ವಿರಾಟ್ ಕೊಹ್ಲಿ ಬ್ಯಾಟಿಂಗ್‌ನತ್ತ ದ್ರಾವಿಡ್ ವಿಶೇಷ ಗಮನ
Team Udayavani, Dec 21, 2021, 9:30 PM IST
ಜೊಹಾನ್ಸ್‌ಬರ್ಗ್: ರವಿವಾರ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ.
ಇದರ ನಡುವೆ ಕಳೆದ ಎರಡು ವರ್ಷಗಳಿಂದ ಶತಕದ ಬರ ಎದುರಿಸುತ್ತಿರುವ ನಾಯಕ ವಿರಾಟ್ ಕೊಹ್ಲಿ ಈ ಬಾರಿಯಾದರೂ ಮೂರಂಕಿಯ ಗಡಿ ತಲುಪಬಹುದೇ ಎಂಬ ಪ್ರಶ್ನೆ ಹಾಗೂ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.
2019ರ ನವೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಅಹರ್ನಿಶಿ ಟೆಸ್ಟ್‌ನಲ್ಲಿ ಕೊಹ್ಲಿ ಕೊನೆಯ ಸಲ ಶತಕ ಸಿಡಿಸಿದ್ದರು.
ಸದ್ಯ ಕೊಹ್ಲಿ ಅವರ ಬ್ಯಾಟಿಂಗ್‌ನತ್ತ ಕೋಚ್ ರಾಹುಲ್ ದ್ರಾವಿಡ್ ವಿಶೇಷ ಗಮನಹರಿಸಿದ್ದಾರೆ. ಅಭ್ಯಾಸದ ವೇಳೆ ಕೊಹ್ಲಿ ಜತೆಗೆ ದ್ರಾವಿಡ್ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಕೊಹ್ಲಿ ಅವರ ಬ್ಯಾಟಿಂಗ್ ಲೋಪಗಳನ್ನು ತಿದ್ದುವ ಮೂಲಕ ಹೊಸ ಹೊಳಪು ನೀಡುವತ್ತ ಗಮನ ಹರಿಸಿ ತರಬೇತಿ ನೀಡುತ್ತಿದ್ದಾರೆ.
ಟೆಸ್ಟ್‌ನಿಂದ ಹೊರಬಿದ್ದ ನೋರ್ಜೆ
ದಕ್ಷಿಣ ಆಫ್ರಿಕಾದ ಪ್ರಮುಖ ವೇಗಿ ಅನ್ರಿಚ್ ನೋರ್ಜೆ ಗಾಯದ ಸಮಸ್ಯೆಯಿಂದ ಭಾರತ ವಿರುದ್ಧದ ತವರಿನ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ.
“ವೇಗಿ ನೋರ್ಜೆ ಕಳೆದ ಟಿ20 ವಿಶ್ವಕಪ್ ವೇಳೆ ಗಾಯಕ್ಕೆ ಒಳಗಾಗಿದ್ದರು. ಇನ್ನೂ ಅವರು ಸಂಪೂರ್ಣ ಚೇತರಿಕೆ ಕಂಡಿಲ್ಲ. ಹೀಗಾಗಿ ಅವರು ಭಾರತದೆದುರಿನ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ಆಯ್ಕೆ ಮಾಡುವುದಿಲ್ಲ’ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.