ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟರು ಸಾಹಿತ್ಯ ಲೋಕದ ಹೆಮ್ಮೆ

Team Udayavani, Nov 12, 2020, 5:15 AM IST

nIRPAJE

“ಕನ್ನಡದ ಕಲ್ಹಣ’ ಎಂಬ ಬಿರುದಿನಿಂದಲೇ ಖ್ಯಾತಿ ಗಳಿಸಿದ ನೀರ್ಪಾಜೆ ಭೀಮ ಭಟ್ಟರು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನೀರ್ಪಾಜೆಯಲ್ಲಿ ಜನಿಸಿದರು.

ಬಂಟ್ವಾಳ: ಕಾಶ್ಮೀರದ ಸಂಸ್ಕೃತ ಕವಿ ಕಲ್ಹಣನ ರಾಜತರಂಗಿಣಿ ಎಂಬ ಮಹಾನ್‌ ಕಾವ್ಯವನ್ನು ಸಂಸ್ಕೃತದಿಂದ ಗದ್ಯರೂಪದಲ್ಲಿ ಕನ್ನಡಕ್ಕೆ ಅನುವಾದಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರಾದ ಸಾಹಿತ್ಯ ನೀರ್ಪಾಜೆ ಭೀಮ ಭಟ್ಟರು “ಕನ್ನಡದ ಕಲ್ಹಣ’ ಎಂಬ ಬಿರುದಿನಿಂದಲೇ ಖ್ಯಾತಿ ಗಳಿಸಿದ್ದಾರೆ. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನೀರ್ಪಾಜೆಯಲ್ಲಿ ಜನಿಸಿದ ಅವರು ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿಕೊಂಡಿದ್ದಾರೆ.

ಕನ್ನಡ, ಸಂಸ್ಕೃತ ಭಾಷೆಗಳ ವಿದ್ವಾಂಸರಾಗಿ ಖ್ಯಾತಿ ಗಳಿಸಿದ್ದ ನೀರ್ಪಾಜೆ ಅವರು 1934 ಎಪ್ರಿಲ್‌ 12ರಂದು ಜನಿಸಿದ್ದು, ಬಳಿಕ ಕಾಸರಗೋಡಿನ ಪೆರಡಾಲದ ನೀರ್ಚಾಲಿನ ಮಹಾಜನ ಸಂಸ್ಕೃತ ಪಾಠಶಾಲೆಯಲ್ಲಿ ಅಧ್ಯಯನ ಮಾಡಿ ಸಾಹಿತ್ಯ ಶಿರೋಮಣಿ ಪದವಿ ಪಡೆದರು.

ನೀರ್ಪಾಜೆಯವರ ಸಾಹಿತ್ಯ ಕೃಷಿ
ನೀರ್ಪಾಜೆ ಭೀಮ ಭಟ್ಟರು ವಿದ್ಯಾರ್ಥಿಯಾಗಿರುವಾಗಲೇ ಸಾಹಿತ್ಯ ಕೃಷಿ ಆರಂಭಿಸಿದ್ದು, ಕಾಶ್ಮೀರ ಸಂಧಾನ ಸಮುದ್ಯಮ ಎಂಬ ಕೃತಿ ರಚಿಸಿದ್ದರು. ಹೈದರಾಬಾದ್‌ ವಿಜಯಂ, ಗೋವಾ ಸ್ವತಂತ್ರಂ ಮುಂತಾದ ನಾಟಕಗಳನ್ನು ರಚಿಸಿದ್ದರು. ಮಾಲತಿ ಮಾಧವ, ಮಣ್ಣಿನ ಬಂಡಿ, ಮಾಳವಿಕಾಗ್ನಿ ಮಿತ್ರ, ಊರ್ವಶಿ ಪ್ರಮುಖ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು.

ಭಾರತದ ರಾಷ್ಟ್ರಪತಿಗಳಾಗಿದ್ದ ಡಾ| ಎಸ್‌.ರಾಧಾಕೃಷ್ಣನ್‌ ಅವರು ಸಂಪಾದಿಸಿದ ಭಾರತೀಯ ಕವಿತಾ-1955 ಸಂಪುಟದಲ್ಲಿ ನೀರ್ಪಾಜೆ ಭೀಮಭಟ್ಟರ ಕವಿತೆ ಸೇರ್ಪಡೆಯಾಗಿರುವುದು ಹೆಗ್ಗಳಿಕೆಯಾಗಿದೆ. ಪ್ರತಿಕೋದ್ಯಮದಲ್ಲೂ ಅನುಭವ ಹೊಂದಿದ್ದ ಅವರು ಹಲವು ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದರು.

