Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Team Udayavani, Nov 16, 2024, 6:12 PM IST
ದಾವಣಗೆರೆ: ಚನ್ನಗಿರಿ ತಾಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ ಇದಕ್ಕೆ ಸಹಕರಿಸಿದ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.
ಶಾಲಾ ಮಕ್ಕಳಿಗೆ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಷನ್ ವತಿಯಿಂದ ವಾರದ ಎಲ್ಲ ದಿನಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂದು ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತದೆ. ವಿತರಣೆ ಮಾಡಿದ ಬಗ್ಗೆ ಆಯಾ ದಿನದಂದು ಎಸ್‍ಎಟಿಎಸ್ ತಂತ್ರಾಂಶದಲ್ಲಿ ದಾಖಲು ಮಾಡಲಾಗುತ್ತದೆ. ನ.13 ರಂದು ಶಾಲೆಯಲ್ಲಿ ಭೌತಿಕವಾಗಿ 87 ಮಕ್ಕಳಿದ್ದು ಇದರಲ್ಲಿ 79 ಮೊಕ್ಕಳಿಗೆ ಮೊಟ್ಟೆ ವಿತರಣೆ ಮಾಡಿ ಉಳಿದ 8 ಮಕ್ಕಳಿಗೆ ಬಾಳೆಹಣ್ಣು ವಿತರಣೆ ಮಾಡಲಾಗಿರುತ್ತದೆ. ಆದರೆ ಎಸ್‍ಎಟಿಎಸ್ ತಂತ್ರಾಂಶದಲ್ಲಿ 104 ಮಕ್ಕಳಿರುತ್ತಾರೆ ಎಂದು ದಾಖಲು ಮಾಡಿರುವುದು ಕಂಡು ಬಂದಿದ್ದು ಮೊಟ್ಟೆ ವಿತರಣೆಯಲ್ಲಿ ಲೋಪವಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶಾಲೆಗೆ ಭೇಟಿ ನೀಡಿದಾಗ ಕಂಡುಬಂದಿತ್ತು.
ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ ಮೇರೆಗೆ ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
MUST WATCH
ಹೊಸ ಸೇರ್ಪಡೆ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.