ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Team Udayavani, Dec 4, 2024, 1:46 PM IST
ಉಡುಪಿ/ ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು.
ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66 ರ ಮೂಲ ಡಿಸೈನ್ ನಲ್ಲಿ ಆಗಿರುವ ಲೋಪದೋಷಗಳಿಂದ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ ಕಟಪಾಡಿ, ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆ ಇವುಗಳೆಲ್ಲದರ ಪೂರ್ಣ ಅಧ್ಯಯನ ಮತ್ತು ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞ ಇಂಜಿನಿಯರ್ ಗಳ ಸಮಿತಿಯೊಂದನ್ನು ರಚಿಸಿ NH. 66 ರ ಬಗ್ಗೆ ಅಧ್ಯಯನ ನಡೆಸಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಚಹರೆಗಳನ್ನು ಪುನರ್ ನಿರ್ಮಿಸಬೇಕೆಂದು ಚರ್ಚೆ ನಡೆಸಿದರು.
ಅಫಘಾತಗಳು ಸೇರಿದಂತೆ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲಿಸಿ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದರು.
ಬ್ರಹ್ಮಾವರ, ಕೋಟ, ಕುಂದಾಪುರ ರಸ್ತೆ ದುರಸ್ತಿಯ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಕಲ್ಯಾಣಪುರ – ಸಂತೆಕಟ್ಟೆ ಮತ್ತು ಮಣಿಪಾಲದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಚುರುಕಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ (CRF) ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.
ಸಂಸದ ಕೋಟ ಮತ್ತು ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಶ್ರೀ ಮಂಜುನಾಥ ಕೋಲಾರ ಸಂಸದ ಮಲ್ಲೇಶ್ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.