ಚೌ ಚೌ, ಚಿತ್ರಾನ್ನ, ಶೂನ್ಯವೇಳೆ, ಸೋತು ಗೆದ್ದವರು, ನಾಮದ ಫಲ, ಹೆಂಡತಿ ಮತ್ತು ಪೆಟ್ಟು ಮುಂತಾದವು ಅವರ ಅಂಕಣ ಬರಹಗಳ ಸಂಕಲನ ಕೃತಿಗಳಾಗಿ ಮೂಡಿಬಂದಿವೆ. ಹಸ್ತ ಶುದ್ಧಿ, ರಸವತ್‌, ಮನನ, ಸಾಹಿತ್ಯ ಪ್ರಜ್ಞೆ, ಯುಗ ಪುರುಷ ಉಡುಪರು, ಕಾಳಿದಾಸ ಸಮೀಕ್ಷೆ ಮುಂತಾದ ಹಲವಾರು ಕೃತಿಗಳನ್ನು ನೀರ್ಪಾಜೆಯವರು ಬರೆದಿದ್ದಾರೆ.
ರಾಜಕೀಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿರುವ ಅವರು ಮಂಡಲ, ಗ್ರಾ.ಪಂ.ಅಧ್ಯಕ್ಷರಾಗಿ ದುಡಿದಿದ್ದಾರೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಭ್ಯುದಯ ಪ್ರಕಾಶನ‌ ಮೂಲಕ ಹಲವು ಕೃತಿಗಳನ್ನು ಪ್ರಕಟಿಸಿದ್ದು, 2002ರ ಡಿ. 12ರಂದು ಅವರು ಇಹಲೋಕವನ್ನು ತ್ಯಜಿಸಿದ್ದರು.

ಅಭಿಮಾನಿ ಬಳಗ ಸಕ್ರಿಯ
ಬಂಟ್ವಾಳ ತಾಲೂಕಿನಲ್ಲಿ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗವೊಂದಿದ್ದು, ಈ ಸಂಘಟನೆ ಕಳೆದ ಹಲವು ವರ್ಷಗಳಿಂದ ಸಕ್ರಿಯವಾಗಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದೆ. ವರ್ಷಕ್ಕೆ ಒಬ್ಬರಿಗೆ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುವ ಕಾರ್ಯವೂ ನಡೆಯುತ್ತಿದೆ.

ಸ್ಮಾರಕ ನಿರ್ಮಾಣವಾಗಲಿ
ಕನ್ನಡ ಸಾಹಿತ್ಯ ಲೋಕದಲ್ಲಿ ಅಪಾರ ಸಾಧನೆ ಮಾಡಿದ ನೀರ್ಪಾಜೆ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣವಾಗಿಲ್ಲ. ಹುಟ್ಟೂರು ಕನ್ಯಾನದ ರಸ್ತೆಯೊಂದಕ್ಕೆ ನೀರ್ಪಾಜೆ ಭೀಮ ಭಟ್ಟರ ಹೆಸರಿಡಲಾಗಿದೆ. ಹೀಗಾಗಿ ಸರಕಾರ, ಸಾಹಿತ್ಯ ಪ್ರೇಮಿಗಳು ಅಥವಾ ಸ್ಥಳೀಯಾಡಳಿತ ನೀರ್ಪಾಜೆಯವರ ಹೆಸರಿನಲ್ಲಿ ತಾಲೂಕು ಕೇಂದ್ರ ಅಥವಾ ಅವರ ಹುಟ್ಟೂರಿನಲ್ಲಿ ಸ್ಮಾರಕವೊಂದನ್ನು ನಿರ್ಮಿಸಲು ಮುಂದಾಗಬೇಕಿದೆ.

ನೀರ್ಪಾಜೆ ಭೀಮ ಭಟ್ಟರು

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.