Cauvery Dispute ಮಂಡ್ಯ, ರಾಮನಗರದಲ್ಲಿ ಭುಗಿಲೆದ್ದ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ರಾಜ್ಯ ಸರಕಾರದ ಕ್ರಮಕ್ಕೆ ರೈತ ಸಮುದಾಯದಿಂದ ಆಕ್ರೋಶ
Team Udayavani, Aug 21, 2023, 10:56 PM IST
ಮಂಡ್ಯ/ರಾಮನಗರ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ, ರೈತಸಂಘ ಹಾಗೂ ವಿವಿಧ ಕನ್ನಡ ಪರ ಸಂಘ ಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಒಂದು ಗಂಟೆ ಪ್ರತಿಭಟನೆ ನಡೆಸಿದರು. ಕಿವಿ ಮೇಲೆ ಹೂವಿಟ್ಟುಕೊಂಡು, ಹುರುಳಿ ಕಾಳು ಪ್ರದರ್ಶನ ಮಾಡುವ ಮೂಲಕ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಕಾರ್ಯಕರ್ತರು ಜೆ.ಸಿ.ವೃತ್ತದಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಬೆಂಕಿ ನಂದಿಸಲು ಮುಂದಾದಾಗ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು. ಸಂಸದೆ ಸುಮಲತಾ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣಗೌಡ, ಪಿ.ಸಿ.ಮೋಹನ್, ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಸಹಿತ ಹಲವರು ಪಾಲ್ಗೊಂಡಿದ್ದರು.
ಮದ್ದೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಶ್ರೀರಂಗಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಉರುಳು ಸೇವೆ ಮಾಡಿದರು. ರಾಮನಗರದಲ್ಲೂ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾವೇರಿ ಕ್ರೆಡಿಟ್ ಸಂಸದರೇ ತೆಗೆದುಕೊಳ್ಳಲಿ
ಮಂಡ್ಯ: ಚುನಾವಣೆ ಬರುತ್ತಿದೆ ಎಂದು ಸಂಸದೆ ಸುಮಲತಾ ಹೋರಾಟ ಮಾಡುತ್ತಿದ್ದಾರೆ. ಅವರು ಈ ಹಿಂದೆ ಯಾವತ್ತಾದರೂ ಪ್ರತಿಭಟನೆಗೆ ಬಂದಿದ್ದರಾ? ಚುನಾವಣೆಗಾಗಿ ಬಂದಿದ್ದಾರೆ ಅಷ್ಟೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ ವ್ಯಂಗ್ಯವಾಡಿದರು.
ಸುದ್ದಿಗಾರರ ಜತೆ ಮಾತನಾಡಿ, ಅವರು ಕೇಳಬೇಕಾದದ್ದು ಕೇಂದ್ರ ಸರಕಾರವನ್ನೇ ಹೊರತು ನಮ್ಮನ್ನಲ್ಲ. ಮಂಡ್ಯ ಜಿಲ್ಲೆಯ ಪರವಾಗಿ 27 ಜನರ ನಿಯೋಗ ಕರೆದುಕೊಂಡು ಹೋಗಿ ಧ್ವನಿ ಎತ್ತಲಿ. ಈಗಲಾದರೂ ಜವಾಬ್ದಾರಿ ನಿರ್ವಹಿಸಲಿ. ನಮ್ಮ ರಾಜ್ಯದ ಪರವಾಗಿ ಕೇಂದ್ರದ ಮೇಲೆ ಒತ್ತಡ ಹೇರಲಿ. ಅದರ ಕ್ರೆಡಿಟ್ ಅನ್ನು ಅವರೇ ತೆಗೆದುಕೊಳ್ಳಲಿ, ನಮಗೆ ಬೇಡ ಎಂದರು.
ಬಿಜೆಪಿ ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿದೆ
ಮೈಸೂರು: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ನ್ಯಾಯಾಲಯದ ನಿರ್ಧಾರದಂತೆ ನೀರು ಬಿಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಹಿತಾಸಕ್ತಿಯಿಂದ ಯಾವುದೇ ಸರಕಾರ ಕೆಲಸ ಮಾಡುವುದಿಲ್ಲ. ನಮ್ಮ ಸರಕಾರವೂ ರಾಜ್ಯದ ರೈತರ ಹಿತದೃಷ್ಟಿಯಿಂದಲೇ ಕೆಲಸ ಮಾಡಲಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಬಿಜೆಪಿ ಅಧಿಕಾರದಲ್ಲಿ¨ªಾಗಲೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಹೀಗಾಗಿ ಬಿಜೆಪಿ ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣೆ ಮಂಡಳಿ ಹಾಗೂ ನ್ಯಾಯಾಲಯದ ನಿರ್ದೇಶನದಂತೆ ರಾಜ್ಯ ಸರಕಾರ ನಡೆದುಕೊಳ್ಳುತ್ತಿದೆ. ಮಳೆಯಾಗದ ಸಂದರ್ಭದಲ್ಲಿ ಸಂಕಷ್ಟ ಸೂತ್ರದಡಿ ನೀರು ಹಂಚಿಕೆ ಮಾಡಿಕೊಳ್ಳಬೇಕಿದೆ. ಸಂಕಷ್ಟ ಸೂತ್ರದಂತೆಯೇ ರಾಜ್ಯ ಸರಕಾರ ನಡೆದುಕೊಳ್ಳುತ್ತಿದೆ. ಆ.23ರಂದು ನಡೆಯುವ ಸರ್ವ ಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ನಮ್ಮ ರೈತರಿಗೆ ಅನ್ಯಾಯ ಆಗಿದೆ. ಕಾವೇರಿ ನಮ್ಮ ತಾಯಿ ಇದ್ದಂತೆ. ಇದನ್ನು ಯಾರೂ ರಾಜಕೀಯ ದೃಷ್ಟಿಯಿಂದ ನೋಡಬಾರದು. ಕೇಂದ್ರ ಸರಕಾರ ಇದರಲ್ಲಿ ಮಧ್ಯಪ್ರವೇಶಿಸುತ್ತಿಲ್ಲ. ರಾಜ್ಯ ಸರಕಾರ ಸುಳ್ಳು ಹೇಳುತ್ತಿದ್ದು, ಜನರ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ.
-ಸುಮಲತಾ ಅಂಬರೀಷ್, ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.