ಪ್ರವಾಹ ಬಂದ್ರೆ ಜನ ಸ್ಥಳಾಂತರಕ್ಕೆ ಸಜ್ಜಾಗಿ

ಸಚಿವ ಉಮೇಶ ಕತ್ತಿ ಸೂಚನೆ | 259 ಕಾಳಜಿ ಕೇಂದ್ರ ಸ್ಥಾಪನೆಗೆ ತಯಾರಿ | 188 ಗ್ರಾಮಗಳಲ್ಲಿ ಪ್ರವಾಹ ಸಾಧ್ಯತೆ

Team Udayavani, Jun 29, 2021, 5:46 PM IST

28 bgk-4

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಂದ ಉಂಟಾಗಬಹುದಾದ ಪ್ರವಾಹ ನಿಯಂತ್ರಣಕ್ಕೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ನೂತನ ಸಭಾಭವನದಲ್ಲಿ ಸೋಮವಾರ ಪ್ರವಾಹ ಮುಂಜಾಗ್ರತಾ ಕ್ರಮ ಹಾಗೂ ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಹದಿಂದ 188 ಗ್ರಾಮಗಳು ಭಾದಿತಗೊಳ್ಳುತ್ತಿದ್ದು, ಅವುಗಳ ಮೇಲೆ ನಿಗಾವಹಿಸಬೇಕು. ಪ್ರವಾಹ ಉಂಟಾದಲ್ಲಿ ಜನರ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗ್ರತವಾಗಿ ಗುರುತಿಸಿದ 259 ಕಾಳಜಿ ಕೇಂದ್ರಗಳ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ತಿಳಿಸಿದರು. ಜಿಲ್ಲೆಯಲ್ಲಿ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿಯ ಜಿಲ್ಲಾ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ಅವರಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸೂಚಿಸಿದರು.

ನಗರ ಪ್ರದೇಶದಲ್ಲಿ 24 ಗಂಟೆಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ ಮೂರುದಿನಗಳೊಳಗಾಗಿ ಟ್ರಾನ್ಸ್‌ ಫಾರ್ಮರ್‌ ಸೇರಿದಂತೆ ವಿದ್ಯುತ್‌ ಪ್ರಸರಣಕ್ಕೆ ಸಂಭಂದಿಸಿದಂತ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ಸಚಿವರು ಸೂಚಿಸಿದರು. ರೈತರಿಗೆ ಬೀಜ ಗೊಬ್ಬರಗಳ ಕೊರತೆ ಆಗದಂತೆ ಕ್ರಮ ವಹಿಸಲು ಸಚಿವರು ತಿಳಿಸಿದರು.

ನೆರೆ ಹಾವಳಿಗೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ ಕಾಪ್ಟನ್‌ ಡಾ|ಕೆ.ರಾಜೇಂದ್ರ ಮಾತನಾಡಿ ಪ್ರವಾಹ ನಿಯಂತ್ರಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಅದಕ್ಕಾಗಿ ಜಿಲ್ಲೆಗಳ ಎಲ್ಲ ತಾಲೂಕುಗಳ ಒಳಗೊಂಡಂತೆ ಒಟ್ಟು 466 ಸ್ವಯಂ ಸೇವಕರನ್ನು, 66 ಎನ್‌ಜಿಒ ಗಳನ್ನು, 476 ಹಾವು ಹಾವು ಹಿಡಿಯುವವರು ಸೇರಿ ಒಟ್ಟು 1036 ಜನರನ್ನು ಸಿದ್ಧಗೊಳಿಸಲಾಗಿದೆ. ಎನ್‌ಡಿಆರ್‌ ಎಫ್‌, ಎಸ್‌ಡಿಆರ್‌ಎಫ್‌, ಕುಡಿಯುವ ನೀರು, ಕೋವಿಡ್‌ ಸೇರಿದಂತೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 66.99 ಕೋಟಿ ರೂ. ಇರುವುದಾಗಿ ಹೇಳಿದರು.

ಜಾನುವಾರುಗಳಿಗೆ 679126 ಟನ್‌ ಮೇವಿನ ಸಂಗ್ರಹವಿದೆ. ದಿನದ 24 ಗಂಟೆಗಳ ತುರ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಸೆರ್ಕ್ನೂ ಉಪಕರಣಗಳನ್ನು ಬೇಡಿಕೆಯಂತೆ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಾದ ಅಕಾಲಿಕ ಮಳೆಯಿಂದ ಸಿಡಿಲಿನಿಂದ 3 ಜನ ಮೃತಪಟ್ಟಿರುತ್ತಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳಿಗೆ ತಲಾ 5 ಲಕ್ಷಗಳಂತೆ ಪರಿಹಾರಧನ ನೀಡಲಾಗಿದೆ. ಅಲ್ಲದೇ 29 ಜಾನುವಾರುಗಳು ಸಿಡಿಲಿಗೆ ಬಲಿಯಾಗಿವೆ. ಈ ಪೈಕಿ 1.77 ಲಕ್ಷ ರೂ. ಗಳ ಪರಿಹಾರಧನ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌. ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 466 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 317 ಕೋವಿಡ್‌ ಕೇರ್‌ ಸೆಂಟರ್‌ನಲ್ಲಿದ್ದರೆ ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲನೇ ಅಲೆಯಲ್ಲಿ 136 ಜನ ಮೃತಪಟ್ಟರೆ, 2ನೇ ಅಲೆಯಲ್ಲಿ 178 ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 531997 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ. ಅದರಲ್ಲಿ ಕೋವಾಕ್ಸಿನ್‌ 113529, ಕೋವಿಶಿಲ್ಡ್‌ 418468 ಡೋಸ್‌ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನಪರಿಷತ್‌ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಭೂಬಾಲನ್‌, ಉಪ ಕಾರ್ಯದರ್ಶಿ ಅಮರೇಶ ನಾಯಕ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.