Arvind Kejriwal: ಕೇಂದ್ರ ಸರಕಾರ ದಿಲ್ಲಿಯಲ್ಲಿ ಏನೂ ಮಾಡಿಲ್ಲ
ದಿಲ್ಲಿ ಸರಕಾರವನ್ನು ತೆಗಳುವ ಕೆಲಸವನ್ನಷ್ಟೇ ಮಾಡಿದೆ ಮೋದಿ ಆರೋಪದ ಬೆನ್ನಲ್ಲೇ ಆಪ್ ಮುಖ್ಯಸ್ಥ ಟಾಂಗ್
Team Udayavani, Jan 3, 2025, 11:34 PM IST
ಹೊಸದಿಲ್ಲಿ: “ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ದಿಲ್ಲಿಯಲ್ಲಾಗಲೀ, ಇನ್ನಲ್ಲೇ ಆಗಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ’ ಎಂದು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿ ಕೇಜ್ರಿವಾಲ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದಿಲ್ಲಿಯಲ್ಲಿ ಶುಕ್ರವಾರ ಮಾತನಾಡಿದ ಪ್ರಧಾನಿ, ಆಪ್ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿರುವ ಕೇಜ್ರಿವಾಲ್, “ದಿಲ್ಲಿಯಲ್ಲಿ ಮೋದಿ ಅವರು 43 ನಿಮಿಷಗಳ ಕಾಲ ಮಾತನಾಡಿದರು. ಇದರಲ್ಲಿ 39 ನಿಮಿಷಗಳ ಕಾಲ ಚುನಾಯಿತ ಸರಕಾರವನ್ನು ತೆಗಳಲು ಬಳಸಿಕೊಂಡರು. ಕಳೆದ 10 ವರ್ಷದಲ್ಲಿ ಕೇಂದ್ರ ಸರಕಾರ ಜಾರಿ ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಪಟ್ಟಿ ಮಾಡಲು ಕೇವಲ ಒಂದೆರಡು ಗಂಟೆಗಳು ಸಾಕು’ ಎಂದು ಹೇಳಿದರು.
ಬಡವರ ವಿರೋಧಿ: ದಿಲ್ಲಿಯಲ್ಲಿರುವ ಸ್ಲಮ್ಗಳನ್ನು ನಾಶ ಮಾಡುವ ಮೂಲಕ ಲಕ್ಷಾಂತರ ಜನರ ಬದುಕನ್ನು ಬಿಜೆಪಿ ಸರಕಾರ ಬೀದಿಗೆ ತಂದಿದೆ. ಈ ಮೂಲಕ ತಾನು ಬಡವರ ವಿರೋಧಿ ಎಂಬುದನ್ನು ಮತ್ತೂಮ್ಮೆ ಸಾಬೀತು ಪಡಿಸಿದೆ ಎಂದಿದ್ದಾರೆ.
10 ಲಕ್ಷದ ಸೂಟ್ ಬಳಸಿ ಕೇಜ್ರಿ ಟಾಂಗ್
ಪ್ರಧಾನಿ 10 ಲಕ್ಷ ರೂ.ಗಳ ಸೂಟ್ ಹಾಕಿಕೊಳ್ಳುತ್ತಾರೆ. ಆದರೆ ಶೀಶ್ ಮಹಲ್ ಬಗ್ಗೆ ಮಾತನಾಡುತ್ತಾರೆ ಎಂದು ಪ್ರಧಾನಿ ಮೋದಿ ಅವರಿಗೆ ಅರವಿಂದ ಕೇಜ್ರಿವಾಲ್ ಅವರು ಟಾಂಗ್ ನೀಡಿದ್ದಾರೆ. ಕೇಜ್ರಿವಾಲ್ ತಮ್ಮ ನಿವಾಸದ ನವೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿದ್ದಾರೆ ಮೋದಿ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.