Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Team Udayavani, Jan 10, 2025, 11:42 PM IST
ಚೆನ್ನೈ: ಮುಂದಿನ 2 ವರ್ಷಗಳಲ್ಲಿ ಅಮೃತ್ ಭಾರತ್ ಎಕ್ಸ್ಪ್ರೆಸ್ನ 50 ರೈಲುಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದಾರೆ. ಅವುಗಳಲ್ಲಿ ಆಧುನಿಕ ಶೌಚಾಲಯ, ತುರ್ತು ಬ್ರೇಕಿಂಗ್ ವ್ಯವಸ್ಥೆ ಸೇರಿ 12 ಪ್ರಮುಖ ಮಾರ್ಪಾಟುಗಳನ್ನು ಮಾಡಲಿದೆ ಎಂದು ಹೇಳಿದ್ದಾರೆ. ಚೆನ್ನೈನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಆರಾಮದಾಯಕ ಪ್ರಯಾಣ ಕೈಗೊಳ್ಳಲು ಸಹಾಯವಾಗಲು ಈ ರೈಲುಗಳನ್ನು ಆರಂಭಿಸಲಾಯಿತು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.