HDK ಹೇಳಿಕೆಗೆ ಸಚಿವರ ಕಿಡಿ: ನಮ್ಮಲ್ಲಿ ಯಾರೂ ಶಿಂಧೆ, ಪವಾರ್‌ ಇಲ್ಲ ಎಂದ ಕಾಂಗ್ರೆಸ್‌ ನಾಯಕರು

Team Udayavani, Dec 11, 2023, 7:47 PM IST

HDK ಹೇಳಿಕೆಗೆ ಸಚಿವರ ಕಿಡಿ: ನಮ್ಮಲ್ಲಿ ಯಾರೂ ಶಿಂಧೆ, ಪವಾರ್‌ ಇಲ್ಲ ಎಂದ ಕಾಂಗ್ರೆಸ್‌ ನಾಯಕರು

ಸುವರ್ಣ ವಿಧಾನಸೌಧ: “ಪ್ರಭಾವಿ ಸಚಿವರೊಬ್ಬರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ’ ಎಂಬ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಚಿವರು, ನಮ್ಮಲ್ಲಿ ಯಾರೂ ಶಿಂಧೆ, ಪವಾರ್‌ ಇಲ್ಲ. ಈ ರೀತಿ ಸುಳ್ಳು ಪ್ರಚಾರ ಮಾಡುವ ಮೂಲಕ ಸರ್ಕಾರದ ಇಮೇಜ್‌ಗೆ ಧಕ್ಕೆ ತರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸತೀಶ್‌ ಜಾರಕಿಹೊಳಿ ಮಾತನಾಡಿ, ನಾನೇನೂ ದೆಹಲಿಗೆ ಹೋಗಿಲ್ವಲ್ಲ. ದೆಹಲಿಗೆ ಹೋದವರನ್ನು ಕೇಳಬೇಕು. ಕುಮಾರಸ್ವಾಮಿ ಅವರು ಆ ಪ್ರಭಾವಿ ಸಚಿವರು ಯಾರು ಅಂತ ಹೇಳಿದ್ದರೆ, ಮುಗಿದು ಹೋಗುತ್ತಿತ್ತು. ಈ ಗೊಂದಲಕ್ಕೆ ಅವಕಾಶ ಇರುತ್ತಿರಲಿಲ್ಲ ಎಂದು ಹೇಳಿದರು.

ಸೋಮವಾರ ಸದನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾರೂ ಶಿಂಧೆ, ಪವಾರ್‌ ಇಲ್ಲ. ಹಾಗಾಗಿ, ಇದೆಲ್ಲಾ ಊಹಾಪೋಹ. ಒಂದು ವೇಳೆ ನಿಜವಾಗಿದ್ದರೆ, ಆ ಪ್ರಭಾವಿ ಸಚಿವರು ಯಾರು ಎಂದು ಹೇಳಿದ್ದರೂ ಸಾಕಿತ್ತು ಎಂದು ತಿಳಿಸಿದರು.

ಪ್ರಯತ್ನ ನಡೆಯುತ್ತಲೇ ಇದೆ: ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, ಪದೇ ಪದೆ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಯುತ್ತಲೇ ಇದೆ. ಆ ರೀತಿಯ ಅಭಿಪ್ರಾಯ ಇರುವುದನ್ನು ಸರಿಪಡಿಸಿಕೊಂಡು ಹೋಗುವ ಕೆಲಸ ಆಗುತ್ತಿದೆ. ಹಿಂದೆ ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ಹಲವು ಶಾಸಕರು ಸೋತು ಮನೆ ಸೇರಿದ್ದಾರೆ. ಸುಳ್ಳು ಪ್ರಚಾರ ಮಾಡುವ ಮೂಲಕ ಸರ್ಕಾರದ ಇಮೇಜ್‌ಗೆ ಧಕ್ಕೆ ತರುವ ಪ್ರಯತ್ನ ಸರಿಯಲ್ಲ ಎಂದು ಹೇಳಿದರು.

ಅಧಿಕಾರ ಇಲ್ಲದೆ ಇರೋಕ್ಕಾಗಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಜೆಡಿಎಸ್‌ ಅನ್ನು ಜನ ಹೀನಾಯವಾಗಿ ಸೋಲಿಸಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದು ಗೌರವಯುತವಾಗಿ ಜನರ ಕೆಲಸ ಮಾಡಬೇಕು. ಅಧಿಕಾರ ಇಲ್ಲದೆ ಇರಲಾಗಲ್ಲ ಎಂದು ಈ ರೀತಿ ವರ್ತಿಸುವುದು ಶೋಭೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಪತನ ಮಾಡಬೇಕು ಎಂಬುದೇ ಅವರ ರಾಜಕಾರಣವಾದರೆ ಏನು ಹೇಳಬೇಕು? ಕಳೆದ ಚುನಾವಣೆಯಲ್ಲಿ ಏನಾಯ್ತು ಎಂದು ತಿಳಿದುಕೊಂಡು ಹೆಜ್ಜೆ ಇಡಲಿ. ನಮ್ಮ ಸರ್ಕಾರ ಐದು ವರ್ಷ ಪೂರೈಸಲಿದೆ. ಯಾವುದೇ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇರುತ್ತದೆ. ಅದಕ್ಕೆ ಕಾದು, ಸರ್ಕಾರ ಬೀಳಿಸುವುದು ಒಂದೇ ಉದ್ದೇಶವೇ? ರಾಜಕಾರಣ ಅಷ್ಟೇನಾ ಎಂದು ಕೇಳಿದರು.

ಲೋಕಸಭೆ ಮುನ್ನ ಜೆಡಿಎಸ್‌ 5ಕ್ಕೆ ಇಳಿಕೆ: ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಲೋಕಸಭೆ ಚುನಾವಣೆ ಮುಂಚೆ ಜೆಡಿಎಸ್‌ ಅಸ್ತಿತ್ವ ಏನಾಗುತ್ತದೆ ಎಂಬುದರ ಬಗ್ಗೆ ಕಾಳಜಿ ವಹಿಸಿದ್ರೆ ಒಳ್ಳೆಯದು ಎಂದು ತೀಕ್ಷ್ಣವಾಗಿ ಹೇಳಿದರು. 50-60 ಜನ ಇದ್ದರೆ, ಅವರೇ ಸಿಎಂ ಆಗುತ್ತಾರಲ್ಲಾ? ಒಡೆಯೋದು ಏನಿಲ್ಲ. ಸುಮ್ಮನೆ ಸುದ್ದಿಯಲ್ಲಿ ಇರುವುದಕ್ಕಾಗಿ ಹೀಗೆ ಮಾತನಾಡುವುದು ಸರಿಯಲ್ಲ. ಲೋಕಸಭಾ ಚುನಾವಣೆ ಮೊದಲೇ ಜೆಡಿಎಸ್‌ನಲ್ಲಿ ಐವರು ಶಾಸಕರು ಉಳಿಯುತ್ತಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub