“ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಾಗಿ ಮೋದಿ ಮತ್ತೆ  ಧಾನಿಯಾಗಲಿ’

Team Udayavani, Apr 10, 2019, 6:00 AM IST

g-20

ಚಿಲಿಂಬಿ: ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಾಗಿ ಮತ್ತು ಭಾರತವನ್ನು ಬಲಿಷ್ಠ ದೇಶವಾಗಿಸಲು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಅವರ ನೇತೃತ್ವ ದಲ್ಲಿ ಮತ್ತೂಮ್ಮೆ ಪ್ರಚಂಡ ಬಹುಮತದ ಸರಕಾರ ಬಂದಲ್ಲಿ ಭಾರತ ವಿಶ್ವಕ್ಕೆ ಗುರುವಾಗಲಿದೆ ಎಂದು ಮಾಜಿ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ನಗರದ ಚಿಲಿಂಬಿಗುಡ್ಡೆಯ ಶ್ರೀ ರಾಮಾಂಜನೇಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ 24ನೇ ವಾರ್ಡ್‌ನ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಂಗಳವಾರ ಮಾತನಾಡಿದರು.
1996ರಿಂದ ದ.ಕ. ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದೆ. ಹಾಲಿ ಸಂಸದ, ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರು ಈಗಾಗಲೇ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ. ದ.ಕ. ಜಿಲ್ಲೆಗೆ ಅವರು ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ದ.ಕ. ಜಿಲ್ಲೆಯಿಂದ ದೊಡ್ಡ ಮಟ್ಟಿನ ಅಪೇಕ್ಷೆ ಇಡಲಾಗಿದೆ. ಜನಸಾಮಾನ್ಯರಿಂದ ಹಿಡಿದು ಸೈನಿಕರವರೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ ಏಕೈಕ ಪ್ರಧಾನಿ ಮೋದಿ. ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕಾದರೆ ಈ ಜಿಲ್ಲೆಯ ಜನತೆ ನಳಿನ್‌ ಕುಮಾರ್‌ ಅವರನ್ನು ಮೂರನೇ ಬಾರಿಗೆ ಗೆಲ್ಲಿಸಿ ಸಂಸತ್‌ಗೆ ಕಳುಹಿಸಬೇಕು ಎಂದರು.

ಮತದಾನ ನಮ್ಮ ಪರಮ ಕರ್ತವ್ಯ ವಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ತಿಳಿಸಿದರು.

ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಮಾತನಾಡಿ, ಪ್ರಧಾನಿ ಮೋದಿಯವರು ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಜತೆಗೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹ ಮಾಡು ವಲ್ಲಿಯೂ ಸತತ ಪ್ರಯತ್ನಗಳನ್ನು ಮಾಡು ತ್ತಿದ್ದಾರೆ. ದೇಶದ ಪ್ರತಿಯೊಬ್ಬ ವ್ಯಕ್ತಿ ಕೂಡ ಚೌಕಿದಾರನಾಗಿ, ಭಾರತವನ್ನು ಯಶಸ್ವಿ ಯಾಗಿ ಮುನ್ನಡೆಸಿ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಹಾಗಾಗಿ ದ.ಕ. ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮತ ಪಡೆದು ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರು ಗೆಲ್ಲುತ್ತಾರೆ. ದೇಶದಲ್ಲಿ 300ಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.

ಪಕ್ಷದ ಪ್ರಮುಖರಾದ ರಾಮಚಂದ್ರ ಬೈಕಂಪಾಡಿ, ಜನಾರ್ದನ ಕುಡ್ವ, ರಮೇಶ್‌ ಕಂಡೆಟ್ಟು, ಉಮಾನಾಥ ಅಮೀನ್‌, ವಾಸುದೇವ್‌, ಗುರು ಪ್ರಸಾದ್‌, ಉಮೇಶ್‌ ಶೆಟ್ಟಿ, ಸಚಿನ್‌ ರಾಜ್‌ಗೋಪಾಲ್‌ ರೈ, ಸಂತೋಷ್‌ ಉಳ್ಳಾಲ್‌, ಪಕ್ಷದ ಸ್ಥಳೀಯ ಮುಖಂಡರಾದ ಗುರುದತ್‌, ಸುನಂದಾ, ಸುರೇಖಾ ಹೆಗ್ಡೆ, ಚಂದ್ರಾವತಿ, ಲೋಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು. ರಾಜ್‌ಗೋಪಾಲ್‌ ರೈ ಸ್ವಾಗತಿಸಿದರು. ವಾರ್ಡ್‌ ಅಧ್ಯಕ್ಷ ಸುರೇಶ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.