ಮುಂಗಾರು ಮತ್ತೆ ಚುರುಕು: ವಿವಿಧೆಡೆ ಉತ್ತಮ ಮಳೆ
Team Udayavani, Jul 3, 2020, 6:38 AM IST
ಮಹಾನಗರ: ಕೆಲವು ದಿನಗಳಿಂದ ದುರ್ಬಲಗೊಂಡ ಮುಂಗಾರು ಗುರುವಾರ ಮತ್ತೆ ಚುರುಕುಗೊಂಡಿದೆ. ಸಂಜೆ ವೇಳೆ ನಗರಾದ್ಯಂತ ಉತ್ತಮ ಮಳೆಯಾಗಿದ್ದು, ಕೆಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ.
ಮೂರು ದಿನ “ಆರೆಂಜ್ ಅಲರ್ಟ್’
ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮಾಹಿತಿಯಂತೆ ಮುಂದಿನ ಮೂರು ದಿನಗಳ ಕಾಲ ರಾಜ್ಯ ಕರಾವಳಿ ಭಾಗದಲ್ಲಿ “ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.
ಈ ಪ್ರಕಾರ ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಂಭವವಿದೆ. ಈ ವೇಳೆ ಭಾರೀ ಮಳೆಯ ಜತೆ ಗಾಳಿ, ಗುಡುಗು ಕೂಡ ಇರಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.
ಕೆಲವು ದಿನ ಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿತ್ತು. ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಇನ್ನೆರಡು ದಿನಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
ಮೂಡುಬಿದಿರೆ: ಭಾರೀ ಮಳೆ
ಮೂಡುಬಿದಿರೆ: ಗುರುವಾರ ಮೂಡು ಬಿದಿರೆಯಲ್ಲಿ ಆಗಾಗ ಮಳೆ ಬೀಳುತ್ತಿದ್ದು, ಅಪರಾಹ್ನ 4 ಗಂಟೆ ವೇಳೆಗೆ ಗುಡುಗು -ಸಿಡಿಲು ಸಹಿತ ಭಾರೀ ಮಳೆ ಸುರಿಯಿತು.
ಸುರತ್ಕಲ್: ಕೆಲವೆಡೆ ಮನೆಗಳಿಗೆ ನೀರು
ಸುರತ್ಕಲ್: ಪಣಂಬೂರು, ಸುರತ್ಕಲ್‌ವಾÂಪ್ತಿಯಲ್ಲಿ ಗುರುವಾರ ಭಾರೀ ಮಳೆಯಾಗಿದೆ. ಕೆಲವಡೆ ತಗ್ಗು ಪ್ರದೇಶದಲ್ಲಿ ನೀರು ನಿಂತು ಹಲವು ಮನೆಗಳಿಗೆ ಸಮಸ್ಯೆಯಾಗಿದೆ.
ಈ ಭಾರೀ ಮಳೆಗೆ ಮುನ್ನ ಚರಂಡಿ ದುರಸ್ತಿ ಪಡಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗದಿದ್ದರೂ ಕೃಷ್ಣಾಪುರದ ಕೆಲವೆಡೆ ತಗ್ಗು ಪ್ರದೇಶದ ಮನೆಗೆ ಚರಂಡಿ ಸಮಸ್ಯೆಯಿಂದ ನೀರು ನಿಂತಿದೆ.
ತುರ್ತು ಸಹಾಯವಾಣಿ
ಜಿಲ್ಲಾಡಳಿತ 1077
ಪಾಲಿಕೆ ಕಚೇರಿ 0824: 2220306
ಅರಣ್ಯ ಇಲಾಖೆ 0824-2423913
ಮೆಸ್ಕಾಂ 1912
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.