ಕೋವಿಡ್ ಕೇರ್ ಸೆಂಟರ್ ತೆರೆಯಲು ವಿರೋಧ
Team Udayavani, May 29, 2021, 11:38 AM IST
ಹೊಸನಗರ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಪಟ್ಟಣದ ಹೃದಯ ಭಾಗದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 50 ಹಾಸಿಗೆಯ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತೆ ಸೀಮಾ ಕಿರಣ್ ಶೆರಾವೊ ನೇತೃತ್ವದಲ್ಲಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರನ್ನು ಭೇಟಿ ಮಾಡಿ, ಈಗಾಗಲೇ ಕೇರ್ ಸೆಂಟರ್‌ಗೆ ಗುರುತು ಮಾಡಿರುವ ವಿದ್ಯಾರ್ಥಿ ನಿಲಯ ಗಣಪತಿ ದೇವಸ್ಥಾನ ರಸ್ತೆ, ವಿದ್ಯಾಸಂಘ ರಂಗಮಂದಿರ, ಸರ್ಕಲ್ ಇನ್ಸಪೆಕ್ಟರ್ ಕಚೇರಿ ಸೇರಿದಂತೆ ರೆಸಿಡೆನ್ಸಿಯಲ್ ಇರುವ ಸ್ಥಳದಲ್ಲಿ ಇದ್ದು ಇಲ್ಲಿ ಕೇರ್ ಸೆಂಟರ್ ತೆರೆದರೆ ಅಪಾಯಕ್ಕೆ ಆಹ್ವಾನಿಸಿದಂತೆ ಎಂದು ಆರೋಪಿಸಿದ್ದಾರೆ.
ಸರ್ಕಾರ ನೀಡಿದ ಸೂಚನೆ ಮೇರೆಗೆ ಕೇರ್ ಸೆಂಟರ್ ತೆರೆಯುವುದು ಸ್ವಾಗತಾರ್ಹ. ಆದರೆ ಆರಂಭಿಸಲು ಉದ್ದೇಶಿಸಿರುವ ವಿದ್ಯಾರ್ಥಿ ನಿಲಯ ಸೂಕ್ತ ಆಯ್ಕೆಯಲ್ಲ.ಈ ಮಾರ್ಗದಲ್ಲಿ ಪ್ರತಿನಿತ್ಯ ಸಾರ್ವಜನಿಕರು ಅಗತ್ಯ ವಸ್ತುಗಳಿಗಾಗಿ ಓಡಾಡುತ್ತಾರೆ. ಅಲ್ಲದೆ ಈ ವಿದ್ಯಾರ್ಥಿ ನಿಲಯದ ತ್ಯಾಜ್ಯಹೊಟ್ಟು ಕೆರೆ ಸೇರುತ್ತದೆ. ಇಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ಮಾಡುವುದು ಸೂಕ್ತವಲ್ಲ ಎಂದು ಮನವಿ ಮಾಡಿದ್ದಾರೆ.
ಸ್ಥಳೀಯರಾದ ರಾಘವೇಂದ್ರ, ಬಾಬಣ್ಣ, ಪ್ರದೀಪ್ ಆಚಾರ್, ಅನಿಲ್ ಆಚಾರ್, ಸತೀಶ್, ಶ್ರೀಕಾಂತ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.