ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ: ಯೋಜನೆಗಳಲ್ಲಿ ಶೇ.100ರಷ್ಟು ಪ್ರಗತಿ
Team Udayavani, Jul 15, 2019, 5:04 AM IST
ಉಡುಪಿ: ಜಿಲ್ಲೆಯ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ 2018-19ನೇ ಸಾಲಿನ ಸ್ವಯಂ ಉದ್ಯೋಗ, ಶ್ರಮಶಕ್ತಿ ಯೋಜನೆ, ಗಂಗಾ ಕಲ್ಯಾಣ ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದೆ. ನಿಗಮ ನೀಡುವ ಗುರಿಗಿಂತ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ದುಪ್ಪಟ್ಟಾಗಿದೆ.
ಸ್ವಯಂ ಉದ್ಯೋಗ ಯೋಜನೆ
ಜಿಲ್ಲೆಯಲ್ಲಿ “ಸ್ವಯಂ ಉದ್ಯೋಗ’ ಯೋಜನೆಯಡಿ ನಿಗಮಕ್ಕೆ ನೀಡುವ ಗುರಿಗಿಂತ ಮೂರುಪಟ್ಟು ಅಧಿಕ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. 2018-19ರಲ್ಲಿ 59 ಭೌತಿಕ ಗುರಿ, 52.90 ಲ.ರೂ. ಆರ್ಥಿಕ ಗುರಿ ನೀಡಲಾಗಿತ್ತು. 2.37 ಕೊ.ರೂ. ಮೊತ್ತದ 172 ಅರ್ಜಿಗಳು ಸ್ವೀಕೃತಗೊಂಡಿವೆ. ಈ ಯೋಜನೆಯಡಿಯಲ್ಲಿ ಬ್ಯಾಂಕ್, ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5 ಲ.ರೂ. ಮಿತಿ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. 5 ಲ.ರೂ.ಗೆ ಶೇ. 33ರಷ್ಟು ಹಾಗೂ 1 ಲ.ರೂ. ಮಿತಿಯೊಳಗಿರುವ ಯೋಜನೆಗೆ ಶೇ. 50ರಷ್ಟು ಸಹಾಯಧನ ನಿಗಮ ನೀಡಲಿದೆ.
ಶ್ರಮಶಕ್ತಿ; ಸ್ವೀಕೃತ ಅರ್ಜಿ 5,908
ನಿಗಮದಿಂದ ಶ್ರಮಶಕ್ತಿ ಯೋಜನೆಯಡಿ 2018-19ನೇ ಸಾಲಿನಲ್ಲಿ ಜಿಲ್ಲೆಗೆ ಕೇವಲ 77 ಭೌತಿಕ ಹಾಗೂ 38.35 ಲ.ರೂ. ಆರ್ಥಿಕ ಗುರಿ ನೀಡಲಾಗಿದೆ. ಆದರೆ 29.54 ಕೊ.ರೂ. ಮೊತ್ತದ 5,908 ಅರ್ಜಿಗಳು ಸ್ವೀಕೃತಗೊಂಡಿವೆ. 2016-17ರಲ್ಲಿ 262 ಭೌತಿಕ ಹಾಗೂ ಆರ್ಥಿಕ 1.31ಕೋ. ಗುರಿ ನಿಗದಿ ಪಡಿಸಿದ್ದು, ಆದರೆ ಸಲ್ಲಿಕೆಯಾದ ಅರ್ಜಿಗಳ ಸಂಖ್ಯೆ 673. ಈ ಯೋಜನೆಯಡಿ 50,000 ರೂ. ಮೊತ್ತವನ್ನು ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ನಿಗದಿತ ಸಮಯದೊಳಗೆ ಸಾಲ ಮರುಪಾವತಿ ಮಾಡಿದರೆ ಅರ್ಜಿದಾರರಿಗೆ ಶೇ.50ರಷ್ಟು ಬ್ಯಾಕ್ ಎಂಡ್ ಸಹಾಯಧನ ಸಿಗಲಿದೆ.
ಗಂಗಾ ಕಲ್ಯಾಣ ಯೋಜನೆ
ಈ ಯೋಜನೆಯಡಿ 2018-19ನೇ ಸಾಲಿನಲ್ಲಿ ನಿಗಮಕ್ಕೆ ಭೌತಿಕ 41, ಆರ್ಥಿಕ 82 ಲ.ರೂ., ಗುರಿ ನೀಡಿದ್ದು, 43 ಅರ್ಜಿ ಸ್ವೀಕೃತವಾಗಿದೆ. 2016-17ರಲ್ಲಿ 58 ಭೌತಿಕ ಹಾಗೂ ಆರ್ಥಿಕ 87 ಕೋ. ರೂ. ಗುರಿ ನಿಗದಿಪಡಿಸಿದ್ದು, 58 ಅರ್ಜಿಗಳು ಸಲ್ಲಿಕೆಯಾಗಿವೆೆ. ಈ ಯೋಜನೆಯಡಿ ಕೃಷಿ ಭೂಮಿ ಹೊಂದಿರುವ ರೈತರಿಗೆ ಕೊಳವೆ ಬಾವಿ, ಪಂಪ್, ವಿದ್ಯುದೀಕರಣಕ್ಕೆ, ಬಾವಿ ನಿರ್ಮಿಸಲು ಆರ್ಥಿಕ ನೆರವು ನೀಡಲಾಗುತ್ತದೆ.
ಸ್ಪಂದನೆ ಉತ್ತಮವಾಗಿದೆ ಯಾಕೆ?
ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಶ್ರಮಶಕ್ತಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ಹಾಗೂ ಗರಿಷ್ಠ ಮಿತಿಯಲ್ಲಿ ಸಹಾಯಧನ ನೀಡಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಯುವ ಜನರು ಸ್ವ ಉದ್ಯೋಗ ಪ್ರಾರಂಭಿಸಲು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ.
ಫಲಾನುಭವಿಗಳ ಆಯ್ಕೆ
ಯೋಜನೆಗಳಿಗೆ ಉತ್ತಮ ಸ್ಪಂದನೆ ಇದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
-ಮುಹಮ್ಮದ್ ಶಾಫಾÌನ್, ಅಲ್ಪಸಂಖ್ಯಾಕ ನಿಗಮದ ವ್ಯವಸ್ಥಾಪಕ, ಉಡುಪಿ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.