ನೆಲೋಗಿ ಗ್ರಾಪಂದಿಂದ ಕಳಪೆ ಕಾಮಗಾರಿ: ತನಿಖೆಗೆ ಆಗ್ರಹ
Team Udayavani, Mar 30, 2022, 11:40 AM IST
ಜೇವರ್ಗಿ: ತಾಲೂಕಿನ ನೆಲೋಗಿ ಗ್ರಾಮ ಪಂಚಾಯಿತಿಯ 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ನಡೆಯುತ್ತಿರುವ ಕಾಮಗಾರಿ ಕಳಪೆಯಿಂದ ಕೂಡಿದ್ದು, ತನಿಖೆಗೆ ಒತ್ತಾಯಿಸಿ ಶ್ರೀರಾಮಸೇನೆ ಸಂಘಟನೆ ಹಾಗೂ ರೈತ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.
14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ನಡೆಯುತ್ತಿರುವ ಸಿಸಿ ರಸ್ತೆ, ಚರಂಡಿ, ಬ್ಲೀಚಿಂಗ್ ಪೌಡರ್, ಫರ್ನಿಚರ್ ವರ್ಕ್, ಪಂಚಾಯಿತಿಗೆ ಪೀಠೊಪಕರಣಗಳ ಖರೀದಿ ಹಾಗೂ ಇನ್ನಿತರ ಅನೇಕ ಕಾಮಗಾರಿಗಳು ಕಳಪೆಯಾಗಿವೆ. ಇದಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನೆಲೋಗಿ ಪಿಡಿಒಗೆ ದಾಖಲೆ ಸಮೇತ ದೂರು ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರ ಜತೆ ಶಾಮೀಲಾಗಿರುವ ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ತಾಪಂ ಇಒಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಸಂಘಟನೆ ಗ್ರಾಮ ಘಟಕದ ಅಧ್ಯಕ್ಷ ಭಗವಂತ್ರಾಯ ಗಾಣಿಗೇರ, ರೈತ ಮುಖಂಡ ದೇವು ಮುದ್ದಾ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.