ದಾರಿ ಕಾಣದೇ ಹೆದ್ದಾರಿಯಲ್ಲೇ ನಿಂತ ಕೊಚ್ಚೆ ನೀರು!

Team Udayavani, Jan 11, 2022, 9:47 PM IST

ಯಗ್ದಸಡೆರತಗವ

ರಾಯಚೂರು: ತಾಲೂಕು ಕೇಂದ್ರವಾಗಬೇಕು ಎಂಬ ಮಹತ್ವದ ಬೇಡಿಕೆಯುಳ್ಳ ಹೋಬಳಿ ಕೇಂದ್ರ ಗಬ್ಬೂರಿನಲ್ಲಿ ಸಮಸ್ಯೆಯೊಂದು ಬಗೆ ಹರಿಯದೆ ಉಳಿದಿದೆ. ರಾಯಚೂರು-ಕಲಬುರಗಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯಲ್ಲೇ ಚರಂಡಿ ನೀರು ಶೇಖರಣೆಯಾಗುತ್ತಿದ್ದು, ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದೆ.

ದೇವದುರ್ಗ ಕ್ಷೇತ್ರಕ್ಕೆ ಒಳಪಡುವ ಈ ಊರಿನ ಸಮಸ್ಯೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಮೇಲ್ನೋಟಕ್ಕೆ ಇದು ಸಂಪೂರ್ಣ ಅವೈಜ್ಞಾನಿಕ ಕಾಮಗಾರಿಯಿಂದಾದ ಸಮಸ್ಯೆ. ಗ್ರಾಪಂ ಕೇಂದ್ರವಾಗಿರುವ ಈ ಊರಿನಲ್ಲಿ ಸಮಸ್ಯೆಯೊಂದು ತಿಂಗಳಾನುಗಟ್ಟಲೇ ಜೀವಂತವಾಗಿರುವುದು ವಿಪರ್ಯಾಸ. ಇದು ರಾಜ್ಯ ಹೆದ್ದಾರಿಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಸಮಸ್ಯೆ ತೀವ್ರತೆ ಹೆಚ್ಚಾಗುತ್ತಿದೆ. ಏನಿದು ಸಮಸ್ಯೆ?: ಸುಮಾರು 15 ವರ್ಷಗಳ ಹಿಂದೆ ಇಲ್ಲಿ ಚರಂಡಿ ನಿರ್ಮಿಸಲಾಗಿತ್ತು.

ಆಗ ಈ ಊರು ನಿರೀಕ್ಷಿತ ಮಟ್ಟದಲ್ಲಿ ಬೆಳೆದಿರಲಿಲ್ಲ. ಈಗ ತಾಲೂಕು ಕೇಂದ್ರವಾಗುವ ಮಟ್ಟಿಗೆ ಬೆಳೆದಿದ್ದು, ಜನಸಂಖ್ಯೆ, ಗ್ರಾಮದ ವಿಸ್ತಾರ ಕೂಡ ಹೆಚ್ಚಾಗಿದೆ. ಖಾಸಗಿಯವರ ಜಮೀನಿಗೆ ಚರಂಡಿ ಕಾಮಗಾರಿ ಕೊನೆಗಾಣಿಸಲಾಗಿತ್ತು. ಆದರೆ, ಈಗ ಆ ಜಮೀನಿನ ಮಾಲೀಕರು ಚರಂಡಿ ನೀರು ಹೊಲಕ್ಕೆ ಹರಿಸದಂತೆ ಆಕ್ಷೇಪ ವ್ಯಕ್ತಪಡಿಸಿದ್ದು, ಅಡ್ಡಗಟ್ಟಿದ್ದಾರೆ. ಬರೀ ಮಳೆ ನೀರಾದರೆ ಜಮೀನಿಗೆ ಹರಿಸಲು ಅಭ್ಯಂತರವಿಲ್ಲ. ಆದರೆ, ಕೊಚ್ಚೆ ನೀರು ಜಮೀನಿಗೆ ಬಿಟ್ಟುಕೊಳ್ಳುವುದು ಹೇಗೆ ಎಂಬುದು ಜಮೀನಿನ ಮಾಲೀಕರ ಆಕ್ಷೇಪ.

ಅಲ್ಲದೇ, ಇದೇ ಸ್ಥಳದಲ್ಲೇ ಕಾಲುವೆ ಹಾದು ಹೋಗಿದ್ದು, ಕಾಲುವೆಗೆ ಹರಿಸಿದರೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೀಘ್ರ ಇತ್ಯರ್ಥಗೊಳ್ಳಬೇಕಿದೆ: ಸಮಸ್ಯೆ ದಿನೇ-ದಿನೇ ಜಟಿಲಗೊಳ್ಳುತ್ತ ಸಾಗುತ್ತಿದೆ. ಗ್ರಾಮಸ್ಥರು ಈ ಸಮಸ್ಯೆ ಬಗ್ಗೆ ಈಗಾಗಲೇ ಸಂಬಂಧಿ ಸಿದ ಇಲಾಖೆಗಳ ಅ ಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿ ಕಾರಿಗಳು ಕೂಡ ಸ್ಥಳ ಪರಿಶೀಲಿಸಿದ್ದು, ಮುಂದಿನ ಕ್ರಮಗಳ ಭರವಸೆ ನೀಡಿದ್ದಾರೆ. ಆದರೆ, ತಿಂಗಳುಗಳೇ ಕಳೆದರೂ ಯಾವೊಂದು ಬೆಳವಣಿಗೆ ಕಂಡು ಬರುತ್ತಿಲ್ಲ.

ಈ ರಸ್ತೆ ಮುಖ್ಯ ವಾಣಿಜ್ಯಕ ತಾಣವಾಗಿದ್ದು, ಹೋಟೆಲ್‌ಗ‌ಳು, ವಾಣಿಜ್ಯ ಮಳಿಗೆಗಳು, ಬೃಹತ್‌ ದೇವಸ್ಥಾನ, ಮನೆಗಳ ಮಾಲೀಕರು ಇದೇ ಚರಂಡಿಗೆ ನೀರು ಹರಿಸುತ್ತಿದ್ದಾರೆ. ಎಲ್ಲ ನೀರು ರಸ್ತೆಯಲ್ಲೇ ನಿಂತ ಕಾರಣ ಫುಟಪಾತ್‌ ಕೂಡ ಮುಳುಗಿ ಓಡಾಡುವುದು ಕಷ್ಟವಾಗುತ್ತಿದೆ. ಕೊಚ್ಚೆ ನೀರಿನಲ್ಲಿ ಜನ ವ್ಯಾಪಾರ ಮಾಡಲು ಬಾರದ ಕಾರಣ ವರ್ತಕರಿಗೆ ನಷ್ಟವಾಗುತ್ತಿದೆ. ಹೆದ್ದಾರಿಯೆಲ್ಲ ಹಾಳಾಗಿ ಹೋಗಿದೆ. ಈ ಮಾರ್ಗದಿಂದ 3-4 ಕಿ.ಮೀ. ದೂರದಲ್ಲಿ ಹಳ್ಳ ಹರಿಯುತ್ತಿದ್ದು, ಅಲ್ಲಿಗೆ ಸಂಪರ್ಕ ಕಲ್ಪಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ಅದು ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆಯೋ ನೊಡಬೇಕಿದೆ.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.