ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
26ಕ್ಕೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
Team Udayavani, Nov 22, 2024, 2:05 PM IST
ಉದಯವಾಣಿ ಸಮಾಚಾರ
ಬೆಳ್ತಂಗಡಿ: ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳ ಪರ್ವದಲ್ಲಿ ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30ರವರೆಗೆ ಜರಗಲಿದೆ.
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ
ಕೆ.ಪ್ರತಾಪಸಿಂಹ ನಾಯಕ್, ಮಾಜಿ ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಊರ-ಪರವೂರಿನ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ನ.28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5.30ರಿಂದ 7 ಗಂಟೆಯವರೆಗೆ ನಾಗಸ್ವರ ವಾದನ, 7 ರಿಂದ 8ರವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.
ಸರ್ವಧರ್ಮ ಸಮ್ಮೇಳನ: ಅಮೃತವರ್ಷಿಣಿ ಸಭಾಭವನದಲ್ಲಿ ನ.29ರಂದು ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರೀ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬಳಿಕ ಸಂಶೋಧಕ ಡಾ. ಜಿ.ಬಿ.ಹರೀಶ್, ಡಾ. ಜೋಸೆಫ್ ಎನ್.ಎಂ., ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ 8.30ರಿಂದ ಭರತನಾಟ್ಯ ನೆರವೇರಲಿದೆ.
ಸಾಹಿತ್ಯ ಸಮ್ಮೇಳನ: ನ.30ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ. ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ಸಾಂಸ್ಕೃತಿಕ ಕಾರ್ಯ ಕ್ರಮದಂಗವಾಗಿ 8.30ರಿಂದ ಶ್ರೀ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ನೆರವೇರಲಿದೆ. ಪ್ರತಿದಿನ ಸಂಜೆ 6.30 ರಿಂದ ರಾತ್ರಿ 11ರವರೆಗೆ ವಸ್ತು ಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ-ಸಂಗೀತ ಹಬ್ಬವೇ ನೆರವೇರಲಿದೆ.
ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ
ನ.26ರಿಂದ ಡಿ.1ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉದ್ಘಾಟಿಸಲಿರುವರು. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300 ಕ್ಕೂ ಮಿಕ್ಕಿ ಮಳಿಗೆಗಳಿರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.