ ವಿನಿಯೋಗಿಸಿ ಮನೆಯಿಲ್ಲದವರಿಗೆ ಮನೆ ಕಟ್ಟೋಣ ಎಂದು ತಿಳಿಸಿದರು.

ದೊಡ್ಡ ದೊಡ್ಡ ಸಂಸ್ಥೆಗಳು, ಕ್ಲಬ್‌, ಸೊಸೈಟಿಗಳು ಒಂದಿಡೀ ಗ್ರಾಮವನ್ನೇ ದತ್ತು ತೆಗೆದುಕೊಂಡು ಹತ್ತು ಮನೆಗಳನ್ನು ಕಟ್ಟಿಸಬಹುದು. ಪುತ್ತೂರಿನಲ್ಲಿ ಒಬ್ಬರು ಮುನ್ನೂರು, ಉಡುಪಿಯಲ್ಲಿ ಒಬ್ಬರು ಇನ್ನೂರು ಮನೆ ಕಟ್ಟಿಸಿದ ಉದಾಹರಣೆ ಇದೆ. ಇದು ಸಮಾಜದ ಇತರರಿಗೆ ಸ್ಫೂರ್ತಿಯಾಗಲಿ ಎಂದು ಸ್ವಾಮೀಜಿ ಆಶಿಸಿದರು.

ವಸತಿ ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಆ್ಯಪ್‌ ಒಂದನ್ನು ರಚಿಸುವ ಚಿಂತನೆ ಇದೆ. ಯೋಜನೆಯಲ್ಲಿ ಭಾಗಿಯಾಗುವ ಬಯಕೆ ಹೊಂದಿರುವವರನ್ನು ಆ್ಯಪ್‌ ಮೂಲಕ ಜೋಡಿಸುವ ಆಶಯ ಹೊಂದಲಾಗಿದೆ. ರಾಮ ರಾಜ್ಯ ಸಂಕಲ್ಪ ಎಂಬ ಈ ಅಭಿಯಾನಕ್ಕೆ ಪ್ರಧಾನ ಮಂತ್ರಿಗಳು ಚಾಲನೆ ನೀಡಬೇಕು ಎಂದು ತಾವು ಬಯಸಿರುವುದಾಗಿ ತಿಳಿಸಿದರು.

ಉಚಿತ ಸೇವೆ ನೀಡಿ
ವಕೀಲರು ಬಡ ಕಕ್ಷಿದಾರರಿಗೆ ಉಚಿತವಾಗಿ ಕಾನೂನು ನೆರವು, ವೈದ್ಯರು ಹತ್ತು ಜನ ಬಡ ರೋಗಿಗಳಿಗೆ ಚಿಕಿತ್ಸೆ, ಶಿಕ್ಷಕರು ಹತ್ತು ಜನ ವಿದ್ಯಾರ್ಥಿಗಳಿಗೆ ಟ್ಯೂಷನ್‌ ನೀಡುವುದು ಹೀಗೆ ಜನರು ತಮ್ಮ ವೃತ್ತಿಯ ಸೀಮೆಯ ಒಳಗೆಯೇ ಸಮಾಜಕ್ಕೆ ನೆರವು ನೀಡುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಈ ಹಿಂದೆ ರಾಜನೇ ರಾಜ್ಯ ಮುನ್ನಡೆಸುತ್ತಿದ್ದ ಹಿನ್ನೆಲೆಯಲ್ಲಿ ರಾಜ ರಾಮನಂತಿದ್ದರೆ ಸಾಕಿತ್ತು. ಆದರೆ ಈಗ ಪ್ರಜಾ ರಾಜ್ಯವಿದೆ. ಪ್ರಜೆಗಳೆಲ್ಲರೂ ರಾಮನಾಗುವ ಅಗತ್ಯವಿದೆ. ರಾಮನಲ್ಲಿದ್ದ ಸದ್ಗುಣಗಳನ್ನು ಪ್ರಜೆಗಳಲ್ಲಿ ತುಂಬಲು ಮುಂದಿನ ದಿನಗಳಲ್ಲಿ ರಾಮಾಯಣ ಅಧ್ಯಯನಕ್ಕೆ ವಿಶೇಷ ಒತ್ತು ನೀಡೋಣ. ರಾಮಯಣ ಪ್ರವಚನಗಳನ್ನು ಎಲ್ಲೆಡೆ ಆಯೋಜಿಸೋಣ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದರು.

ರಾಮಭಕ್ತಿ ಬೇರೆಯಲ್ಲ, ದೇಶ ಭಕ್ತಿ ಬೇರೆಯಲ್ಲ. ರಾಮಸೇವೆ ಬೇರೆಯಲ್ಲ, ದೇಶ ಸೇವೆ ಬೇರೆಯಲ್ಲ. ಸಂಕಷ್ಟದಲ್ಲಿರುವವರ ಸೇವೆ ಮಾಡುವುದೆಂದರೆ ರಾಮನಿಗೆ ಕಾಣಿಕೆ ಸಲ್ಲಿಸಿದಂತೆ ಎಂದು ಸ್ವಾಮೀಜಿ ಹೇಳಿದರು.

ರಾಮ ಟೀಕೆ ಪ್ರಚಾರದ ಗಿಮಿಕ್‌
ರಾಮ ಹಾಗೂ ರಾಮಚರಿತಾ ಮಾನಸವನ್ನು ಟೀಕಿಸುವ ವ್ಯಕ್ತಿಗಳನ್ನು ವೈಭವೀಕರಿಸುವ ಅಗತ್ಯವಿಲ್ಲ. ಅವರು ಕೇವಲ ಪ್ರಚಾರ ಪಡೆಯಲು ರಾಮನನ್ನು ಟೀಕಿಸುತ್ತಿದ್ದಾರೆ. ನಾವು ರಾಮಾಯಣದ ಆಶಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಕೆಲಸದಲ್ಲಿ ತೊಡಗೋಣ ಎಂದು ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.