ಕಾನೂನಿಗೆ ಯಾರೇ ತೊಡಕಾಗಿದ್ದರೂ ಮಟ್ಟ ಹಾಕಿ
ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರಗ ಜ್ಞಾನೇಂದ್ರ
Team Udayavani, Aug 15, 2021, 3:37 PM IST
ಬೆಂಗಳೂರು: ಕಾನೂನಿಗೆ ಯಾರೇ ತೊಡಕಾಗಿದ್ದರೂ ಅಂತಹವರನ್ನು ಬಿಡದೆ ಮಟ್ಟಹಾಕಬೇಕು. ಅಂತಹವರಿಂದ ಸಾರ್ವಜನಿಕರಿಗೆ ರಕ್ಷಣೆ ನೀಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಐಕ್ಯತೆ ಮತ್ತು
ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯ ಓಟ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾನೂನು ನಿಯಮ ಪಾಲನೆ ಉಲ್ಲಂಘಿಸಿ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವವರನ್ನು ಸೆದೆಬಡೆಯಬೇಕು. ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ, ರಾಜಿ ಮಾಡಿಕೊಳ್ಳದೆ ಕಾನೂನು ಎತ್ತಿ ಹಿಡಿದು ಬಡವರಿಗೆ ನ್ಯಾಯ ಒದಗಿಸಬೇಕು. ಆ ಮೂಲಕ ರಾಜ್ಯದಲ್ಲಿ ಶಾಂತಿ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸರಿಗೆ ಸಲಹೆ ನೀಡಿದರು. ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ
ಬೆಂಕಿ ಹಚ್ಚಿದ ಪ್ರಕರಣದಲ್ಲಿ 24 ಗಂಟೆಯೊಳಗೆ ಆರೋಪಿಗಳನ್ನುಬಂಧಿಸಿರುವುದು ರಾಜ್ಯ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುವುದನ್ನು ತೋರಿಸುತ್ತದೆ.
ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಹೊರತುಪಡಿಸಿ ಆರೋಪಿಗಳ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ದೊರೆತಿರಲಿಲ್ಲ. ಆದರೂ, ಸಣ್ಣ ಸುಳಿವಿಡಿದು ಇಡೀ ಪ್ರಕರಣ ಬೇದಿಸಿದ್ದಾರೆ. ಇದರಿಂದ ಯಾರೇ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡು ಎಲ್ಲೇ ಅಡಗಿ ಕುಳಿತರು ಮಟ್ಟ ಹಾಕದೇ ಬಿಡುವುದಿಲ್ಲ. ಅವರ ಹೆಡಮುರಿ ಕಟ್ಟುವುದು ನಿಶ್ಚಿತ ಎಂಬ ಸಂದೇಶ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಸಿಎಂಗೆ ಕಂಟಕ ಬಾರದಂತೆ ಲಲಿತಾ ತ್ರಿಪುರ ಸುಂದರಿ ಹೋಮ
ಆಫ್ರಿಕನ್ ಪ್ರಜೆಗಳ ಗಡಿಪಾರಿಗೆ ಕಾನೂನು ತೊಡಕು: ರಾಜ್ಯದಲ್ಲಿ ಆಫ್ರಿಕನ್ ಪ್ರಜೆಗಳ ಹಾವಳಿ ಹೆಚ್ಚಾಗಿದೆ. ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕಾನೂನು ಬಾಹಿರವಾಗಿ ಹಲವಾರು ಆಫ್ರಿಕನ್ ಪ್ರಜೆಗಳು ಬೆಂಗಳೂರು ಸೇರಿದಂತೆ ನಾನಾ ಕಡೆಗಳಲ್ಲಿ ವಾಸವಾಗಿದ್ದಾರೆ. ಇಂತಹವರನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆದರೆ, ಗಡಿಪಾರು ಮಾಡಲು ಕೆಲವು ಕಾನೂನು ತೊಡಕು ಉಂಟಾಗಿರುವುದರಿಂದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿ ನಡೆಸಲಾಗುತ್ತಿದೆ. ಶೀಘ್ರದಲ್ಲೇಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸಿವಿಲ್ ಸೇವೆಯಲ್ಲಿ ಅವಕಾಶ: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಾತನಾಡಿ, ಮುಂದಿನ
ದಿನಗಳಲ್ಲಿ ಪೊಲೀಸರ ನೇಮಕಾತಿಯಲ್ಲಿ ಕ್ರೀಡಾ ವಿಭಾಗಕ್ಕೆ ಶೇ.2ರಷ್ಟು ಕೋಟಾ ನೀಡಲಾಗುವುದು. ಜತೆಗೆ, ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸಿವಿಲ್ ಸೇವೆಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ಕ್ರೀಡಾ ಕೋಟಾದಲ್ಲೂ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ. ಸ್ಪೋರ್ಟ್ಸ್ ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಕೇಳಿಬಂದಿತ್ತು.ಈಗ ಶೇ.2ರಷ್ಟು ನೇಮಕಾತಿಯನ್ನು ನ್ಪೋರ್ಟ್ಸ್ ಕೋಟಾದಡಿ ಮಾಡುವಂತೆ ಕಾನೂನು ತರಲಾಗುತ್ತಿದೆ. ಇದು ಗೃಹ ಸಚಿವಾಲಯದ ಮಹತ್ವದ ನಿರ್ಧಾರವಾಗಿದೆ.10 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾ ಕೋಟಾದಡಿಯಲ್ಲಿ ಪೊಲೀಸ್ ನೇಮಕಾತಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. ಶೇ.10 ಮೀಸಲಾತಿಯಲ್ಲಿ, ಶೇ 2ರಷ್ಟು ಕ್ರೀಡಾ ಕೋಟಾ ಆಗಿರಲಿದೆ. ಈಗಾಗಲೇ ಇಲಾಖೆಯು ಎಲ್ಲ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು.
250 ಮಂದಿ ಪೊಲೀಸರು ಭಾಗಿ: ಕೋವಿಡ್ ಸೋಂಕು ತಡೆಗಟ್ಟಲು ಸಾರ್ವಜನಿಕರು ಲಸಿಕೆ ಪಡೆಯುವ ಬಗ್ಗೆ, ಸಾಮಾಜಿಕ ಮತ್ತು ಪರಿಸರ ಕಾಳಜಿ, ಮಾನಸಿಕ ಮತ್ತು ದೈಹಿಕ ಸದೃಢತೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೆಎಸ್‌ಆರ್‌ಪಿ ಯಿಂದ ಐಕ್ಯತೆ-ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯದ ಓಟ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ನಡೆದ ಓಟದಲ್ಲಿಕೆಎಸ್‌ಆರ್‌ಪಿ ಘಟಕದ ಎಡಿಜಿಪಿಯಿಂದ ಪೊಲೀಸ್ ಪೇದೆಯವರೆಗೆ 250 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಹಮ್ಮಿಕೊಂಡಿದ್ದ 10 ಕಿ.ಮಿ. ಓಟಕ್ಕೆ ಸಿಐಡಿ ಡಿಜಿಪಿ ಪವನ್ ಜೀತ್ ಸಿಂಗ್ ಸಂಧು ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.