Mysore: ಮೈಸೂರಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ
930 ತಪಾಸಣೆ ಮಾಡಿ 17 ಮಂದಿ ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
Team Udayavani, Dec 7, 2023, 10:15 AM IST
ಮೈಸೂರು: ಬಿಗಿ ಕಾನೂನು, ನಿರಂತರ ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 93 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ನಿರಂತರವಾಗಿ ತಾಲೂಕು, ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳ ನಡೆಸಿದ್ದರೂ, ಬಾಲ ಕಾರ್ಮಿಕ ಪದ್ಧತಿ ಜಾರಿಯಲ್ಲಿದೆ. ಕಳೆದ ಮೂರು ವರ್ಷದಲ್ಲಿ ಹೋಟೆಲ್ ಉದ್ಯಮ, ಗುಜರಿ, ಗ್ಯಾರೇಜ್, ಬೇಕರಿ ಮತ್ತಿತರ ಕಡೆಗಳಲ್ಲಿ 93 ಮಂದಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಲಾಗಿದೆ. ವಿಶೇ ಷವೆಂದರೆ ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ನಗರ ಪ್ರದೇಶದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ.
5 ದಿನಗಳಲ್ಲಿ 08 ಮಕ್ಕಳ ರಕ್ಷಣೆ: ಕಳೆದೊಂದು ವಾರದಲ್ಲಿ ಜಿಲ್ಲಾದ್ಯಂತ 30ಕ್ಕೂ ಹೆಚ್ಚು ಕಾರ್ಯಾಚರಣೆ ನಡೆಸಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು 8 ಮಕ್ಕಳನ್ನು ರಕ್ಷಣೆ ಮಾಡಿ ಬಾಲಕರ ಬಾಲ ಮಂದಿರಕ್ಕೆ ಒಪ್ಪಿಸಿದೆ.
ಡಿ. 2ರಂದು ನಂಜನಗೂಡು ತಾಲೂಕಿನಲ್ಲಿ ಹೋಟೆಲ್ ಮತ್ತು ಬೇಕರಿಯಲ್ಲಿ ಕೆಲಸ ಮಾಡು ತ್ತಿದ್ದ 18 ವರ್ಷದೊಳಗಿನ ಇಬ್ಬರು ಕಿಶೋರಾವಸ್ಥೆ ಮಕ್ಕಳನ್ನು ರಕ್ಷಣೆ ಮಾಡಿದ್ದರೆ, ಡಿ.4ರಂದು ನಗರದ ಹೆಬ್ಬಾಳದಲ್ಲಿನ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದ 3 ಮಂದಿ ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಲಾಗಿದೆ. ಹಾಗೆಯೇ ಡಿ.6ರಂದು ಬುಧವಾರ ಹುಣಸೂರಿನ ಹೋಟಲ್ ಮೇಲೆ ದಾಳಿ ನಡೆಸಿ, ಇಬ್ಬರು ಕಿಶೋರಾವಸ್ಥೆ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲಾದ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಬಳಿಕ ಸರ್ಕಾರಿ ಬಾಲಕರ ಬಾಲ ಮಂದಿರಕ್ಕೆ ಒಪ್ಪಿಸಲಾಗಿದೆ. ಹಾಗೆಯೇ ಮಕ್ಕ ಳನ್ನು ಕೆಲಸಕ್ಕೆ ಬಳಸಿಕೊಂಡಿರುವ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ
ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ.
ವಿವಿಧ ಪೊಲೀಸ್ ಠಾಣೆಯಲ್ಲಿ 15 ಎಫ್ಐಆರ್: ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಯೊಂದಿಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಿರಂತರ ತಪಾಸಣಾ ಕಾರ್ಯದೊಂದಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದ್ದರೂ ಬಾಲಕ ಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ.
