ಪ್ರತಿಭಟನೆಯಲ್ಲಿ ಕಲ್ಲು ತೂರುವವರು ರೈತರಲ್ಲ.. ಅನ್ಯಾಯ ಮಾಡುವವರನ್ನು ತಡೆಯಲಾಗುತ್ತಿದೆ: ಜೋಶಿ
Team Udayavani, Feb 14, 2024, 2:28 PM IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸಲು ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೃಷಿ ಸಚಿವ ಮುಂಡಾ ಅವರು ರೈತರ ಸಂಘಟನೆ ಜೊತೆ ಮಾತನಾಡಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದು, ನಮ್ಮ ಸರ್ಕಾರ ಸಹಾನಭೂತಿಯಿಂದ ಆ ಬಗ್ಗೆ ಪರಿಶೀಲಿಸುತ್ತಿದೆ ಎಂದರು.
ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ಅವರೊಂದಿಗೆ ನಾವು ಸಹಾನುಭೂತಿಯಿಂದ ನಡೆದುಕೊಳ್ಳುತ್ತಿದ್ದೇವೆ ಎಂದರು.
ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಈ ಬಾರಿಯು ನನ್ನ ಗೆಲುವು ಖಚಿತ. ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗ ಮಾತನಾಡುವುದು ಕೇವಲ ಉಹಾಪೋಹ ಅಷ್ಟೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೆಯುತ್ತಿತದೆ. ಅದೆಲ್ಲವೂ ಅಪೂರ್ಣ ಆಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು.
ಸಿದ್ದರಾಮಯ್ಯ ಸುಳ್ಳು ಹೇಳುವುದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಅವರೊಬ್ಬ ಸಿದ್ದರಾಮಯ್ಯ ಅಲ್ಲ ಸುಳ್ಳು ರಾಮಯ್ಯ ಎಂದು ಕುಟುಕಿದರು.
ಅವರು ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ನಾವು ಒಂದೇ ಒಂದು ರೂಪಾಯಿ ಜಿಎಸ್‌ಟಿ ಹಣ ಕೊಡುವುದು ಬಾಕಿ ಇಲ್ಲ ಎಂದರು.
ಇದನ್ನೂ ಓದಿ: Tragic: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿ; 10 ವರ್ಷದ ಬಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.