ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Team Udayavani, Dec 31, 2024, 10:16 AM IST
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ. ಡೆತ್ ನೋಟ್ ನಲ್ಲಿ ಅವರ ಹೆಸರು ಉಲ್ಲೇಖಿಸಲಾಗಿಲ್ಲ ಆದರೂ ಅವರ ವಿರುದ್ದ ಬಿಜೆಪಿಯ ಷಡ್ಯಂತ್ರ ರೂಪಿಸುತ್ತಿದ್ದು ಪ್ರಕರಣವನ್ನು ಸಿಬಿಐ ವಹಿಸುವಂತೆ ಒತ್ತಾಯಿಸುತ್ತಿದೆ. ಇದು ಖಂಡನಾರ್ಹವಾಗಿದೆ ಎಂದು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ. ರಾಜ್ಯದ ಪೊಲೀಸರು ಸಮರ್ಥರಿದ್ದು ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರಲಿದ್ದಾರೆ. ಹಾಗಾಗಿ ಸಿಬಿಐ ಗೆ ವಹಿಸುವ ಪ್ರಮೇಯವೇ ಇಲ್ಲ ಹಾಗೂ ಸಚಿವರು ರಾಜೀನಾಮೆ ನೀಡುವ ಅವಶ್ಯಕತೆಯೇ ಇಲ್ಲ.
ಪ್ರಿಯಾಂಕ್ ಖರ್ಗೆ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಸಚಿವರಾಗಿದ್ದು ಅವರಿಗೆ ವಹಿಸಿದ ಐಟಿ ಬಿಟಿ ಖಾತೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಚಿಕ್ಕ ವಯಸ್ಸಿನಲ್ಲಿಯೇ ಅವರು ರಾಜಕೀಯವಾಗಿ ಎತ್ತರಕ್ಕೆ ಏರುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ನಾಯಕರು ಹೊಟ್ಟೆಕಿಚ್ಚಿನಿಂದ ಈ ಪ್ರಕರಣವನ್ನು ತಮ್ಮ ಕೀಳು ಮಟ್ಟದ ರಾಜಕೀಯಕ್ಕೆ ಬಳೆಸುತ್ತಿದ್ದಾರೆ. ಇದು ಅತ್ಯಂತ ಹೇಯವಾಗಿದ್ದು ಖಂಡನಾರ್ಹವಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕವಾಗಿ ನಾನು ಸಚಿವರ ಬೆನ್ನಿಗಿದ್ದೇವೆ. ತನಿಖೆಯ ನಂತರ ಬಿಜೆಪಿಯ ಷಡ್ಯಂತ್ರ ಬಯಲಿಗೆ ಬರಲಿದೆ. ವಿರೋಧ ಪಕ್ಷವಾಗಿ ವೈಫಲ್ಯವಾಗಿರುವ ಬಿಜೆಪಿ ಸುಳ್ಳು ಅಪಾದನೆ ಮಾಡುತ್ತಾ ಸರ್ಕಾರಕ್ಕೆ ಹಾಗೂ ಸಚಿವರಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ. ಬಿಜೆಪಿಯ ಎಲ್ಲ ಆಟಗಳನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.