Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Team Udayavani, Dec 21, 2024, 7:54 AM IST
ನವದೆಹಲಿ: ಕೊಬ್ಬರಿಗೆ ನೀಡಲಾಗುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಹೆಚ್ಚಿಸಿದೆ. ಈ ಮೂಲಕ ದೇಶದಲ್ಲಿ ಕೊಬ್ಬರಿ ಉತ್ಪಾದನೆಯಲ್ಲಿ ನಂಬರ್ 1 ಸ್ಥಾನ ಪಡೆದಿರುವ ಕರ್ನಾಟಕದ ರೈತರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಮಾಹಿತಿ ನೀಡಿದ್ದು, ಹೋಳಾದ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‌ಗೆ 422ರೂ. ಹೆಚ್ಚಿಸಲಾಗಿದ್ದು, ಉಂಡೆ ಕೊಬ್ಬರಿಯ ಬೆಲೆಯನ್ನು 100 ರೂ. ಹೆಚ್ಚಿಸಲಾಗಿದೆ. ಈ ಮೂಲಕ 2025ನೇ ಸಾಲಿನಲ್ಲಿ 1 ಕ್ವಿಂಟಲ್ ಹೋಳು ಕೊಬ್ಬರಿ (ಮಿಲ್ಲಿಂಗ್ ಕೊಬ್ಬರಿ) ಬೆಲೆ 12,100 ರೂ. ಹಾಗೂ, 1 ಕ್ವಿಂಟಲ್ ಉಂಡೆ ಕೊಬ್ಬರಿ ಬೆಲೆ 12,100ರೂ. ಗಳಿಗೆ ಏರಿಕೆಯಾಗಲಿದೆ ಎಂದಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಇದರಿಂದ ಕೇಂದ್ರದ ಬೊಕ್ಕಸಕ್ಕೆ 855 ಕೋಟಿ ರೂ. ವೆಚ್ಚವಾಗಲಿದೆ ಎಂದೂ ತಿಳಿಸಿದ್ದಾರೆ.
ಇನ್ನು ದೇಶದಲ್ಲಿ ಅತಿಹೆಚ್ಚು ಕೊಬ್ಬರಿ ಉತ್ಪಾದಿಸುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನವಿದ್ದು, ಶೇ.32.7ರಷ್ಟು ಕೊಬ್ಬರಿ ಕರ್ನಾಟಕದಲ್ಲಿ ಉತ್ಪಾದಿಸಲಾಗುತ್ತಿದೆ. ತಮಿಳುನಾಡು ಶೇ.25.7ರಷ್ಟು ಪಾಲಿನೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಕೇರಳ ಶೇ.25.4ರಷ್ಟು ಕೊಬ್ಬರಿ ಉತ್ಪಾದಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.