ಈ ಸಂಬಂಧ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇರಿಸಿ ಕೊಂಡಿದ್ದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಿವಿಧ ಪೊಲೀಸ್ ಠಾಣೆಯಲ್ಲಿ 15 ಎಫ್ ಐಆರ್ ದಾಖಲಾಗಿದೆ. ಜತೆಗೆ 65 ಪ್ರಕರಣಗಳು ನ್ಯಾಯಾಲಯದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರಂತರ ಕಾರ್ಯಾಚರಣೆ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿಯಂತ್ರಣದ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ನೆರೆ ಜಿಲ್ಲೆ ಸೇರಿದಂತೆ ಗ್ರಾಮಾಂತರ ಪ್ರದೇಶದಿಂದ ನಗರಕ್ಕೆ ಉದ್ಯೋಗ ಅರಸಿ ಬರುವ ಕುಟುಂಬದವರು,
ಜೀವನೋಪಾಯಕ್ಕಾಗಿ ತಮ್ಮ ಮಕ್ಕಳನ್ನು ಸಹ ಕೆಲಸಕ್ಕೆ ಕಳುಹಿಸಿದರೆ ಜೀವನಕ್ಕೆ ಅನುಕೂಲವಾಗಬಹುದು ಎಂಬ ಉದ್ದೇಶದಿಂದ ಕಳುಹಿಸುತ್ತಿದ್ದಾರೆ. ಇದರಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಮಕ್ಕಳ ಭವಿಷ್ಯ ಕತ್ತಲಿನಲ್ಲಿಡುವಂತಾಗಿದೆ. ಈ ಬಗ್ಗೆ ಮಕ್ಕಳನ್ನು ಕೆಲಸಕ್ಕೆ ಕಳುಹಿಸದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಎಲ್ಲೆಡೆ ನಿರಂತರವಾಗಿ ಕರ ಪತ್ರ ಹಂಚುವ ಮೂಲಕ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯ ಕ್ರಮಗಳನ್ನು ನಡೆಸುತ್ತಿದ್ದಾರೆ.
ವರ್ಷದಲ್ಲಿ 900ಕ್ಕೂಹೆಚ್ಚು ತಪಾಸಣೆ 2022-23ರಲ್ಲಿ 71 ಬಾಲ ಕಾರ್ಮಿಕರು ಪತ್ತೆಯಾದ್ದರಿಂದ ತಪಾಸಣಾ ಕಾರ್ಯವನ್ನು
ತೀವ್ರಗೊಳಿಸಿದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, 2023ರ ಏಪ್ರಿಲ್‌ನಿಂದ ಇವರೆಗೆ ಜಿಲ್ಲೆಯಾದ್ಯಂತ 930 ತಪಾಸಣಾ ಕಾರ್ಯನಡೆಸುವ ಮೂಲಕ ಯಾವುದೇ ಕೆಲಸಗಳಿಗೆ ಬಾಲಕರನ್ನು ಬಳಸಿಕೊಳ್ಳದಂತೆ ಎಚ್ಚರ ವಹಿ ಸಲಾಗಿದೆ. 2021-22ರಲ್ಲಿ 439 ತಪಾಸಣೆ ನಡೆಸಿ ದ್ದು, ಇದರಲ್ಲಿ 5 ಮಕ್ಕಳನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಲಾಗಿತ್ತು. ಹಾಗೆಯೇ 2022-23ರಲ್ಲಿ 659 ತಪಾಸಣೆ ನಡೆಸಿ 71 ಮಕ್ಕಳನ್ನು ರಕ್ಷಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 930 ತಪಾಸಣೆ ಮಾಡಿ 17 ಮಂದಿ ಬಾಲಕಾರ್ಮಿಕರನ್ನು
ರಕ್ಷಣೆ ಮಾಡಲಾಗಿದೆ.
ಸಹಾಯವಾಣಿಗೆ ಸಂಪರ್ಕಿಸಿ ಜಿಲ್ಲೆಯಲ್ಲಿ 14 ವರ್ಷ ಒಳ ಪಟ್ಟ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಯಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿ ಮೆಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಕಾರ್ಮಿಕರ ಸಹಾಯವಾಣಿ 155214 ಅಥವಾ ಮಕ್ಕಳ ಸಹಾಯವಾಣಿ-1098ಕ್ಕೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಇದರಿಂದ ಬಾಲ ಕಾರ್ಮಿಕರನ್ನು ರಕ್ಷಿಸಿ ಶಿಕ್ಷಣ ಕೊಡಿಸಲು ಅನುಕೂಲವಾಗಲಿದೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಬೇಕೆಂದು ನಿರಂತರ ತಪಾಸಣೆ ಕಾರ್ಯ ಹಾಗೂ ಎಲ್ಲೆಡೆ
ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಒಂದು ವೇಳೆ ಜಿಲ್ಲೆಯಲ್ಲಿ ಉದ್ದಿಮೆಗಳಿಗೆ, ಇತರೆ ಕೆಲಸಗಳಿಗೆ ಮಕ್ಕಳನ್ನು ಬಳಿಸಿಕೊಂಡಿದ್ದು ಕಂಡು ಬಂದಲ್ಲಿ ಕಾರ್ಮಿಕರ ಸಹಾಯವಾಣಿ 155214ಗೆ ಸಂಪರ್ಕಿಸಿ.
● ರಾಜೇಶ್ ಜಾಧವ್,
ಜಿಲ್ಲಾ ಕಾರ್ಮಿಕ ಅಧಿಕಾರಿ
●ಸತೀಶ್ ದೇಪುರ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.